ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾ.ಪಂ ಚುನಾವಣೆಯಲ್ಲಿ ಸಾಮೂಹಿಕ ನಾಯಕತ್ವಕ್ಕೆ ಗೆಲುವು: ಸಿಎಂ ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಡಿಸೆಂಬರ್ 31: ರಾಜ್ಯದ ಗ್ರಾಮ ಪಂಚಾಯತಿಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. ಡಿ.30 ರಂದು ಗ್ರಾ.ಪಂ ಚುನಾವಣೆಯ ಫಲಿತಾಂಶವೂ ಪ್ರಕಟವಾಗಿದೆ.

ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ಕರ್ನಾಟಕದ ಗ್ರಾಮ ಪಂಚಾಯಯತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಶೇ.60 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಫಲಿತಾಂಶ

ಗ್ರಾ.ಪಂ ಚುನಾವಣೆಯ ಈ ಗೆಲುವು ನಾಯಕರ, ಕಾರ್ಯಕರ್ತರ ಸಾಮೂಹಿಕ ನಾಯಕತ್ವ ಕಾರಣವಾಗಿದೆ. ಗ್ರಾಮೀಣ ಹಾಗೂ ಸ್ಥಳೀಯ ನಾಯಕರು, ಕಾರ್ಯಕರ್ತರು ಶ್ರಮಿಸಿದ್ದಾರೆ ಎಂದರು.

Victory For Collective Leadership In Gram Panchayat Election: CM Yediyurappa

3,800 ಗ್ರಾಮ ಪಂಚಾಯತಿಗಳಲ್ಲಿ ಗೆಲುವು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಜಯ ಸಾಧಿಸಿರುವುದು, ಬಿಜೆಪಿ ಪಕ್ಷದ ಮತ್ತೊಂದು ಸಾಧನೆ. ಎನ್‌ಡಿಎ ನೇತೃತ್ವದ ಸರ್ಕಾರ ರೈತರ ಆದಾಯ 2022ರ ವೇಳೆಗೆ ದ್ವಿಗುಣಗೊಳಿಸುವ ಯೋಜನೆ ಹಾಕಿಕೊಂಡಿದೆ ಎಂದು ತಿಳಿಸಿದರು.

ರೈತರು‌ ತಮ್ಮ ಉತ್ಪನ್ನ ಎಲ್ಲಿ ಬೇಕಾದರೂ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ, ಕೃಷಿ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ದೇಶದ ರೈತರಿಗೆ ಅನುಕೂಲ ಮಾಡಿದ್ದಾರೆ. ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಮಧ್ಯವರ್ತಿಗಳ ಹಾವಳಿ ತಪ್ಪಿಸಬಹುದೆಂದು ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟರು.

English summary
CM BS Yediyurappa, responding in Bengaluru, ""60 per cent of BJP-backed candidates won the Karnataka Gram Panchayat elections'' said that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X