ದೇವರ ದಾಸಿಮಯ್ಯ ಜಯಂತಿಗೆ ಚಿಮೂ ವಿರೋಧ
ಬೆಂಗಳೂರು, ಮಾ.25: ಕರ್ನಾಟಕ ಸರ್ಕಾರ ದೇವರ ದಾಸಿಮಯ್ಯ ಅವರ ಜಯಂತಿ ಮಾಡುತ್ತಿರುವುದು ಸರಿಯಿಲ್ಲ. ಚೇಡರ ದಾಸಿಮಯ್ಯ ಅವರ ಜಯಂತಿ ಮಾಡಬೇಕು ಎಂದು ಖ್ಯಾತ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಬ್ಯಾಂಕ್ವೆಟ್‌ಹಾಲ್‌ನಲ್ಲಿ ನಡೆಯಿತು.
ವಿಧಾನಸೌಧದ ಬ್ವಾಂಕ್ವೆಟ್ ಹಾಲ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಿತ್ತು.
ಸಮಾರಂಭದಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಹಾಜರಿದ್ದರು. ಈ ಸಂದರ್ಭದಲ್ಲಿ ದೇವರ ದಾಸಿಮಯ್ಯ ಬದಲಿಗೆ ಜೇಡರ ದಾಸಿಮಯ್ಯ ಜಯಂತಿ ನಡೆಸಬೇಕು ಎಂದು ಡಾ. ಎಂ. ಚಿದಾನಂದ ಮೂರ್ತಿ ಇತರರು ಪ್ರತಿಭಟನೆಗೆ ಮುಂದಾದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರ ಸಚಿವರುಗಳ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿದ ಡಾ. ಎಂ. ಚಿದಾನಂದ ಮೂರ್ತಿ ಹಾಗೂ ಇತರೆ ಪ್ರತಿಭಟನಾಕಾರರನ್ನು ಪೊಲೀಸರು ಬಲವಂತವಾಗಿ ಹೊರಹಾಕಿದ ಘಟನೆ ಗದ್ದಲ, ಗೊಂದಲಕ್ಕೆ ಕಾರಣವಾಯಿತು.

ಚಿಮೂ ಸ್ಪಷ್ಟನೆ: ದೇವರ ದಾಸಿಮಯ್ಯ ವಚನಕಾರ ಅಲ್ಲ. ಅವನು ಒಬ್ಬ ಶಿವಭಕ್ತ. ಅವನು ಏನೂ ಬರೆದಿಲ್ಲ. ಜೇಡರ ದಾಸಿಮಯ್ಯ ನಿಜವಾದ ವಚನಕಾರ, ಆತನ ಹೆಸರಿನಲ್ಲಿ ಜಯಂತಿ ನಡೆಸಬೇಕು ಎಂದು ಹಿರಿಯ ಸಾಹಿತಿ ಡಾ. ಎಂ. ಚಿದಾನಂದಮೂರ್ತಿ, ಡಾ. ಎಚ್. ವಿದ್ಯಾಶಂಕರ್, ವಕೀಲೆ ಪ್ರಮೀಳಾ ನೇಸರ್ಗಿ ಮತ್ತಿತರರು ಸಮಾರಂಭದಲ್ಲೇ ಘೋಷಣೆ ಕೂಗಿ ಸರ್ಕಾರದ ತೀರ್ಮಾನವನ್ನು ಪ್ರತಿಭಟಿಸಿದರು.
Bengaluru: Veteran Kannada writer Chidananda Murthy dragged and arrested at an event where CM was in attend... https://t.co/5BWz5Xn6ES
— ANI (@ANI_news) March 25, 2015 ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಇಬ್ಬರೂ ಬೇರೆ, ಬೇರೆ. ಇದಕ್ಕೆ ಸಾಕಷ್ಟು ಸಂಶೋಧನೆಗಳ ದಾಖಲೆ ಇದೆ. ಹಾಗಾಗಿ ಸರ್ಕಾರ ದೇವರ ದಾಸಿಮಯ್ಯ ಜಯಂತಿ ನಡೆಸುವುದು ಸರಿಯಲ್ಲ ಎಂದರು. ದೇವರ ದಾಸಿಮಯ್ಯ ವಚನಕಾರನಲ್ಲ, ಜೇಡರ ದಾಸಿಮಯ್ಯ ವಚನಕಾರ ಎಂದು ಚಿಮೂ ವಾದ ಮಂಡಿಸಿದ್ದರು.
I condemn the harassment of Shri M Chidananda Murthy, he is a senior intellectual of Karnataka: Jagdish Shettar, BJP pic.twitter.com/FcietMxpq9
— ANI (@ANI_news) March 25, 2015 ಹಿರಿಯ ಸಾಹಿತಿ ಚಿದಾನಂದ ಮೂರ್ತಿ, ಪ್ರಮೀಳಾ ನೇಸರ್ಗಿ ಹಾಗೂ ಅವರ ಬೆಂಬಲಿಗರನ್ನು ಬಲವಂತವಾಗಿ ಕಾರ್ಯಕ್ರಮದಿಂದ ಹೊರಹಾಕಿದ ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications