Viral Video: ಬೆಂಗಳೂರು ಪೊಲೀಸರಿಗೆ ಕೆಟ್ಟ ಪದ ಬಳಸಿದ ಆಂಧ್ರಪ್ರದೇಶದ IAS ಅಧಿಕಾರಿ, ಮೂವರ ಮೇಲೆ ಎಫ್‌ಐಆರ್

Viral Video: ಆಂಧ್ರಪ್ರದೇಶದ ಐಎಎಸ್ ಅಧಿಕಾರಿಯೊಬ್ಬರು ಬೆಂಗಳೂರಿನ ಪೊಲೀಸರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗರಿಂದ ಆಕ್ಷೇಪ ವ್ಯಕ್ತವಾಗಿದೆ. ಬೆಂಗಳೂರಿನ ಪಬ್‌ನಲ್ಲಿ ಬೆಂಗಳೂರು ನಗರ ಪೊಲೀಸರು ತಡರಾತ್ರಿ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಸಂಘರ್ಷ ಏರ್ಪಟ್ಟಿದೆ. ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಮತ್ತು ಅವರ ಸಹೋದ್ಯೋಗಿಗಳ ಮೇಲೆ ಹಲ್ಲೆ ಮತ್ತು ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಿದ ಆರೋಪದ ಮೇಲೆ ಆಂಧ್ರಪ್ರದೇಶ ಕೇಡರ್‌ನ ಐಎಎಸ್ ಅಧಿಕಾರಿ ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಬ್‌ನಲ್ಲಿ ಅಕ್ಟೋಬರ್ 10 ರಂದು ಬೆಳಗಿನ ಜಾವ 1.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಕಳೆದ ಆರು ತಿಂಗಳಿನಿಂದ ಸಿಸಿಬಿ ವಿಶೇಷ ತನಿಖಾ ದಳದೊಂದಿಗೆ ಕೆಲಸ ಮಾಡುತ್ತಿರುವ ಪೊಲೀಸ್ ಇನ್ಸ್‌ಪೆಕ್ಟರ್, ಐಎಎಸ್ ಅಧಿಕಾರಿ ವಿಕಾಸ್ ಮರ್ಮತ್ ಮತ್ತು ಇತರ ಮೂವರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

Viral Video Andhra Pradesh IAS Officer Allegedly Abuses Bengaluru Police FIR Against Him and Three Others

ಕಬ್ಬನ್ ಪಾರ್ಕ್ ಮತ್ತು ಅಶೋಕ್ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತಡರಾತ್ರಿ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳನ್ನು ಪರಿಶೀಲಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ ಅಕ್ಟೋಬರ್ 9 ರಂದು ತಪಾಸಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಆಂಧ್ರಪ್ರದೇಶದ ಅಧಿಕಾರಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ಸ್‌ಪೆಕ್ಟರ್, ಇತರ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಬ್‌ಗೆ ಭೇಟಿ ನೀಡಿದ್ದು, ಗ್ರಾಹಕರ ವಯಸ್ಸನ್ನು ಪರಿಶೀಲಿಸಲು ಅವರ ಗುರುತಿನ ಚೀಟಿಗಳನ್ನು ಪರಿಶೀಲಿಸುವಾಗ, ನಾಲ್ವರು ವ್ಯಕ್ತಿಗಳು ಕ್ಷುಲ್ಲಕ ವಿಷಯಕ್ಕೆ ಅವರೊಂದಿಗೆ ಜಗಳವಾಡಿದರು ಮತ್ತು ಅವರನ್ನು ಮತ್ತು ಅವರ ಸಹೋದ್ಯೋಗಿಗಳನ್ನು ನಿಂದಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ವಿಕಾಸ್ ಮರ್ಮತ್, ಅಭಯ್ ಉದಯಸಿಂಗ್, ನಿತೀಶ್ ಮತ್ತು ರೋಷನ್ ಎಂಬವರು ಇನ್ಸ್‌ಪೆಕ್ಟರ್ ಅವರ ಅಧಿಕೃತ ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದರು, ಪೊಲೀಸ್ ಸಿಬ್ಬಂದಿಯನ್ನು ನಿಂದಿಸಿದರು ಮತ್ತು ಹಲ್ಲೆ ಮಾಡಿದರು ಮತ್ತು ಬೆದರಿಕೆ ಹಾಕಿದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನಾಲ್ವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 115(2) (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು), 351(2) (ಕ್ರಿಮಿನಲ್ ಬೆದರಿಕೆ), 352 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ), 132 (ಸಾರ್ವಜನಿಕ ಸೇವಕರು ತಮ್ಮ ಕರ್ತವ್ಯ ನಿರ್ವಹಿಸದಂತೆ ತಡೆಯಲು ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು 3(5) (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ವಿರೋಧ

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಬೆಂಗಳೂರು ನಗರಕ್ಕೆ ಬಂದು ಆಂಧ್ರಪ್ರದೇಶದ ಅಧಿಕಾರಿಗಳು ಈ ರೀತಿ ವರ್ತಿಸಿದ್ದಾರೆ. ಇದು ಬೆಂಗಳೂರು ಹಾಗೂ ಕರ್ನಾಟಕದಲ್ಲಿ ವಲಸೆ ಸಮಸ್ಯೆಯ ಮುಂದುವರಿದ ಭಾಗ ಎಂದು ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+