ವಿಬ್‌ಗಯಾರ್ ಶಾಲೆ ಆರಂಭ, ಕುಣಿಯುತ ಬಂದ ಮಕ್ಕಳು
ಬೆಂಗಳೂರು, ಜು. 28 : ಬೆಂಗಳೂರಿನ ಹೊರವಲಯದ ಮಾರತ್ ಹಳ್ಳಿಯ ವಿಬ್ ಗಯಾರ್ ಶಾಲೆ ಸೋಮವಾರದಿಂದ ಪುನರಾರಂಭವಾಗಿದೆ. ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದ ನಂತರ ವಿಬ್ ಗಯಾರ್ ಶಾಲೆಯನ್ನು ಮುಚ್ಚಲಾಗಿತ್ತು.
ಶಿಕ್ಷಣ ಇಲಾಖೆ, ಪೋಷಕರು ಮತ್ತು ಶಾಲೆಯ ಆಡಳಿತ ಮಂಡಳಿ ನಡುವೆ ಹಲವು ಸುತ್ತಿನ ಮಾತುಕತೆ ನಡೆದ ಬಳಿಕ ಶಾಲೆಯನ್ನು ಪುನಃ ಆರಂಭಿಸಲಾಗಿದೆ. ಸುಮಾರು 12 ದಿನಗಳ ಬಳಿಕ ಪೋಷಕರು ಸೋಮವಾರ ಬೆಳಗ್ಗೆ ಮಕ್ಕಳನ್ನು ಶಾಲೆಗೆ ತಂದು ಬಿಟ್ಟು ಹೋಗುತ್ತಿದ್ದಾರೆ.

ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಶಾಲಾ ಆಡಳಿತ ಮಂಡಳಿ ಶಾಲೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡಿದೆ. ಪೊಲೀಸರ ನಿರ್ದೇಶನದಂತೆ ಹಲವು ಸ್ಥಳಗಳಲ್ಲಿ ಸಿಸಿಟಿವಿ ಆಳವಡಿಸಲಾಗಿದೆ. ಶಾಲೆಯಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಕೇಟಿಂಗ್ ತರಬೇತುದಾರ ಮುಸ್ತಾಫನನ್ನು ಪೊಲೀಸರು ಬಂಧಿಸಿದ್ದಾರೆ. [ವಿಬ್ ಗಯಾರ್ ಶಾಲೆಯ ಸಂಸ್ಥಾಪಕನ ಬಂಧನ]
ಕಳೆದ ವಾರ ಪೋಷಕರೊಂದಿಗೆ ಮಾತುಕತೆ ನಡೆಸಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಮಕ್ಕಳ ಶಿಕ್ಷಣದ ಹಿತದೃಷ್ಠಿಯಿಂದ ಶಾಲೆಯನ್ನು ಪುನಃ ಆರಂಭಿಸುವಂತೆ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದರು. ಶುಕ್ರವಾರ ಶಾಲೆ ಆರಂಭವಾಗಬೇಕಿತ್ತು. ಆದರೆ, ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಸರಣಿ ಸಭೆಗಳು ನಡೆದ ನಂತರ ಸೋಮವಾರ ಶಾಲೆ ಆರಂಭವಾಗಿದೆ. [ವಿಬ್ ಗಯಾರ್ ಮುಂದಿನ ಪ್ರತಿಭಟನೆ ಚಿತ್ರಗಳು]
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications