ಶಾಮನೂರು ಶಿವಶಂಕರಪ್ಪಗೆ ಡಿಸಿಎಂ ಸ್ಥಾನ ನೀಡಿ: ವೀರಶೈವ ಮಹಾಸಭಾ

ಬೆಂಗಳೂರು, ಮೇ 20: ಕಾಂಗ್ರೆಸ್‌ನ ಹಿರಿಯ ಮುಖಂಡ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.

ಈ ಕುರಿತು ಅಖಿಲ ಭಾರತ ವೀರಶೈವ ಮಹಾಸಭಾ ಪತ್ರ ಬರೆದಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್‌ ಶಾಸಕರಲ್ಲಿ ಬೇರೆ ಸಮುದಾಯಗಳಿಗಿಂತಲೂ ಹೆಚ್ಚು ಜನ ವೀರಶೈವ-ಲಿಂಗಾಯತ ಸಮುದಾಯದ ಶಾಸಕರು ಗೆದ್ದಿದ್ದು, ನಮ್ಮ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಅವರಿಗೆ ಉಪ ಮುಖ್ಯಮಂತ್ರಿಸ ಸ್ಥಾನ ಕೊಡಬೇಕು ಎಂದು ಒತ್ತಾಯಿಸಲಾಗಿದೆ.

Veerashiwa Mahasabha demand to give DCM post to Shamanur Shivashankarappa

ಹಿಂದಿನಿಂದಲೂ ವೀರಶೈವ ಮಹಾಸಭಾ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾ ಬಂದಿದ್ದು, ಕಾಂಗ್ರೆಸ್‌ನಿಂದ ವೀರಶೈವ-ಲಿಂಗಾಯತ ಸಮುದಾಯಕ್ಕೆ ಸೇರಿದ 17 ಜನ ಶಾಸಕರನ್ನು ಗೆಲ್ಲಿಸಿದ್ದೇವೆ ಹಾಗಾಗಿ ನಮ್ಮ ನಮವಿಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಾಸಭಾ ಪತ್ರದಲ್ಲಿ ಹೇಳಿದೆ.

Veerashiwa Mahasabha demand to give DCM post to Shamanur Shivashankarappa

ಶಾಮನೂರು ಶಿವಶಂಕರಪ್ಪ ಅವರಿಗೆ ಉಪಮುಖ್ಯಮಂತ್ರಿ ಸ್ಥಾನದ ಜೊತೆಗೆ ಕಾಂಗ್ರೆಸ್-ಜೆಡಿಎಸ್ ಪಕ್ಷದಲ್ಲಿನ ವೀರಶೈವ-ಲಿಂಗಾಯತ ಶಾಸಕರ ಪೈಕಿ ಕನಿಷ್ಠ 5 ಜನಕ್ಕಾದರೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+