ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

"ಪೊಲೀಸ್ ಆಯುಕ್ತರಿಗೇ ಧಮ್ಕಿ ಹಾಕುವುದೇಕೆ ಡಿಕೆ ಶಿವಕುಮಾರ್ ಅವರೇ?"

|
Google Oneindia Kannada News

ಬೆಂಗಳೂರು, ಆಗಸ್ಟ್.21: ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆದರಿಕೆ ಹಾಕುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆರೋಪಿಸಿದ್ದಾರೆ.

Recommended Video

ಅಭಿಮಾನಿಗಳ ಮುಂದೆ ಬೇಡಿಕೆ ಇಟ್ಟ Sachin Tendulkar | Oneindia Kannada

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣದ ಕಿಡಿಗೇಡಿಗಳ ವಿರುದ್ಧ ಪ್ರಾಮಾಣಿಕ ತನಿಖೆ ನಡೆಸುತ್ತಿರುವ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಕೆಪಿಸಿಸಿ ಅಧ್ಯಕ್ಷರು ಸಾರ್ವಜನಿಕವಾಗಿ ಧಮ್ಕಿ ಹಾಕಿದ್ದಾರೆ ಮತ್ತು ಬಿಜೆಪಿ ಏಜೆಂಟ್ ಎಂದು ನಿಂದಿಸಿದ್ದಾರೆ.

ಅಭಿಮಾನಿಗಳ ಸಂಘ ಕಟ್ಟಬೇಡಿ; ಡಿ. ಕೆ. ಶಿವಕುಮಾರ್ ಎಚ್ಚರಿಕೆ ಅಭಿಮಾನಿಗಳ ಸಂಘ ಕಟ್ಟಬೇಡಿ; ಡಿ. ಕೆ. ಶಿವಕುಮಾರ್ ಎಚ್ಚರಿಕೆ

ಪ್ರಾಮಾಣಿಕ ತನಿಖೆಯ ಬಗ್ಗೆ ಇಷ್ಟು ಭಯ ಏಕೆ ಮಿಸ್ಟರ್ ಡಿಕೆ ಶಿವಕುಮಾರ್ ಅವರೇ? ಯಾರನ್ನು ರಕ್ಷಿಸಲು ಈ ಪ್ರಯತ್ನ? ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಟ್ವಿಟರ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

Bangalore Violence: Minister Dr K Sudhakar Reaction On DK Shivakumar Allegations On Police Commissioner


ಕಾಂಗ್ರೆಸ್ ಮಾಡುತ್ತಿರುವ ಆರೋಪವೇನು?:

ಕಾಡುಗೊಂಡನಹಳ್ಳಿ (ಕೆ.ಜಿ.ಹಳ್ಳಿ) ಮತ್ತು ದೇವರ ಜೀವನಹಳ್ಳಿ(ಡಿ.ಜೆ.ಹಳ್ಳಿ)ಯಲ್ಲಿ ನಡೆದ ದಾಂಧಲೆ ಪ್ರಕರಣದಲ್ಲಿ ಆಡಳಿತಾರೂಢ ಬಿಜೆಪಿ ನಾಯಕರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದರು. ಪೊಲೀಸ್ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹೇಳಿದ್ದರು.

ಅಲ್ಲದೇ ಹಿಂಸಾಚಾರಕ್ಕೆ ಕಾಂಗ್ರೆಸ್ ಕಾರಣವಲ್ಲ. ಪರಿಸ್ಥಿತಿ ನಿಭಾಯಿಸುವಲ್ಲಿ ಪೊಲೀಸರು ಸೋತಿದ್ದಾರೆ. ಹಿಂಸಾಚಾರಕ್ಕೆ ಕಾರಣರಾದ ಆರೋಪಿಗಳ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಲಿ. ಆದರೆ ಕಾಂಗ್ರೆಸ್ ಪಕ್ಷದ ಹೆಸರನ್ನು ಕೆಡಿಸದಂತೆ ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದರು.

English summary
Bangalore Violence: Minister Dr K Sudhakar Reaction On DK Shivakumar Allegations On Police Commissioner.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X