ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಡಿಜೆ ಹಳ್ಳಿ ಗಲಭೆಕೋರರಿಂದಲೇ ಆಸ್ತಿ ಪಾಸ್ತಿ ನಷ್ಟ ವಸೂಲಿ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ

|
Google Oneindia Kannada News

ಬೆಂಗಳೂರು, ಆಗಸ್ಟ್ 17: ಬೆಂಗಳೂರಿನ ಡಿ.ಜೆ.ಹಳ್ಳಿ, ಕಾವಲಭೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಗಲಭೆಯಿಂದ ಉಂಟಾದ ನಷ್ಟವನ್ನು ತಪ್ಪಿತಸ್ಥರಿಂದಲೇ ವಸೂಲಿ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು.

Recommended Video

ಕೊರೊನಾ ನಡುವೆ ಪರಿಸರ ಗಣಪತಿಗೆ ಹೆಚ್ಚಿದ ಬೇಡಿಕೆ | Oneindia Kannada

ಸಿಎಂ ಅಧಿಕೃತ ನಿವಾಸ 'ಕಾವೇರಿ'ಯಲ್ಲಿ ನಡೆದ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಡಿಜಿ-ಐಜಿಪಿ ಪ್ರವೀಣ್ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು.

ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ನವೀನ್ ಬಿಜೆಪಿ ಬೆಂಬಲಿಗ: ಡಿ.ಕೆ. ಶಿವಕುಮಾರ್ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ನವೀನ್ ಬಿಜೆಪಿ ಬೆಂಬಲಿಗ: ಡಿ.ಕೆ. ಶಿವಕುಮಾರ್

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರದೇಶಗಳಲ್ಲಿ ಕಳೆದ ಮಂಗಳವಾರ ನಡೆದ ಗಲಭೆಯ ವೇಳೆ ಸರ್ಕಾರ ಮತ್ತು ಖಾಸಗಿ ವ್ಯಕ್ತಿಗಳಿಗೆ ಸೇರಿದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗಿತ್ತು. ಈ ನಷ್ಟದ ಹಣವನ್ನು ಗಲಭೆಕೋರರಿಂದಲೇ ವಸೂಲಿ ಮಾಡಲಾಗುವುದು. ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆಯೇ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಕೆಲವು ದಿನಗಳ ಹಿಂದೆ ತಿಳಿಸಿದ್ದರು.

ಸೋಮವಾರದ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳೇನು? ಮುಂದೆ ಓದಿ.

ಕ್ಲೇಮ್ ಕಮಿಷನರ್ ನೇಮಕ

ಕ್ಲೇಮ್ ಕಮಿಷನರ್ ನೇಮಕ

1. ಸಾರ್ವಜನಿಕ ಹಾಗು ಖಾಸಗಿ ಸ್ವತ್ತುಗಳಿಗೆ ಉಂಟಾಗಿರುವ ಹಾನಿಯನ್ನು ಗಲಭೆಕೋರರಿಂದ ವಸೂಲು ಮಾಡುವ ಬಗ್ಗೆ ರಾಜ್ಯ ಹೈಕೋರ್ಟ್‌ಗೆ ಮನವಿ ಸಲ್ಲಿಸಿ, ಈಗಾಗಲೇ ನೀಡಲಾಗಿರುವ ದೇಶದ ಸುಪ್ರೀಂಕೋರ್ಟ್‌ನ ಆದೇಶದಂತೆ ‘ಕ್ಲೇಮ್ ಕಮಿಷನರ್' ನೇಮಿಸಲು ಕೋರುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಯಿತು.

ಯುಎಪಿಎ ಕಾಯ್ದೆ ಜಾರಿ

ಯುಎಪಿಎ ಕಾಯ್ದೆ ಜಾರಿ

2. ಈ ಗಲಭೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಅಲ್ಲದೆ, ಈ ಪ್ರಕರಣಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (UAPA Act) ಯನ್ನು ಸಹ ಅಳವಡಿಸಿರುವುದರ ಬಗ್ಗೆ ಮಾಹಿತಿ ನೀಡಿದರು.

ಬೆಂಗಳೂರು ಹಿಂಸಾಚಾರ: ಶಾಸಕ ಶ್ರೀನಿವಾಸಮೂರ್ತಿ ನಿವಾಸಕ್ಕೆ ಬಿಜೆಪಿ ನಿಯೋಗಬೆಂಗಳೂರು ಹಿಂಸಾಚಾರ: ಶಾಸಕ ಶ್ರೀನಿವಾಸಮೂರ್ತಿ ನಿವಾಸಕ್ಕೆ ಬಿಜೆಪಿ ನಿಯೋಗ

ವಿಶೇಷ ತನಿಖಾ ತಂಡ

ವಿಶೇಷ ತನಿಖಾ ತಂಡ

3. ಈ ಪ್ರಕರಣದ ತನಿಖೆಗಳನ್ನು ತ್ವರಿತವಾಗಿ ನಡೆಸುವ ಸಲುವಾಗಿ ಒಂದು ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

4. ಈಗಾಗಲೇ ದಾಖಲಾಗಿರುವ ಅಪರಾಧ ಪ್ರಕರಣಗಳ ತ್ವರಿತ ಹಾಗೂ ಪರಿಣಾಮಕಾರಿ ವಿಚಾರಣೆಗೆ ಅನುವಾಗುವಂತೆ ಮೂರು ಸದಸ್ಯರನ್ನು ಒಳಗೊಂಡ ವಿಶೇಷ ಅಭಿಯೋಜಕರ ತಂಡವನ್ನು ರಚಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ಅಗತ್ಯ ಬಿದ್ದರೆ ಗೂಂಡಾ ಕಾಯ್ದೆ

ಅಗತ್ಯ ಬಿದ್ದರೆ ಗೂಂಡಾ ಕಾಯ್ದೆ

5. ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿಯಲ್ಲಿ ನಡೆದ ಅಪರಾಧ ಪ್ರಕರಣಗಳಲ್ಲಿ ಬಂಧಿತ ಅಪರಾಧಿಗಳಿಗೆ ಸಂಬಂಧಪಟ್ಟಂತೆ ಅವಶ್ಯಕತೆ ಕಂಡುಬಂದಲ್ಲಿ ಗೂಂಡಾ ಕಾಯಿದೆಯಡಿಯಲ್ಲಿ ಸಹ ಕ್ರಮ ಕೈಗೊಳ್ಳುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರೋ, ಬಲಿಯಾದವರೋ ಇನ್ಯಾರೋ: ಜಮೀರ್ ಅಹ್ಮದ್ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರೋ, ಬಲಿಯಾದವರೋ ಇನ್ಯಾರೋ: ಜಮೀರ್ ಅಹ್ಮದ್

English summary
Bengaluru Violence: Karnataka Govt Decided to recover the public & private property damage costs from the culprits.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X