ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿ

|
Google Oneindia Kannada News

ಬೆಂಗಳೂರು, ಆಗಸ್ಟ್ 12 : " ಬೆಂಗಳೂರು ನಗರದಲ್ಲಿ ಗಲಭೆಯಿಂದಾಗಿ ಆಸ್ತಿ ನಷ್ಟ ಮಾಡಿದ ಗಲಭೆಕೋರರ ಆಸ್ತಿ ಜಪ್ತಿ ಮಾಡಲಾಗುವುದು ಹಾಗೂ ಗಲಭೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Recommended Video

Basavaraj Bommai, ಪುಂಡರಿಗೆ ಖಡಕ್ ಎಚ್ಚರಿಕೆ ಕೊಟ್ಟ ಹೋಮ್ ಮಿನಿಸ್ಟರ್ | Oneindia Kannada

ಮಂಗಳವಾರ ರಾತ್ರಿ ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿ ಗಲಭೆ ನಡೆದಿತ್ತು. ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ನವೀನ್ ಬಿಜೆಪಿ ಬೆಂಬಲಿಗ: ಡಿ.ಕೆ. ಶಿವಕುಮಾರ್ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿ ನವೀನ್ ಬಿಜೆಪಿ ಬೆಂಬಲಿಗ: ಡಿ.ಕೆ. ಶಿವಕುಮಾರ್

ಬುಧವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕೇಂದ್ರ ಸಚಿವ, ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಅವರು ಸಹ ಇದ್ದರು.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ, ಗೃಹಸಚಿವರಿಂದ ಮಹತ್ವದ ಆದೇಶ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ, ಗೃಹಸಚಿವರಿಂದ ಮಹತ್ವದ ಆದೇಶ

ಗೃಹ ಸಚಿವರು ಕಾವಲ್ ಭೈರಸಂದ್ರ, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ಗಲಭೆ ನಡೆದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಗಲಭೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಕಾವಲ್ ಭೈರಸಂದ್ರ ಗಲಭೆ; ಪೊಲೀಸರ ಗುಂಡಿಗೆ ವ್ಯಕ್ತಿ ಬಲಿ ಕಾವಲ್ ಭೈರಸಂದ್ರ ಗಲಭೆ; ಪೊಲೀಸರ ಗುಂಡಿಗೆ ವ್ಯಕ್ತಿ ಬಲಿ

ಬೆಂಗಳೂರಿನಲ್ಲಿ ಗಲಭೆ

ಬೆಂಗಳೂರಿನಲ್ಲಿ ಗಲಭೆ

ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.

ಮೂವರು ಸಾವು, ಹಲವರ ಬಂಧನ

ಮೂವರು ಸಾವು, ಹಲವರ ಬಂಧನ

ಕಾವಲ್ ಭೈರಸಂದ್ರದಲ್ಲಿ ನಡೆದ ಗಲಭೆಯನ್ನು ಹತೋಟಿಗೆ ತರಲು ಪೊಲೀಸರು ಅಶ್ರಯವಾಯು ಸಿಡಿಸಿದ್ದರು. ಈ ವೇಳೆ 3 ಜನರು ಮೃತಪಟ್ಟಿದ್ದಾರೆ, ಗಲಭೆಗೆ ಸಂಬಂಧಿಸಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಗೃಹ ಸಚಿವರ ಎಚ್ಚರಿಕೆ

ಗೃಹ ಸಚಿವರ ಎಚ್ಚರಿಕೆ

"ಹಿಂಸಾಚಾರಕ್ಕೆ ಸಂಬಂಧಿದಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಆಸ್ತಿ ಪಾಸ್ತಿ ನಷ್ಟ ಮಾಡಿದ ಗಲಭೆಕೋರರ ಆಸ್ತಿ ಜಪ್ತಿ ಮಾಡಲಾಗುತ್ತದೆ ಹಾಗೂ ಗಲಭೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ" ಎಂದು ಗೃಹ ಸಚಿವರು ಹೇಳಿದ್ದಾರೆ.

ಮ್ಯಾಜಿಸ್ಟ್ರೇಟ್ ತನಿಖೆ

ಮ್ಯಾಜಿಸ್ಟ್ರೇಟ್ ತನಿಖೆ

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಬೆಂಗಳೂರಿನ ದೇವರಜೀವನಹಳ್ಳಿ ಹಾಗು ಕಾಡುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಡೆದ ಗಲಭೆಗಳ ಕುರಿತು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಂದ ಸಮಗ್ರ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.

English summary
Violence in DJ Halli, KJ Halli police station limits in Bengaluru, Karnataka on August 11, 2020. Home minister Basavaraj Bommai visited the spot.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X