ಗಲಭೆ; ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿಡಿಯೋ
ಬೆಂಗಳೂರು, ಆಗಸ್ಟ್ 12 : ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಡಿ. ಜೆ. ಹಳ್ಳಿ ಪೊಲೀಸ್ ಠಾಣೆಯ ವಾಹನಗಳನ್ನು ಜಖಂಗೊಳಿಸಲಾಗಿದೆ. ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ಗಲಭೆ ನಡೆದಿದೆ.
Recommended Video
ಮಂಗಳವಾರ ರಾತ್ರಿ ಕಾವಲ್ ಭೈರಸಂದ್ರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತು.
ಕಾವಲ್ ಭೈರಸಂದ್ರದಲ್ಲಿ ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಪೊಲೀಸರ ಮೇಲೆ ಕಲ್ಲು, ಬಾಟಲಿಗಳನ್ನು ತೂರಲಾಯಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮಾಡಿದರು. ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಕಾವಲ್ ಭೈರಸಂದ್ರದಲ್ಲಿ ನಡೆಯುತ್ತಿರುವ ಗಲಭೆ ಬಗ್ಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, "ಕಾನೂನನ್ನು ಕೈಗೆ ತೆಗೆದುಕೊಳ್ಳುವವರ ವಿರುದ್ಧ ಉಗ್ರ ಕ್ರಮವನ್ನು ಜರುಗಿಸಲಾಗುತ್ತದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಬೇಕು ಎಂದು ಸೂಚನೆ ಕೊಟ್ಟಿದ್ದೇನೆ" ಎಂದು ಹೇಳಿದ್ದಾರೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿಡಿಯೋ ಮೂಲಕ ಜನರಿಗೆ ಮನವಿಯೊಂದನ್ನು ಮಾಡಿದ್ದಾರೆ.












Click it and Unblock the Notifications