Get Updates
Get notified of breaking news, exclusive insights, and must-see stories!

Dodda Rangegowda: ಐಸಿಯುನಲ್ಲಿ ಹಿರಿಯ ಸಾಹಿತಿ ದೊಡ್ಡ ರಂಗೇಗೌಡರಿಗೆ ಚಿಕಿತ್ಸೆ, ಸರ್ಕಾರದಿಂದ ಸಹಾಯ ಹಸ್ತ

ಬೆಂಗಳೂರು, ಜೂನ್ 24: ಕನ್ನಡದ ಹಿರಿಯ ಖ್ಯಾತ ಸಾಹಿತಿ ಡಾ.ದೊಡ್ಡ ರಂಗೇಗೌಡ ಅವರು ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರನ್ನು ಭೇಟಿ ಮಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಅವರ ಆರೋಗ್ಯದ ಬಗ್ಗೆ ವಿಚಾರಿಸಿದರು. ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೆ ಭರಿಸುವುದಾಗಿ ಅವರು ಘೋಷಿಸಿದರು.

ಹೌದು 79 ವರ್ಷ ವಯಸ್ಸಿನ ದೊಡ್ಡರಂಗೇ ಗೌಡರು ಸಾಹಿತ್ಯ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆ ನೀಡಿದವರು. ಅವರು ಅನಾರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ಸಾಹಿತಿ ಮಾತ್ರ್ಲವಲ್ಲದೇ ವಿಧಾನಪರಿಷತ್ತಿನ ಮಾಜಿ ಸದಸ್ಯರಾಗಿಯೂ ಸೇವೆ ನೀಡಿದ್ದಾರೆ.

Veteran Kannada Writer Dr Dodda Rangegowda Hospitalized Govt to Cover Medical Expenses

ಮಂಗಳಾವಾರ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶಿವರಾಜ್ ತಂಗಡಗಿ ಅವರು, ಆಸ್ಪತ್ರೆಯ ವೈದ್ಯರಲ್ಲಿ ದೊಡ್ಡ ರಂಗೇಗೌಡರ ಆರೋಗ್ಯ ಪರಿಸ್ಥಿತಿ ಬಗ್ಗೆ ಸಂಪೂರ್ಣ ಮಾಹಿತಿ ಪಡೆದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆದೇಶದ ಅನುಸಾರ ದೊಡ್ಡರಂಗೇಗೌಡರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರದಿಂದಲೇ ಭರಿಸುವುದಾಗಿ ತಿಳಿಸಿದರು. ಅವರಿಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ಸೌಲಭ್ಯವನ್ನು ಒದಗಿಸಲು ವೈದ್ಯರಿಗೆ ನಿರ್ದೇಶಿಸಿದರು.

ಪ್ರೊ.ದೊಡ್ಡ ರಂಗೇಗೌಡರ ಕುಟುಂಬ ಸದಸ್ಯರನ್ನು ಸಹ ಭೇಟಿ ಮಾಡಿದ ಸಚಿವ ಶಿವರಾಜ ತಂಗಡಗಿ ಅವರಿಗೆ ಧೈರ್ಯ ಹೇಳಿದರು.ಪ್ರೊ. ದೊಡ್ಡ ರಂಗೇಗೌಡರು ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಸರ್ಕಾರದಿಂದ ಅವರಿಗೆ ಎಲ್ಲ ರೀತಿಯ ನೆರವನ್ನು ನೀಡುವುದಾಗಿ ತಿಳಿಸಿದರು.

ಸಿನಿಮಾ ರಂಗದಲ್ಲೂ ಛಾಪು

ಕನ್ನಡ ಸಾಹಿತ್ಯ ಹಾಗೂ ಸಿನಿಮಾರಂಗದಲ್ಲಿ ಹೆಸರು ಮಾಡಿದ್ದಾರೆ. ಸಾಕಷ್ಟು ಹಾಡುಗಳನ್ನು ಬರೆದಿರುವ ಡಾ. ದೊಡ್ಡರಂಗೇಗೌಡ ಅವರ ಹುಟ್ಟೂರು ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕುರುಬರಹಳ್ಳಿ. 1946ರ ಫೆಬ್ರವರಿ 7ರಂದು ತಂದೆ ಕೆ. ರಂಗೇಗೌಡರು, ತಾಯಿ ಅಕ್ಕಮ್ಮ ಅವರು ಪುತ್ರರಾಗಿ ಜನಸಿದರು.

ಬಾಲ್ಯ ಶಿಕ್ಷಣ ಮುಗಿಸಿದ ಅವರು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಮದ್ರಾಸ್ ವಿಶ್ವವಿದ್ಯಾಯದಿಂದ ಸ್ನಾತಕೋತ್ತರ ಪದವಿ ಪಡೆದರು. 'ಕನ್ನಡ ನವೋದಯ ಕಾವ್ಯ- ಒಂದು ಪುನರ್ ಮೌಲ್ಯಮಾಪನ' ಎಂಬ ಸಂಶೋಧನಾ ಪ್ರಬಂಧ ಮಂಡಿಸಿದ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಪಿಹೆಚ್‍ಡಿ ಪದವಿ ನೀಡಿ ಗೌರಿವಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+