ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ: ಬಿಎಂಟಿಸಿ ಸಿಬ್ಬಂದಿಯಿಂದ ಬಸ್ ಪ್ರಯಾಣಿಕನ ಮೇಲೆ ಹಲ್ಲೆ

|
Google Oneindia Kannada News

ಬೆಂಗಳೂರು, ಜು. 29: ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕ ಗೂಂಡಾಗಳಂತೆ ವರ್ತಿಸಿ ಸಾಮಾನ್ಯ ವ್ಯಕ್ತಿ ಮೇಲೆ ಹಲ್ಲೆ ಮಾಡಿರುವ ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಸಾಮಾನ್ಯ ವ್ಯಕ್ತಿಯನ್ನು ಥಳಿಸುತ್ತಿರುವ ಬಿಎಂಟಿಸಿ ಸಿಬ್ಬಂದಿಯ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವನಹಳ್ಳಿ ಪಟ್ಟಣದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಅವಾಚ್ಯ ಪದದಿಂದ ನಿಂದನೆ ಮಾಡಿದ ಎಂದು ಆರೋಪಿಸಿ ಚಾಲಕ ಮತ್ತು ನಿರ್ವಾಹಕ ಬಸ್ ಪ್ರಯಾಣಿಕರನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಕೈ ಮುಗಿದು ಕೇಳಿಕೊಂಡರೂ ಬಿಡದೇ ಸಾರ್ವಜನಿಕರ ಮಂದೆ ಮನ ಬಂದಂತೆ ಹಲ್ಲೆ ಮಾಡಿದ್ದಾರೆ. ಬಸ್ ಚಾಲಕ ಮತ್ತು ನಿರ್ವಾಹಕನಿಂದ ಪೆಟ್ಟು ತಿನ್ನಲಾಗದೇ ಓಡಿ ಹೋಗುವ ಗ್ರಾಹಕನನ್ನು ಹಿಂಬಾಲಿಸಿ ಹಲ್ಲೆ ಮಾಡಿದ್ದಾರೆ. ಸಾಮಾನ್ಯ ಪ್ರಜೆ ಮೇಲೆ ಗೂಂಡಾ ವರ್ತನೆ ತೋರಿರುವ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕನ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ಆಧರಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬಿಎಂಟಿಸಿ ಸಿಬ್ಬಂದಿ ಮುಂದೆ ಕ್ರಮ ಜರುಗಿಸಲು ಪೊಲೀಸರು ಮುಂದಾಗಿದ್ದಾರೆ.

Viral video: BMTC staff attack on passenger in Devanahalli

ಕುಡಿದ ಅಮಲಿನಲ್ಲಿ ಪ್ರಯಾಣಿಕ ನಿರ್ವಾಹಕನ್ನುನಿಂದನೆ ಮಾಡಿದ್ದಕ್ಕಾಗಿ ಹಲ್ಲೆ ಮಾಡಲಾಗಿದೆ ಎಂದು ಬಸ್ ಚಾಲಕ ಮತ್ತು ನಿರ್ವಾಹಕ ಸಮರ್ಥನೆ ನೀಡಿದ್ದಾರೆ. ಆದರೆ, ಒಂದು ಮಾತಿಗೆ ಈ ರೀತಿ ಗೂಂಡಾ ವರ್ತನೆ ತೋರಿರುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದ್ದು, ಬಿಎಂಟಿಸಿ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recommended Video

Rahul Dravid ಅವರ ಪ್ರಕಾರ ಯಾವ ಆಟಗಾರ ಬೆಸ್ಟ್ ಆಟಗಾರ | Oneindia Kannada

ಒಬ್ಬ ಸಾಮಾನ್ಯ ವ್ಯಕ್ತಿಯ ಮೇಲೆ ಈ ಪರಿ ಹಲ್ಲೆ ಮಾಡಿರುವುದು ಖಂಡನೀಯ. ಪ್ರಯಾಣಿಕ ತಪ್ಪು ಮಾಡಿದ್ದರೆ ಆತನ ವಿರುದ್ಧ ಬಿಎಂಟಿಸಿ ಸಿಬ್ಬಂದಿ ಪೊಲೀಸರಿಗೆ ದೂರು ನೀಡಬೇಕಿತ್ತು. ಆದರೆ, ಬಿಎಂಟಿಸಿ ಸಿಬ್ಬಂದಿಯೇ ಗೂಂಡಾಗಳಂತೆ ವರ್ತಿಸಿದ್ದಾರೆ. ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಂಡು ತನಿಖೆ ನಡೆಸಬೇಕಿತ್ತು. ಈ ಕುರಿತು ಮಾನವ ಹಕ್ಕು ಆಯೋಗಕ್ಕೆ ದೂರು ನೀಡುತ್ತಿರುವುದಾಗಿ ಎಂದು ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿಗೌಡ ತಿಳಿಸಿದ್ದಾರೆ.

English summary
A video of a BMTC crew carrying a deadly attack on a passenger has gone viral on the social media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X