Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್‌ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳು ನಡೆಯುತ್ತಲೇ ಇವೆ. ಮೊನ್ನೆಯಷ್ಟೇ ನಗರದ ಹೃದಯ ಭಾಗದಲ್ಲಿ ತಡರಾತ್ರಿ ಐಶಾರಾಮಿ ಲ್ಯಾಂಬೋರ್ಗಿನಿ ಕಾರಿನ ಡ್ರಿಫ್ಟಿಂಗ್ ಸ್ಟಂಟ್ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಮದ್ಯ ಸೇವಿಸುತ್ತಲೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಿರುವ ಯುವಕರ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸಂಚಾರ ಸುರಕ್ಷತೆಯ ಕಳವಳ ವ್ಯಕ್ತವಾಗಿದೆ.
ಬೆಂಗಳೂರಿನ ಬಿಟಿಎಂ ರಸ್ತೆಯಲ್ಲಿ ರಾತ್ರಿ ವೇಳೆ ಸ್ಕೂಟರ್‍ನಲ್ಲಿ ಮೂವರು ಯುವಕರು ತೆರಳುತ್ತಿರುವ ದೃಶ್ಯ ಕಂಡು ಬಂದಿದೆ. ಹಿಂಬದಿ ಕೂತಿದ್ದ ವ್ಯಕ್ತಿಯ ಕೈಯಲ್ಲಿ ಬಿಯರ್ ಬಾಟಲಿ ಇದ್ದು, ಕುಡಿಯುತ್ತಲೇ ಅಜಾಗರೂಕವಾಗಿ ಸಂಚಾರ ಮಾಡಿದ್ದಾರೆ. ಈ ವಿಡಿಯೋವನ್ನು ಕರ್ನಾಟಕ ಪೋರ್ಟ್‌ಫೊಲಿಯೋ ಎಕ್ಸ್ (@karnatakaportf) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಬೆಂಗಳೂರು ಸಂಚಾರಿ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ.

ಬೆಂಗಳೂರು ರಸ್ತೆಗಳು ಮೈದಾನವೇ?
ಕುಡಿದು ವಾಹನ ಚಲಾಯಿಬಾರದೆಂಬ ಸಂಚಾರ ನಿಯಮ ಇದೆ. ಹೀಗಿದ್ದರೂ ಬೆಂಗಳೂರಿನ ರಸ್ತೆಗಳಲ್ಲಿ ಮದ್ಯ ಸೇವಿಸುತ್ತಲೇ ತ್ರಿಬಲ್ ರೈಡಿಂಗ್ ಮಾಡಿದ್ದಾರೆ. ನಗರದ ರಸ್ತೆಗಳು ಆಟದ ಮೈದಾನವಾದಂತಾಗಿದೆ. ಕಾನೂನಿನ ಭಯ, ಕನಿಷ್ಠ ಸಾಮಾಜಿಕ ಜವಾಬ್ದಾರಿ ಇಲ್ಲದ ಇವರ ವರ್ತನೆಗೆ ನೆಟ್ಟಿಗರು ಅಸಮಾಧಾನ ಹೊರ ಹಾಕಿದ್ದಾರೆ. ಒಬ್ಬ ವ್ಯಕ್ತಿ ಬೈಕ್ ಸವಾರಿ ಮಾಡುವಾಗ ಬಿಯರ್ ಬಾಟಲಿ ಹಿಡಿದಿದ್ದು, ಹಿಂಬದಿ ಸವಾರ ರಸ್ತೆಯುದ್ದಕ್ಕೂ ಮದ್ಯಪಾನ ಮಾಡುತ್ತಲೇ ಮಧ್ಯ ಕೂತ ವ್ಯಕ್ತಿಯೊಂದಿಗೆ ಮಾತನಾಡುವ, ಕೈ ಸನ್ನೆ ಮಾಡುವ ದೃಶ್ಯಗಳು ವಿಡಿಯೋದಲ್ಲಿ ಕಾಣಿಸುತ್ತವೆ.
ನಿರ್ಲಕ್ಷ್ಯದ ಚಾಲನೆ, ಇತರರ ಜೀವಕ್ಕೆ ಅಪಾಯ
ಇಂತಹ ವರ್ತನೆಗಳು, ಕಾನೂನುಬಾಹಿರ ಘಟನೆಗಳು ಬೆಂಗಳೂರಿನಲ್ಲಿ ಮರುಕಳಿಸುತ್ತಲೇ ಇವೆ. ಈ ಯುವಕರ ಇಂತಹ ಬೇಜವಾಬ್ದಾರಿ ನಡೆಯು ಸಂಚಾರ ಕಾನೂನುಗಳ ಸಂಪೂರ್ಣ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿತ್ತದೆ. ಸ್ವತಃ ತಮ್ಮ ಜೀವಕ್ಕೆ ಹಾಗೂ ಇತರ ಸವಾರರು, ಪ್ರಯಾಣಿಕರ ಜೀವಕ್ಕೆ ತೊಂದರೆ ಉಂಟು ಮಾಡುವಷ್ಟು ಭಯಾನಕವಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದು ಗಂಭೀರ ಅಪರಾಧ. ಟ್ರಿಪಲ್ ರೈಡಿಂಗ್ ನಲ್ಲಿರುವ ಇವರಲ್ಲಿ ಒಬ್ಬರು ಹೆಲ್ಮೆಟ್ ಹಾಕಿದ್ದು ಕಾಣಿಸುತ್ತದೆ. ಇನ್ನಿಬ್ಬರು ಹೆಲ್ಮೆಟ್ ಹಾಕಿದ್ದರ ಬಗ್ಗೆ ಖಚಿತತೆ ಇಲ್ಲ.
ಇಂತಹ ಅಪಾಯಕಾರಿ ಚಾಲನೆಯಿಂದ ರಸ್ತೆಯಲ್ಲಿ ಮುಗ್ಧ ಪಾದಚಾರಿಗಳು, ಇತರ ವಾಹನ ಚಾಲಕರು ಮತ್ತು ಸವಾರರ ಜೀವಕ್ಕೆ ಆಪತ್ತು ಎದುರಾಗುವ ಸಾಧ್ಯತೆ ಹೆಚ್ಚಿಸುತ್ತದೆ. ರಸ್ತೆಗಳಲ್ಲಿ ಸಂಚಾರ ಮಾಡುವಾಗ ಅಶಿಸ್ತು ಪ್ರದರ್ಶಿಸುವುದು ಕಾನೂನುಬಾಹಿರವಾಗಿದೆ.
License to Kill? Drunk Triple Riders Treat Bengaluru Roads Like a Playground
— Karnataka Portfolio (@karnatakaportf) March 22, 2026
Triple riding was observed on BTM Road, Bengaluru today, with some of the individuals not wearing helmets. Shockingly, one person was holding a beer bottle while riding, and the pillion rider was openly… pic.twitter.com/PsRPlWNOqq
ಕಠಿಣ ಕ್ರಮಕ್ಕೆ ನೆಟ್ಟಿಗರ ಆಗ್ರಹ
ಕೆಲವರು ದುರಹಂಕಾರದ ಮನಸ್ಥಿತಿಯಿಂದ ಈ ರೀತಿ ಮಾಡುತ್ತಾರೆ ಎನ್ನಲಾಗಿದೆ. ಅದು ಅವರೊಂದಿಗೆ ಇತರರನ್ನು ಅಪಾಯಕ್ಕೆ ತಳ್ಳುತ್ತದೆ. ರಸ್ತೆ ಅಪಘಾತಗಳಿಗೆ ಕಾರಣವಾಗುತ್ತದೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು, ಇವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸಂಚಾರಿ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾಗಿ ಕಾನೂನು ಜಾರಿಗೊಳಿಸಬೇಕು. ಇಂತಹ ಘಟನೆಗಳ ಮೇಲೆ ನಿಗಾ ಇಡಬೇಕು ಎಂದು ಆಗ್ರಹಿಸಿದ್ದಾರೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications