2017ರ ಜೂನ್ ತಿಂಗಳಿನಲ್ಲಿ ವಿಶ್ವ ಕನ್ನಡ ಸಮ್ಮೇಳನ
ಬೆಂಗಳೂರು, ಅಕ್ಟೋಬರ್ 28: 2017 ರ ಜೂನ್ ತಿಂಗಳಿನಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ
ಸಮ್ಮೇಳನವು ಮೂರು ದಿನಗಳ ಕಾಲ ನಡೆಯುತ್ತದೆ. 2017 ರಲ್ಲಿ ದಾವಣಗೆರೆ ಅಥವಾ ಬಳ್ಳಾರಿಯಲ್ಲಿ ಸಮ್ಮೇಳನ ಆಯೋಜಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ.

ವಿಶ್ವ ಕನ್ನಡ ಸಮ್ಮೇಳನಕ್ಕೆ 30 ಕೋಟಿ ಹಣ ಮೀಸಲಿರಿಸಲಾಗಿದೆ. 2011 ರಲ್ಲಿ ಬೆಳಗಾವಿಯಲ್ಲಿ ನಡೆದ ಸಮ್ಮೇಳನಕ್ಕೆ 35 ಕೋಟಿ ಖರ್ಚಾಗಿತ್ತು. ಈ ಬಾರಿಯೂ 35 ಕೋಟಿ ಅಂದಾಜಿಸಲಾಗಿದೆ ಎಂದು ಹೇಳಿದರು.
ಕಾರ್ಯಕ್ರಮ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲು ತೀರ್ಮಾನಿಸಲಾಗಿದ್ದು, ಸಾಹಿತಿಗಳು, ಜನಪ್ರತಿನಿಧಿಗಳು ಹಾಗೂ ಕಲಾವಿದರನ್ನು ಕರೆದು ಈ ಸಂಬಂಧ ಸಮಾಲೋಚನೆ ಸಭೆ ನಡೆಸಲು ಸಿಎಂ ಸೂಚಿಸಿದ್ದಾರೆ ಎಂದು ಸಚಿವೆ ಉಮಾಶ್ರೀ ಹೇಳಿದರು.












Click it and Unblock the Notifications