• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೆ. ಜಿ. ಹಳ್ಳಿ ಗಲಭೆ; ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ

|

ಬೆಂಗಳೂರು, ಆಗಸ್ಟ್ 13 : ಬೆಂಗಳೂರಿನ ಕೆ.ಜಿ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ಮಂಗಳವಾರ ರಾತ್ರಿ ಕಾವಲ್ ಭೈರಸಂದ್ರ, ಡಿ. ಜೆ. ಹಳ್ಳಿ, ಕೆ. ಜೆ. ಹಳ್ಳಿಯಲ್ಲಿ ಗಲಭೆ ನಡೆದಿತ್ತು.

   DJ halli , KG Halliಯಲ್ಲಿ ಮೃತಪಟ್ಟವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ Zameer Ahmed | Oneindia Kannada

   ಉಡ್ತಾ 'ಪಂಜಾಬ್‌'ನಿಂದ ಉಡ್ತಾ 'ಬೆಂಗಳೂರ್' ತನಕ!

   ಗುರುವಾರ ಸರಣಿ ಟ್ವೀಟ್‌ಗಳ ಮೂಲಕ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆಯನ್ನು ನೀಡಿದ್ದಾರೆ. "ನಿನ್ನೆಯ ಕೆ. ಜಿ. ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ‌ ಪಕ್ಷದ ಮುಖಂಡರಾದ ಸಂಪತ್ ಅವರ ಕೈವಾಡವಿದೆ ಎಂದು ನಾನು ಕೆಲವರ ಬಳಿ ಹೇಳಿದ್ದೇನೆ ಎಂಬ ಸುಳ್ಳು ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ" ಎಂದು ಜಮೀರ್ ಹೇಳಿದ್ದಾರೆ.

   ಡಿ. ಜೆ. ಹಳ್ಳಿ ನಿವಾಸಿಗಳಿಗೆ ಎದುರಾಯ್ತು ಹೊಸ ಆತಂಕ

   ಮೋದಿ ಕನಸಿಗೆ ಕೊಳ್ಳಿ ಇಟ್ಟ ಕೆಎಸ್ಎಸ್ಐಡಿಸಿ, ಏನಿದು ಭಾರಿ ಆರೋಪ?

   "ಮಾಧ್ಯಮಗಳಿಗೆ ನನ್ನದೊಂದು ಮನವಿ, ದಯವಿಟ್ಟು ಕಲ್ಪಿತ ವರದಿಗಳನ್ನು ಪ್ರಸಾರ ಮಾಡಿ ಜನರಿಗೆ ತಪ್ಪು ಸಂದೇಶ ನೀಡಬೇಡಿ" ಎಂದು ಶಾಸಕ ಜಮೀರ್ ಅಹ್ಮದ್ ಖಾನ್ ಮನವಿಯನ್ನು ಮಾಡಿದ್ದಾರೆ.

   ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರೋ, ಬಲಿಯಾದವರೋ ಇನ್ಯಾರೋ: ಜಮೀರ್ ಅಹ್ಮದ್

   ಜಮೀರ್ ಅಹಮದ್ ಖಾನ್ ಅವರು, "ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ" ಎಂದು ಹೇಳಿದ್ದಾರೆ.

   ಬೆಂಗಳೂರಲ್ಲಿ ಗಲಭೆ; ಸ್ಥಳಕ್ಕೆ ಗೃಹ ಸಚಿವರ ಭೇಟಿ

   ಬೆಂಗಳೂರಿನ ಪುಲಿಕೇಶಿ ನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೋದರಳಿಯ ನವೀನ್ ಒಂದು ಸಮುದಾಯದ ವಿರುದ್ಧ ಫೇಸ್‌ ಬುಕ್ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಆರಂಭವಾದ ಗಲಭೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

   ಗಲಭೆ ನಿಯಂತ್ರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆಗ ಮೂವರು ಮೃತಪಟ್ಟಿದ್ದರು. ನೂರಕ್ಕೂ ಅಧಿಕ ಜನರನ್ನು ಗಲಭೆಗೆ ಸಂಬಂಧಿಸಿದಂತೆ ಇದುವರೆಗೂ ಬಂಧಿಸಲಾಗಿದೆ.

   English summary
   Chamarajpet Congress MLA Zameer Ahmed Khan clarification on KG Halli violence.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X