ಚರ್ಚ್ಸ್ಟ್ರೀಟ್ನಲ್ಲಿ ಬಾಂಬ್ ಇಟ್ಟವನ ಗುರುತು ಪತ್ತೆ?
ಬೆಂಗಳೂರು, ಜನವರಿ 13 : ಬೆಂಗಳೂರಿನ ಚರ್ಚ್ಸ್ಟ್ರೀಟ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಬಾಂಬ್ ಇಟ್ಟ ಶಂಕಿತ ವ್ಯಕ್ತಿಯ ದೃಶ್ಯಾವಳಿಯನ್ನು ಪತ್ತೆ ಹಚ್ಚಿದೆ. ಎನ್ಐಎಗೆ ಲಭ್ಯವಾಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಶಂಕಿತ ವ್ಯಕ್ತಿ ಬಾಂಬ್ ಸ್ಫೋಟಗೊಂಡ ಪ್ರದೇಶದಲ್ಲಿ ಸುತ್ತಾಡುತ್ತಿರುವುದು ಸೆರೆಯಾಗಿದೆ.
2014ರ ಡಿಸೆಂಬರ್ 28ರಂದು ಚರ್ಚ್ಸ್ಟ್ರೀಟ್ನಲ್ಲಿನ ಕೋಕೋನಟ್ ಗ್ರೋವ್ ಹೋಟೆಲ್ ಬಳಿ ರಾತ್ರಿ 8.30ರ ಸುಮಾರಿಗೆ ಬಾಂಬ್ ಸ್ಫೋಟಗೊಂಡಿತ್ತು. ಬೆಂಗಳೂರು ಪೊಲೀಸರು ಮೊದಲು ಸ್ಫೋಟದ ತನಿಖೆ ನಡೆಸಿದರು. ಕೆಲವು ದಿನಗಳ ನಂತರ ಎನ್ಐಎಗೆ ತನಿಖೆಯನ್ನು ಹಸ್ತಾಂತರ ಮಾಡಲಾಯಿತು. [Church Street ಸ್ಫೋಟಕ್ಕೆ ಒಂದು ವರ್ಷ]

ದೃಶ್ಯಾವಳಿಯಲ್ಲೇನಿದೆ? : ಸದ್ಯ, ಎನ್ಐಎಗೆ ಲಭ್ಯವಾಗಿರುವ ದೃಶ್ಯಾವಳಿಯಲ್ಲಿ ನೀಲಿ ಬಣ್ಣದ ಟೀ ಶರ್ಟ್ ತೊಟ್ಟು, ಕ್ಯಾಪ್ ಧರಿಸಿರುವ ವ್ಯಕ್ತಿಯೊಬ್ಬ ಬಾಂಬ್ ಸ್ಫೋಟಗೊಂಡ ಪ್ರದೇಶದಲ್ಲಿ ಸುತ್ತುತ್ತಿರುವುದು ಸೆರೆಯಾಗಿದೆ. ಕೈಯಲ್ಲಿ ಬ್ಯಾಗ್ ಹಿಡಿದಿರುವ ವ್ಯಕ್ತಿ ಹಲವು ಬಾರಿ ಆ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸುತ್ತಾಡಿದ್ದಾನೆ. [ಬೆಂಗಳೂರು ಸ್ಫೋಟ : ತನಿಖೆ ಆರಂಭಿಸಿದ NIA]
ಈ ಕ್ಯಾಪ್ ಧರಿಸಿರುವ ವ್ಯಕ್ತಿ ಕೈಯಲ್ಲಿರುವ ಬ್ಯಾಗ್ನಲ್ಲಿ ಬಾಂಬ್ ಅನ್ನು ತಂದಿರಬಹುದು ಎಂದು ಎನ್ಐಎ ಶಂಕಿಸಿದೆ. ಹೈದರಾಬಾದ್ನ ಎನ್ಐಎ ಘಟಕ ಬಾಂಬ್ ಸ್ಫೋಟದ ತನಿಖೆಯನ್ನು ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದೆ.
ಬ್ಯಾಗ್ ಹೊಂದಿರುವ ವ್ಯಕ್ತಿಯೇ ಬಾಂಬ್ ಇಟ್ಟಿರಬಹುದು ಎಂದು ಎನ್ಐಎ ಶಂಕಿಸಿದೆ. ಬಾಂಬ್ ಸ್ಫೋಟಗೊಂಡ ಡಿಸೆಂಬರ್ 28ರ ಸಂಜೆ 7 ಗಂಟೆಗೆ ಈ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯ ಬಗ್ಗೆ ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್ಐಎ ಘೋಷಿಸಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications