ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿ ಹಿಂಸಾಚಾರ: ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಮಾಡಿರುವ ಕೆಲಸ ಎಂದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜನವರಿ 27: ದೆಹಲಿಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಚಾರದಲ್ಲಿ ರೈತರ ಪಾತ್ರವಿಲ್ಲ, ರೈತರ ಸೋಗಿನಲ್ಲಿ ಅನ್ಯಶಕ್ತಿಗಳು ಮಾಡಿರುವ ಕೆಲಸವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಅನ್ಯ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ.

ಕೆಂಪುಕೋಟೆಗೆ ನುಗ್ಗಿದ ರೈತರು; ಯಾರು, ಏನು ಹೇಳಿದರು? ಕೆಂಪುಕೋಟೆಗೆ ನುಗ್ಗಿದ ರೈತರು; ಯಾರು, ಏನು ಹೇಳಿದರು?

ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ ಎಂದು ಅವರು ಟ್ವೀಟ್ ಮಾಡಿದ್ದಾರೆ.

Violence At The Delhi Tractor Parade Is Unfortunate: HD Kumaraswamy

ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ.

ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು ಎಂದು ಅವರು ಸಲಹೆ ನೀಡಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ ಎಂದಿದ್ದಾರೆ.

ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದು ಹೋಗಿದೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗು ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ.

Recommended Video

ರೈತರ ಸಮಸ್ಯೆಗೆ ಸ್ಪಂದಿಸುವಲ್ಲಿ ಕೇಂದ್ರ ಸರ್ಕಾರ ಸೋತಿದೆ- ಮಾಜಿ CM Siddaramaiah | Oneindia Kannada

English summary
Former CM HDKumaraswamy today said that, The violence in Delhi during the historical struggle of the peasantry is unfortunate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X