• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಬ್ಬನ್‌ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧ: ಸಚಿವ ನಾರಾಯಣಗೌಡ ಮನವಿ

|

ಬೆಂಗಳೂರು, ಆಗಸ್ಟ್ 25: ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಬೇಕು ಎನ್ನುವ ಒತ್ತಡ ಎಲ್ಲೆಡೆಯಿಂದ ಕೇಳಿಬರುತ್ತಿದೆ.

   KL Rahulಗೆ ಯಾವ ಕ್ರಮಾಂಕದಲ್ಲಿ ಹಾಗು ಯಾವ ತಂಡಕ್ಕೆ ಆಡೋದು ಇಷ್ಟ | Oneindia Kannada

   ವಾಹನ ಸಂಚಾರ ಸ್ಥಗಿತಗೊಳಿಸಬೇಕೆ ಬೇಡವೇ ಎಂಬ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಮಂಗಳವಾರ ತೋಟಗಾರಿಕೆ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿ, ಅಭಿಪ್ರಾಯ ಪಡೆದುಕೊಂಡಿದ್ದಾರೆ.

   ಕಬ್ಬನ್ ಪಾರ್ಕ್‌ನಲ್ಲಿ ವಾಹನ ಬೇಡ; ಸರ್ಕಾರಕ್ಕೆ ಪತ್ರ

   ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ಸಹ ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧಿಸಬೇಕೆಂಬ ನಿರ್ಣಯವನ್ನು ಜೂನ್ 30 ರಂದು ನಡೆದ ಸಭೆಯಲ್ಲಿ ತೆಗೆದುಕೊಂಡಿದೆ. ಜೂನ್ 3 ರಂದು ನಡೆದ ಭರವಸೆಗಳ ಸಮಿತಿ ಸಭೆಯಲ್ಲೂ ವಾಹನ ಸಂಚಾರ ನಿಷೇಧಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

   ಈ ಹಿಂದೆ ಪ್ರತಿ ಭಾನುವಾರ, ಸರ್ಕಾರಿ ರಜಾದಿನಗಳಂದು ಕಬ್ಬನ್ ಪಾರ್ಕ್‍ನಲ್ಲಿ ವಾಹನ ಸಂಚಾರ ಸ್ಥಗಿತ ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಡಾ.ನಾರಾಯಣ ಗೌಡ ಅವರು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ವಾಹನ ಸಂಚಾರ ನಿಷೇಧಿಸುವ ನಿರ್ಣಯ ತೆಗೆದುಕೊಂಡು ಅಂತಿಮ ತೀರ್ಮಾನಕ್ಕೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

   ರಾಜಧಾನಿಯ ಹೃದಯ ಭಾಗದಲ್ಲಿರುವ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ ಎಂದು ಪರಿಸರ ಪ್ರೇಮಿಗಳಿಂದ ಒತ್ತಾಯ ಬಂದಿತ್ತು. ಅಲ್ಲದೆ ಕಬ್ಬನ್ ಉದ್ಯಾನ ಕರ್ನಾಟಕ ಸರ್ಕಾರಿ ಉದ್ಯಾನಗಳ (ಸಂರಕ್ಷಣೆ) ಅಧಿನಿಯಮ 1975 ರ ವ್ಯಾಪ್ತಿಗೆ ಒಳಪಟ್ಟಿದೆ. ಹೀಗಾಗಿ ವಾಹನ ಸಂಚಾರ ನಿಷೇಧಿಸುವುದು ಅವಶ್ಯಕವಾಗಿದೆ.

   ಜೊತೆಗೆ ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 8 ಗಂಟೆವರೆಗೆ ವಾಹನ ಸಂಚಾರ ನಿಷೇಧಿಸಲಾಗಿತ್ತು. ಕಬ್ಬನ್ ಪಾರ್ಕಿಗೆ ಪ್ರತಿ ದಿನ ಬೆಳಿಗ್ಗೆ ಹಾಗೂ ಸಾಯಂಕಾಲ ವಾಯು ವಿಹಾರಕ್ಕಾಗಿ 4 ರಿಂದ 5 ಸಾವಿರ ಜನ ಬರುತ್ತಾರೆ.

   5 ರಿಂದ 6 ಸಾವಿರ ಜನ ಪ್ರತಿ ನಿತ್ಯ ಪಾರ್ಕ್ ವೀಕ್ಷಣೆಗಾಗಿ ಬರುತ್ತಿದ್ದಾರೆ. ಇಂತಹ ಸ್ಥಳವನ್ನ ಪರಿಸರ ಸ್ನೇಹಿಯಾಗಿ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಲಾಲ್‍ಬಾಗ್‍ನಂತೆ ಕಬ್ಬನ್ ಪಾರ್ಕ್‍ನಲ್ಲೂ ಪಕ್ಷಿಗಳ ಕಲರವ ಹೆಚ್ಚಾಗಬೇಕೆಂದರೆ ಸ್ವಚ್ಚ ವಾತಾವರಣ ನಿರ್ಮಿಸಲೇಬೇಕಿದೆ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

   ಈ ಎಲ್ಲ ವಿಚಾರವನ್ನ ಚರ್ಚಿಸಿದ ಸಚಿವ ನಾರಾಯಣ ಗೌಡ ಅವರು ಪಾರ್ಕ್ ಅಭಿವೃದ್ಧಿಗೆ ಇದು ಪೂರಕ ಎಂಬುದನ್ನು ಮನಗಂಡು, ಸುಮಾರು 197 ಎಕರೆ ಪ್ರದೇಶದಲ್ಲಿರುವ ಕಬ್ಬನ್ ಪಾರ್ಕ್ ವಾಹನ ಸಂಚಾರ ಮುಕ್ತವಾಗುವುದು ಅನಿವಾರ್ಯ ಎಂಬ ಅಭಿಪ್ರಾಯಕ್ಕೆ ಬಂದಿದ್ದಾರೆ.

   ಹೀಗಾಗಿ ಸಚಿವರು ಈ ಎಲ್ಲ ಅಂಶಗಳನ್ನ ಸೇರಿಸಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದು, ಸಿಎಂ ಶೀಘ್ರದಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದಾರೆ.

   English summary
   Minister Narayana Gowda Appeals Karnataka Chief minister BS Yediyurappa regarding Vehicle Ban in Cubbon Park.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X