ಅಡ್ಡ ಮತದಾನ ಸಂಬಂಧ ಸೋಮಶೇಖರ್ ವಿರುದ್ಧ ಕ್ರಮ: ವಿವೇಕ್ ರೆಡ್ಡಿ
ಬೆಂಗಳೂರು, ಫೆಬ್ರವರಿ 27: ವಿಪ್ ಜಾರಿ ಮಾಡಿದ ನಂತರ ಪಕ್ಷಕ್ಕೆ ದ್ರೋಹ ಬಗೆದಿರುವ ಸಂಬಂಧ ಬಿಜೆಪಿ ನಾಯಕ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ವಿಪಕ್ಷ ನಾಯಕ ಆರ್.ಅಶೋಕ್ ಅವರು ಚರ್ಚೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ವಕೀಲ ವಿವೇಕ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್ ಅವರ ವಿರುದ್ಧ ಕ್ರಮ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದರು.

ಮತದಾರರು, ಪಕ್ಷಕ್ಕೆ ದ್ರೋಹ ಬಗೆದಿರುವುದು ಮತ್ತು ಜನರ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡದ್ದು ಪಕ್ಷಾಂತರ ನಿಷೇಧ ಕಾಯ್ದೆಯಡಿ ಘೋರವಾದ ಅಪರಾಧ ಎಂದು, ಎಸ್.ಟಿ ಸೋಮಶೇಖರ್ ನಡೆ ಖಂಡಿಸಿದರು.
'ವಿಪ್' ಉಲ್ಲಂಘನೆ, ಸದಸ್ಯತ್ವ ಅಮಾನತು
ಸದಸ್ಯರಿಗೆ ವಿಪ್ ಜಾರಿ ಮಾಡಿದ್ದಾರೆ. ವಿಪ್ ಜಾರಿಯ ಬಳಿಕ ಯಾವ ಜನಪ್ರತಿನಿಧಿಯೂ ಅದರ ವಿರುದ್ಧ ಮತದಾನ ಮಾಡಲು ಅಥವಾ ಅಡ್ಡ ಮತದಾನಕ್ಕೆ ಅವಕಾಶವಿಲ್ಲ. ಹೀಗಿದ್ದರೂ ಸಹಿ ಅಡ್ಡ ಮತದಾನ ಮಾಡಿ 'ವಿಪ್' ಉಲ್ಲಂಘನೆ ಮಾಡಲಾಗಿದೆ. ಆದ್ದರಿಂದ ಕೂಡಲೇ ಅವರ ಸದಸ್ಯತ್ವ ಅಮಾನತಾಗಲಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಸ್ಪೀಕರ್ ವಿಳಂಬ ಮಾಡಿದರೆ ಅದರ ವಿರುದ್ಧ ಹೈಕೋರ್ಟ್, ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸಲು ಅವಕಾಶವಿದೆ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.

ಬಿಜೆಪಿ-ಜೆಡಿಎಸ್ ನಾಯಕರು ಎಸ್‌ಟಿಎಸ್ ವಿರುದ್ಧ ಕಿಡಿ
ಇಂದು ರಾಜ್ಯಸಭಾ ಚುನಾವಣೆ ನಡೆದಿದೆ. ಈ ವೇಳೆ ಬಿಜೆಪಿ ನಾಯಕ ಎಸ್‌ಟಿ ಸೋಮಶೇಖರ್ ಅಡ್ಡ ಮತದಾನ ಮೂಲಕ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದಾರೆ. ಇದಕ್ಕೆ ಲೋಕಸಭಾ ಚುನಾವಣೆ ಹಿನ್ನೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕರು ಸಹ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಡ್ಡ ಮತದಾನ ಮಾಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಎಸ್‌ಟಿಎಸ್ ಅವರಿಗೆ ಧನ್ಯವಾದಗಳು ತಿಳಿಸಿದ್ದಾರೆ. ಇತ್ತ ಕಾಂಗ್ರೆಸ್ ಪಕ್ಷದ ಪರ ಮತ ಹಾಕಿದ ಎಸ್‌ಟಿ ಸೋಮಶೇಖರ್ ಅವರು 25 ಕೋಟಿ ರೂಪಾಯಿಗೆ ಮಾರಾಟವಾಗಿದ್ದಾರೆ ಎಂದು ಕೆಲವರು ಆರೋಪ ಮಾಡಿದ್ದಾರೆ.












Click it and Unblock the Notifications