ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇನ್ನು ಎರಡೇ ದಿನಗಳಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೋವಿಡೇತರ ಸೇವೆ ಆರಂಭ

|
Google Oneindia Kannada News

ಬೆಂಗಳೂರು, ಜನವರಿ 15: ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇನ್ನು ಎರಡೇ ದಿನಗಳಲ್ಲಿ ಕೋವಿಡೇತರ ಸೇವೆ ಆರಂಭವಾಗಲಿದೆ.

ಹೌದು ಜನವರಿ 18 ರಿಂದ ಕೋವಿಡೇತರ ಸೇವೆ ಆರಂಭವಾಗಲಿದೆ. ಇದೀಗ ಕೋವಿಡ್ ಪ್ರಕರಣಗಳು ಇಳಿಕೆಯಾಗಿದ್ದರಿಂದ ಮಿಂಟೊ ಕಣ್ಣಿನ ಆಸ್ಪತ್ರೆ ಹಾಗೂ ಪಿಎಂಎಸ್‌ಎಸ್‌ವೈ ಆಸ್ಪತ್ರೆಯಲ್ಲಿ ಎಲ್ಲ ವೈದ್ಯಕೀಯ ಸೇವೆಗಳನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ದೆಹಲಿ: ಬ್ರಿಟನ್‌ನಿಂದ ಬಂದವರಿಗೆ 14 ದಿನಗಳ ಕ್ವಾರಂಟೈನ್ ಆದೇಶ ವಿಸ್ತರಣೆದೆಹಲಿ: ಬ್ರಿಟನ್‌ನಿಂದ ಬಂದವರಿಗೆ 14 ದಿನಗಳ ಕ್ವಾರಂಟೈನ್ ಆದೇಶ ವಿಸ್ತರಣೆ

ಒಂದೇ ಕಡೆ ಕೊರೊನಾ ಸೋಂಕಿತರನ್ನು ದಾಖಲಿಸಿಕೊಂಡಲ್ಲಿ ಗುಣಮಟ್ಟದ ಚಿಕಿತ್ಸೆ ನೀಡಲು ಸಾಧ್ಯ ಎಂಬ ಕಾರಣಕ್ಕೆ ವಿಕ್ಟೋರಿಯಾದಲ್ಲಿ 550 ಹಾಸಿಗೆಗಳನ್ನು ಕೋವಿಡ್‌ ರೋಗಿಗಳಿಗೆ ಮೀಸಲಿಟ್ಟು, 9 ತಿಂಗಳಿನಿಂದ ಚಿಕಿತ್ಸೆ ಒದಗಿಸಲಾಗುತ್ತಿದೆ. ಈಗ ಕೋವಿಡ್ ಪೀಡಿತರ ಸಂಖ್ಯೆ ಇಳಿಕೆಯಾಗಿರುವುದರಿಂದ ಕೆಲ ದಿನಗಳಿಂದ ಅಲ್ಲಿ ಬಹುತೇಕ ಹಾಸಿಗೆಗಳು ಖಾಲಿಯಿವೆ.

Victoria Hospital To Resume Non-Covid Services From January 18

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಸರ್ಕಾರವು ವಿಕ್ಟೋರಿಯಾದಲ್ಲಿದ್ದ ರೋಗಿಗಳನ್ನು ಜಯನಗರ ಸಾರ್ವಜನಿಕ ಆಸ್ಪತ್ರೆ, ಕೆ.ಸಿ. ಜನರಲ್, ಸಿ.ವಿ. ರಾಮನ್ ಸೇರಿದಂತೆ ನಗರದ ವಿವಿಧ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿತ್ತು.

Recommended Video

Yediyurappa ಮತ್ತು Vijayendra ನ ಮಾಯ ಜಾಲ!!| Oneindia Kannada

ವಿಕ್ಟೋರಿಯಾದ ಆವರಣದಲ್ಲಿರುವ ಆಸ್ಪತ್ರೆಗಳಲ್ಲಿ ವಾಣಿವಿಲಾಸ ಮತ್ತು ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಮಾತ್ರ ಕೋವಿಡೇತರ ಸೇವೆ ಮುಂದುವರಿಸಲಾಗಿತ್ತು.

English summary
Bengaluru’s largest government clinical facility, Victoria Hospital, will start non-covid services from Monday, over 10 months after they were closed in March 2020 due to the pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X