Viral video: ಬ್ರ್ಯಾಂಡ್ ಬೆಂಗಳೂರಲ್ಲ, ಬ್ಯಾಡ್ ಬೆಂಗಳೂರು!
ಬೆಂಗಳೂರಿನ ಆಟೋ ಚಾಲಕನ ಅಸಭ್ಯ ವರ್ತನೆಯಿಂದ ಬೆಂಗಳೂರಿನ ಬಗ್ಗೆ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಬ್ಯಾಡ್ ಬೆಂಗಳೂರು ಎನ್ನುವರ್ಥದಲ್ಲಿ ಟ್ರೋಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಯಾವುದೇ ಸಣ್ಣ ಘಟನೆ ನಡೆದರೂ ಅದು ದೇಶಾದ್ಯಂತ ಸುದ್ದಿಯಾಗಿ, ಟ್ರೆಂಡ್ ಆಗುತ್ತದೆ. ಆದರೆ, ಬೆಂಗಳೂರಿನಲ್ಲಿ ಗುರುವಾರ ಆಟೋ ಚಾಲಕನೊಬ್ಬ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಲ್ಲದೇ ಹಲ್ಲೆಯನ್ನೂ ಮಾಡಿದ್ದಾನೆ. ಇದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಆದರೆ, ಬೆಂಗಳೂರು ಹಾಗೂ ಕರ್ನಾಟಕದ ಬಗ್ಗೆಯೂ ಕೆಲವರು ಈ ಘಟನೆಯಿಂದ ಜಡ್ಜ್ ಮಾಡುತ್ತಿದ್ದಾರೆ.
ಯಾವುದೇ ಊರಿಗೆ ಹೋದಾರು ಆ ಊರಿನ ಬಗ್ಗೆ ಮೊದಲು ಒಳ್ಳೆಯ ಅಭಿಪ್ರಾಯ ಮೂಡಿಸಲು ಕಾರಣರಾಗುವವರು ಆಟೋ ಚಾಲಕರು. ಆದರೆ, ಬೆಂಗಳೂರಿನಲ್ಲಿ ಮಹಿಳೆಯೊಬ್ಬರು ಆ್ಯಪ್ ಆಟೋ ಬುಕ್ ಮಾಡಿ, ಆಟೋ ಪ್ರಯಾಣ ರದ್ದುಗೊಳಿಸಿದ್ದಕ್ಕೆ ಆಟೋ ಚಾಲಕ ಅಸಭ್ಯವಾಗಿ ವರ್ತಿಸಿರುವುದಕ್ಕೆ ಕನ್ನಡಿಗರು ಸೇರಿದಂತೆ ದೇಶದ ವಿವಿಧೆಡೆಯಿಂದ ವಿರೋಧ ವ್ಯಕ್ತವಾಗಿದೆ. ಆದರೆ, ಈ ಘಟನೆಯನ್ನು ಹಿಂದಿ -ಕನ್ನಡದ ನಡುವೆ ಭಾಷಾ ವೈಷಮ್ಯ, ಕನ್ನಡಿಗರೆಲ್ಲರೂ ಹೀಗೆ ಮತ್ತು ಬೆಂಗಳೂರಿನಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎನ್ನುವ ಅರ್ಥದಲ್ಲಿ ಬಿಂಬಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಪರಿಸ್ಥಿತಿ ಹದಗೆಡುತ್ತಿದೆ
ಈ ಘಟನೆಗೆ ಸಂಬಂಧಿಸಿದಂತೆ ಹಲವರು ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಪರಿಸ್ಥಿತಿ ಹದಗೆಡುತ್ತಿದೆ. ಬೆಂಗಳೂರಿನಲ್ಲಿ ಬಹುತೇಕ ಆಟೋ ಚಾಲಕರು ಇದೇ ವರ್ತನೆ ತೋರುತ್ತಿದ್ದಾರೆ ಎನ್ನುವ ಕಾಮೆಂಟ್‌ಗಳನ್ನು ಮಾಡಲಾಗುತ್ತಿದೆ. ಆ್ಯಪ್ ನಲ್ಲಿ ಯಾರಾದರು ಆಟೋ ಬುಕ್ಕಿಂಗ್ ಕ್ಯಾನ್ಸಲ್ ಮಾಡಿದರೆ ಅದರ ದಂಡವು ಸಹ ಆಟೋ ಚಾಲಕನಿಗೆ ಹೋಗುತ್ತದೆ ಇಷ್ಟು ಸಣ್ಣ ವಿಷಯಕ್ಕೆ ಹಲ್ಲೆ ಮಾಡುವ ಅವಶ್ಯಕತೆ ಇರಲಿಲ್ಲ.
ಫೋನ್ ಕಸಿದುಕೊಳ್ಳುವುದು ಅಪಾಯಕಾರಿ. ಅಂದರೆ ಅವನು ಯಾವುದೇ ಹಂತಕ್ಕೆ ಬೇಕಾದರೂ ಹೋಗಬಹುದು. ಈ ರೀತಿ ಮಹಿಳೆಯೊಂದಿಗೆ ಜಗಳವಾಡಿದ ನಂತರ, ಅವಳು ಆತ ಆಟೋದಲ್ಲಿ ಪ್ರಯಾಣಿಸುತ್ತಾಳೆ ಎಂದು ಅವನು ನಿರೀಕ್ಷಿಸುತ್ತಿರುವುದಾದರೂ ಹೇಗೆ ? ಅದರಲ್ಲೂ ಕನ್ನಡದಲ್ಲಿ ಅವಾಚ್ಯವಾಗಿ ಬೈಯುವುದೇ ? ಎಂದು ಆದಿ ಎನ್ನುವವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಈ ರೀತಿ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ.
Very sick and rabid behaviour- getting worse in BLR. Snatching the phone is dangerous- that means he can go to any extent. Passengers will be penalised for any last minute cancellations and that benefit goes to the driver (this needs to be verified, maybe cause of his irate…
— Adi | 🇮🇳 (@AdiSpeaX) September 5, 2024
ದುರಾದೃಷ್ಟವಶಾತ್ ಬೆಂಗಳೂರಿನಲ್ಲಿ ಈ ರೀತಿಯ ಪರಿಸ್ಥಿತಿ ಹೆಚ್ಚಾಗುತ್ತಿದೆ ಎಂದು ಸಹ ಕೆಲವರು ಅಭಿಪ್ರಾಯಪಟ್ಟಿದ್ದಾರೆ.
This kind of incident is rising in Bangalore unfortunately
— TommyHillFiger (@TommyHillFigr) September 5, 2024
ಬೆಂಗಳೂರಿನಲ್ಲಿ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿರುವುದು ಏಕೆ ಎನ್ನುವ ಪ್ರಶ್ನೆ ಎದುರಾಗಿದೆ ಎಂದೂ ಕೆಲವರು ಹೇಳಿದ್ದಾರೆ.
ಚೆನ್ನೈನಲ್ಲೂ ಇದೇ ಪರಿಸ್ಥಿತಿ
ಬೆಂಗಳೂರು ಹಾಗೂ ಚೆನ್ನೈನಲ್ಲಿ ಆಟೋ ಚಾಲಕರು ಗೂಂಡಾಗಳಂತೆ ವರ್ತಿಸುತ್ತಾರೆ. ಈ ಎರಡೂ ನಗರಗಳಲ್ಲೂ ಸಹ ಆಟೋ ಚಾಲಕರ ವರ್ತನೆ ಸರಿ ಇಲ್ಲ ಎಂದು ಸ್ಮಿತಿ ಶರ್ಮಾ ಎನ್ನುವವರು ಟ್ವೀಟ್ ಮಾಡಿದ್ದಾರೆ. ಆದರೆ, ಇದಕ್ಕೆ ಜನ ವಿರೋಧ ವ್ಯಕ್ತಪಡಿಸಿದ್ದಾರೆ. ಒಂದಿಬ್ಬರು ಮಾಡುವ ತಪ್ಪಿಗೆ ಎಲ್ಲರೂ ಅದೇ ರೀತಿ ವರ್ತಿಸುತ್ತಾರೆ ಎಂದು ಹೇಳಬಾರದು. ಎಲ್ಲಾ ಆಟೋ ಚಾಲಕರು ಸಹ ಈ ರೀತಿ ವರ್ತಿಸುವುದಿಲ್ಲ ಎಂದು ಸರ್ಮಥಿಸಿಕೊಂಡಿದ್ದಾರೆ.
Bangalore & Chennai auto wallah always behave like goondas.
— anupam (@anupam69944442) September 6, 2024
-
ಆಶಾ ಭೋಸ್ಲೆ ಮೊಮ್ಮಗಳು ಜನೈಗೆ ಸಾಂತ್ವನ ಹೇಳಿದ ಕ್ರಿಕೆಟಿಗ ಮೊಹಮ್ಮದ್ ಸಿರಾಜ್; ವಿಡಿಯೋ ವೈರಲ್ -
Yuzvendra Chahal: ಯುಜ್ವೇಂದ್ರ ಚಹಾಲ್ 'ಕ್ಯೂಟ್' ಕಾಮೆಂಟ್, ತಾನಿಯಾ ಚಟರ್ಜಿ ವಿಡಿಯೋ ವೈರಲ್ -
ತಾಯಿ ಮಂಗನ ಮೌನ ರೋದನೆ: ನಮ್ಮ ಮೆಟ್ರೋ ನಿಲ್ದಾಣದಲ್ಲಿ ಕರುಣಾಜನಕ ದೃಶ್ಯ..Video Viral -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications