Video: ಬೆಂಗಳೂರಿನ ಕೆಜಿಎಫ್‌ನಲ್ಲಿ ಏಕಾಏಕಿ ಕುಸಿದು ಬಿದ್ದ 2 ಅಂತಸ್ತಿನ ಕಟ್ಟಡ- ವೀಡಿಯೋ ವೈರಲ್
ಸಾಮಾಜಿಕ ಜಾಲತಾಣದಲ್ಲಿ ಆಘಾತಕಾರಿ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ಕ್ಲಿಪ್‌ನಲ್ಲಿ ಕಟ್ಟಡವೊಂದು ನೆಲಕ್ಕಚ್ಚುವುದನ್ನ ಕಾಣಬಹುದು. ಬೆಂಗಳೂರಿನ ಕೆಜಿಎಫ್ (ಕೋಲಾರ ಗೋಲ್ಡ್ ಫೀಲ್ಡ್) ನಲ್ಲಿ ಕಟ್ಟಡವೊಂದು ಕುಸಿದು ಬಿದ್ದ ಘಟನೆ ನಡೆದಿದೆ.
ವರದಿ ಪ್ರಕಾರ ಕಟ್ಟಡದಲ್ಲಿ ನವೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಕಟ್ಟಡದಲ್ಲಿ ಭಾರಿ ಬಿರುಕು ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ ಸ್ಥಳಕ್ಕೆ ಆಗಮಿಸಿ, ಕಟ್ಟಡ ಕುಸಿಯುವ ಮುನ್ನ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದಾರೆ. ಇದರಿಂದಾಗಿ ಭಾರಿ ದೊಡ್ಡ ಅನಾಹುತ ತಪ್ಪಿದೆ. ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ಯಾವಾಗ ನಡೆದಿದೆ ಎಂಬುದು ಸದ್ಯಕ್ಕೆ ದೃಢಪಟ್ಟಿಲ್ಲ.
A multi-story building collapsed in Bangarpet, KGF. Renovation work was underway in the building, which had caused significant cracks to appear in the structure. As a precaution, police and fire department personnel quickly arrived at the scene. Acting swiftly, they evacuated… pic.twitter.com/v00f4cNC1x
— Karnataka Portfolio (@karnatakaportf) November 8, 2024
ಏನಿದು ಘಟನೆ?
ಈ ವೀಡಿಯೊವನ್ನು ಹಂಚಿಕೊಳ್ಳುವಾಗ ಬಳಕೆದಾರರು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ - ಬೆಂಗಳೂರಿನ ಕೆಜಿಎಫ್ (ಕೋಲಾರ ಗೋಲ್ಡ್ ಫೀಲ್ಡ್) ನ ಬಂಗಾರಪೇಟೆಯಲ್ಲಿ ದೊಡ್ಡ ಕಟ್ಟಡ ಕುಸಿದಿದೆ. ಈ ಕಟ್ಟಡದಲ್ಲಿ ನವೀಕರಣ ಕಾರ್ಯ ನಡೆಯುತ್ತಿತ್ತು. ಈ ಕಾಮಗಾರಿಯಿಂದಾಗಿ ಕಟ್ಟಡದಲ್ಲಿ ಭಾರಿ ಬಿರುಕು ಕಾಣಿಸಿಕೊಂಡಿದೆ. ತಕ್ಷಣ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ವಹಿಸಿದ್ದಾರೆ. ತ್ವರಿತವಾಗಿ ಸ್ಥಳದಲ್ಲಿದ್ದವರನ್ನು ದೂರು ಕಳುಹಿಸಿದ್ದಾರೆ. ಕಟ್ಟಡ ಕುಸಿಯುವ ಮೊದಲು ಎಲ್ಲರನ್ನು ಸ್ಥಳಾಂತರಿಸಿದ್ದಾರೆ. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಗ್ನಿಶಾಮಕ ದಳ ಹಾಗೂ ಪೊಲೀಸರ ಬಗ್ಗೆ ಮೆಚ್ಚುಗೆ
ಈ ವಿಡಿಯೋ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ವೈರಲ್ ಆಗುತ್ತಿದೆ. ಈ ಕ್ಲಿಪ್ ಅನ್ನು ಎಕ್ಸ್ ಹ್ಯಾಂಡಲ್ @karnatakaportf ಪೋಸ್ಟ್ ಮಾಡಿದೆ. ಈ 12 ಸೆಕೆಂಡುಗಳ ವೀಡಿಯೊದಲ್ಲಿ, ಕಟ್ಟಡ ಇದ್ದಕ್ಕಿದ್ದಂತೆ ಕುಸಿದು ನೆಲಕ್ಕಚ್ಚಿದೆ. ಈ ವೇಳೆ ಅಲ್ಲಿದ್ದವರು ಘಟನೆಯ ವಿಡಿಯೋ ಮಾಡಿದ್ದಾರೆ.
ಸಮಯ ಪ್ರಜ್ಞೆ ಮೆರೆದ ಪೊಲೀಸರು ಜನರನ್ನು ಕಟ್ಟಡದಿಂದ ಹೊರಕ್ಕೆ ಕರೆತಂದಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ. ಇದರಿಂದಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಆದರೆ ಶಾಲೆಯ ಮುಂಭಾಗದಲ್ಲಿದ್ದ ಕಾಂಪೌಡ್ ಮೇಲೆ ಕಟ್ಟಡ ಕುಸಿದ ಪರಿಣಾಮ ಗೋಡೆಗೆ ಹಾನಿಯಾಗಿದೆ.
ಬಳಿಕ ಅಗ್ನಿಶಾಮಕ ಸಿಬ್ಬಂದಿ ಕಟ್ಟದ ಅವಶೇಷಗಳನ್ನು ತೆರವುಗೊಳಿಸಲು ಕಾರ್ಯ ನಡೆಸಿದರು. ಘಟನೆಯಿಂದ ಸುತ್ತಮುತ್ತಲು ಇದ್ದ ಕಟ್ಟಕ್ಕೆ ಕೊಮಚ ಹಾನಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications