ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

1 ವಾರದಲ್ಲಿ ಸುಮನಹಳ್ಳಿ ಫ್ಲೈ ಓವರ್‌ನಲ್ಲಿ ವಾಹನ ಸಂಚಾರ

|
Google Oneindia Kannada News

ಬೆಂಗಳೂರು, ನವೆಂಬರ್ 12 : "ಇನ್ನು ಒಂದು ವಾರದೊಳಗೆ ಸುಮನಹಳ್ಳಿ ಫ್ಲೈ ಓವರ್ ವಾಹನ ಸಂಚಾರಕ್ಕೆ ಮುಕ್ತವಾಗಬೇಕು" ಎಂದು ಕಂದಾಯ ಸಚಿವ ಆರ್. ಅಶೋಕ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಂಗಳವಾರ ಆರ್. ಅಶೋಕ ಸುಮನಹಳ್ಳಿ ಫ್ಲೈ ಓವರ್ ಮೇಲಿನ ಗುಂಡಿ ಮುಚ್ಚುವ ಕಾಮಗಾರಿಯ ಪರಿಶೀಲನೆ ನಡೆಸಿದರು. ರಸ್ತೆಗುಂಡಿ ಕಂಡು ಬಂದ ಹಿನ್ನಲೆಯಲ್ಲಿ ನಾಯಂಡಹಳ್ಳಿ-ತುಮಕೂರು ರಸ್ತೆ ಸಂಪರ್ಕಿಸುವ ಸುಮನಹಳ್ಳಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಸುಮನಹಳ್ಳಿ ಫ್ಲೈ ಓವರ್‌ನಲ್ಲಿ ಗುಂಡಿ, ಸಂಚಾರ ದಟ್ಟಣೆಸುಮನಹಳ್ಳಿ ಫ್ಲೈ ಓವರ್‌ನಲ್ಲಿ ಗುಂಡಿ, ಸಂಚಾರ ದಟ್ಟಣೆ

ಫ್ಲೈ ಓವರ್ ಮೇಲೆ ಸುಮಾರು 6 ಅಡಿಗಳಷ್ಟು ಗುಂಡಿ ಬಿದ್ದಿದೆ. ಕಬ್ಬಿಣದ ಸರಳುಗಳು ಕಾಣುತ್ತಿವೆ. ನವೆಂಬರ್ 2ರಂದು ರಸ್ತೆ ಗುಂಡಿ ಕಂಡು ಬಂದ ತಕ್ಷಣ ವಾಹನ ಸಂಚಾರವನ್ನು ಸಂಚಾರಿ ಪೊಲೀಸರು ಬಂದ್ ಮಾಡಿದ್ದರು.

10 ದಿನಗಳ ಕಾಲ ಸುಮನಹಳ್ಳಿ ಮೇಲ್ಸೇತುವೆ ಬಂದ್, ಪರ್ಯಾಯ ಮಾರ್ಗ?10 ದಿನಗಳ ಕಾಲ ಸುಮನಹಳ್ಳಿ ಮೇಲ್ಸೇತುವೆ ಬಂದ್, ಪರ್ಯಾಯ ಮಾರ್ಗ?

Vehicle Movement Open In Summanali Flyover In One Week

ಸುಮನಹಳ್ಳಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ಸ್ಥಗಿತಗೊಂಡಿದ್ದರಿಂದ ಹೊರವರ್ತುಲ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ. 10 ದಿನದಲ್ಲಿ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರ ಆರಂಭಿಸಲಾಗುತ್ತದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದರು.

ತಾಜ್ ವೆಸ್ಟೆಂಡ್‌ ಹೋಟೆಲ್‌ಗೆ ದಂಡ ಹಾಕಿದ ಬಿಬಿಎಂಪಿ ತಾಜ್ ವೆಸ್ಟೆಂಡ್‌ ಹೋಟೆಲ್‌ಗೆ ದಂಡ ಹಾಕಿದ ಬಿಬಿಎಂಪಿ

ನಾಯಂಡಹಳ್ಳಿ-ತುಮಕೂರು ರಸ್ತೆ ಸಂಪರ್ಕಿಸುವ ಹೊರ ವರ್ತುಲ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾದಾಗ 2007ರಲ್ಲಿ ಫ್ಲೈ ಓವರ್ ನಿರ್ಮಾನ ಮಾಡುವ ಕಾಮಗಾರಿ ಕೈಗೊಳ್ಳಲಾಯಿತು. ಬಿಡಿಎ ಫ್ಲೈ ಓವರ್ ನಿರ್ಮಾಣದ ಗುತ್ತಿಗೆಯನ್ನು ಚೆನ್ನೈ ಮೂಲದ ಕಂಪನಿಗೆ ನೀಡಿತ್ತು.

2010ರಲ್ಲಿ ಫ್ಲೈ ಓವರ್ ಉದ್ಘಾಟನೆಗೊಂಡಿತು. ಬಿಡಿಎ ನಿರ್ವಹಣೆ ಫ್ಲೈ ಓವರ್ ನಿರ್ವಹಣೆ ಮಾಡುತ್ತಿತ್ತು. 2016ರಲ್ಲಿ ಬಿಬಿಎಂಪಿಗೆ ಹಸ್ತಾಂತರ ಮಾಡಲಾಯಿತು. ಈಗ ಗುಂಡಿ ಮುಚ್ಚುವ ಕಾರ್ಯವನ್ನು ಬಿಬಿಎಂಪಿಯೇ ಮಾಡುತ್ತಿದೆ.

English summary
Revenue minister R. Ashok said that vehicle movement open in Summanali flyover in one week. Bengaluru traffic police closed the vehicle movement after a pothole found in a flyover.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X