"ವಿಜಿ ಸಿದ್ದಾರ್ಥ ಆತ್ಮಹತ್ಯೆಯಲ್ಲ ಐಟಿ ಇಲಾಖೆ ಮಾಡಿದ ಕೊಲೆ"

ಬೆಂಗಳೂರು, ಸೆಪ್ಟೆಂಬರ್ 11 : "ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಸಾವು ಆತ್ಮಹತ್ಯೆಯಲ್ಲ. ಅದು ಐಟಿ ಇಲಾಖೆ ಮೂಲಕ ಆದ ಕೊಲೆ" ಎಂದು ಮಾಜಿ ಸಚಿವ, ಕಾಂಗ್ರೆಸ್ ನಾಯಕ ಕೃಷ್ಣ ಬೈರೇಗೌಡ ಆರೋಪಿಸಿದರು.

ಮಾಜಿ ಸಚಿವ, ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಒಕ್ಕಲಿಗ ಸಮುದಾಯದ ನಾಯಕ ಕೃಷ್ಣ ಬೈರೇಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

VG Siddharth Death Murder By IT Dept Says Krishna Byre Gowda

ವಿಶ್ವ ಒಕ್ಕಲಿಗರ ಒಕ್ಕೂಟದಡಿ ವಿವಿಧ ಸಂಘಟನೆಗಳು ಬುಧವಾರ ಬೆಂಗಳೂರಿನಲ್ಲಿ ಡಿ. ಕೆ. ಶಿವಕುಮಾರ್ ಬಂಧನ ಖಂಡಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಬಸನವಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಪ್ರತಿಭಟನೆ ಉದ್ದೇಶಿಸಿ ಕೃಷ್ಣ ಬೈರೇಗೌಡ ಮಾತನಾಡಿದರು.

"ಕೇಂದ್ರ ಸರ್ಕಾರ ಹೇಡಿ ರಾಜಕಾರಣ ಮಾಡುತ್ತಿದೆ. ಐಟಿ, ಇಡಿಯಂತಹ ಸಂಸ್ಥೆಗಳನ್ನು ನಾಯಿಯಂತೆ ಬಳಸಿಕೊಳ್ಳುತ್ತಿದೆ. ವಿಜಯ್ ಮಲ್ಯ, ನೀರವ್ ಮೋದಿ, ಚೋಕ್ಸಿ ಮೇಲೆ ಐಟಿ, ಇಡಿ ಏಕೆ ದಾಳಿ ಮಾಡಿಲ್ಲ?" ಎಂದು ಪ್ರಶ್ನೆ ಮಾಡಿದರು.

ವಿಶ್ವ ಒಕ್ಕಲಿಗರ ಒಕ್ಕೂಟದಡಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಂಸದ ವಿ. ಎಸ್. ಉಗ್ರಪ್ಪ, ಶಾಸಕಿ ಸೌಮ್ಯಾ ರೆಡ್ಡಿ ಪಾಲ್ಗೊಂಡಿದ್ದಾರೆ.

ಬಸನವಗುಡಿ ನ್ಯಾಷನಲ್ ಕಾಲೇಜು ಮೈದಾನದಿಂದ ಆರಂಭವಾದ ಸಮಾವೇಶ ಫ್ರೀಡಂ ಪಾರ್ಕ್ ತಲುಪಿದೆ. ಸುಮಾರು 50 ಸಾವಿರಕ್ಕೂ ಅಧಿಕ ಜನರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+