ಬೆಂಗಳೂರು : ದುರ್ಗಾ ಪರಮೇಶ್ವರಿ ದೇವಾಲಯ ಮುಜರಾಯಿ ವ್ಯಾಪ್ತಿಗೆ

ಬೆಂಗಳೂರು, ಆಗಸ್ಟ್ 21 : ಬೆಂಗಳೂರು ನಗರದ ವಿದ್ಯಾರಣ್ಯಪುರದ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆದಿದೆ. ದೇವಾಲಯದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿತ್ತು.

ಬೆಂಗಳೂರು ಜಿಲ್ಲಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿದ್ದಾರೆ. 'ದೇವಾಲಯದ ಹಣದ ಅವ್ಯವಹಾರದ ಹಿನ್ನಲೆಯಲ್ಲಿ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯಲಾಗಿದೆ' ಎಂದು ಅವರು ಹೇಳಿದ್ದಾರೆ.

ಮೂರು ವರ್ಷಗಳ ಹಿಂದೆ ದೇವಾಲಯಕ್ಕೆ ಜಮೀನು ನೀಡಿದ ದಾನಿಗಳನ್ನು ಟ್ರಸ್ಟ್‌ನಿಂದ ಹೊರಹಾಕಲಾಗಿತ್ತು. ಕೊಡಿಗೆಹಳ್ಳಿ ನಂಜುಡಪ್ಪ ಎಂಬುವವರು ದೇವಾಲಯದಲ್ಲಿ ಅವ್ಯವಹಾರ ನಡೆದಿದೆ ಎಂದು ದೂರು ನೀಡಿದ್ದರು.

Vidyaranyapura Durga Parameshwari Temple to be managed by Muzrai department

ನಕಲಿ ಟ್ರಸ್ಟ್ ಹಾಗೂ ಜಮೀನಿನ ಕಾರಣಕ್ಕೆ ದೇವಾಲಯದ ವಿವಾದ ನ್ಯಾಯಾಲಯದ ಮೆಟ್ಟಿಲು ಏರಿತ್ತು. ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿರುವಾಗಲೇ ದೇವಾಲಯವನ್ನು ಮುಜರಾಯಿ ಇಲಾಖೆ ವಶಕ್ಕೆ ಪಡೆಯಲಾಗಿದೆ.

1985ರಲ್ಲಿ ವಿದ್ಯಾರಣ್ಯಪುರದಲ್ಲಿ ಶ್ರೀ ದುರ್ಗಾ ಪರಮೇಶ್ವರಿ ದೇವಾಲಯವನ್ನು ನಿರ್ಮಾಣ ಮಾಡಲಾಗಿತ್ತು. ಸ್ಥಳೀಯರು ನೀಡಿದ 18 ಗುಂಟೆ ಜಮೀನಿನಲ್ಲಿ ಟ್ರಸ್ಟ್ ಸ್ಥಾಪನೆ ಮಾಡಿ, ದೇವಾಲಯವನ್ನು ಅಭಿವೃದ್ಧಿ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+