ಕಾವಲ್ ಭೈರಸಂದ್ರ ಗಲಭೆ; ಪೊಲೀಸರ ಗುಂಡಿಗೆ ವ್ಯಕ್ತಿ ಬಲಿ

ಬೆಂಗಳೂರು, ಆಗಸ್ಟ್ 12 : ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ಗಲಭೆ ನಿಯಂತ್ರಣ ಮಾಡಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪೊಲೀಸರ ಗುಂಡಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Recommended Video

      KG halli , DJ halli ಪ್ರಕರಣದ ನಂತರ BS Yediyurappa ದೂರವಾಣಿ ಕರೆ | Oneindia Kannada

      ಮಂಗಳವಾರ ರಾತ್ರಿ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ವಾಹನಗಳನ್ನು ಜಖಂಗೊಳಿಸಲಾಗಿದೆ. ಕೆ. ಜಿ. ಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿಯೂ ಗಲಭೆ ನಡೆಯುತ್ತಿದೆ.

      ವಾಹನಗಳನ್ನು ಜಖಂಗೊಳಿಸುತ್ತಾ, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಾ, ಕಂಡ ಕಂಡಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚುತ್ತಿದ್ದ ಜನರನ್ನು ನಿಯಂತ್ರಣ ಮಾಡಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

      Violence in DJ Halli 0ne Killed In Police Firing

      ಕೆ. ಜಿ. ಹಳ್ಳಿ ಠಾಣೆ ಸಮೀಪ ಪೊಲೀಸರ ಗುಂಡಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಮೂವರ ಕಾಲಿಗೆ ಗುಂಡು ತಗುಲಿದೆ. 10ಕ್ಕೂ ಅಧಿಕ ಪೊಲೀಸರಿಗೆ ಗಲಭೆಯಲ್ಲಿ ಗಾಯಗಳಾಗಿವೆ. ಹಲವಾರು ಪೊಲೀಸರ ವಾಹನಗಳನ್ನು ಜಖಂಗೊಳಿಸಲಾಗಿದೆ.

      ಡಿ. ಜೆ. ಹಳ್ಳಿ ಮತ್ತು ಕೆ. ಜಿ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಣ ಮಾಡಲು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದಾರೆ. ಜನರನ್ನು ಚದುರಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ. ಪೊಲೀಸರ ಮೇಲೆ ಕಲ್ಲು, ಬಾಟಲಿಗಳನ್ನು ಎಸೆಯಲಾಗುತ್ತಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+