ಪರಪ್ಪನ ಅಗ್ರಹಾರದ ಅತಿಥಿ ಶಶಿಕಲಾ ಆರೋಗ್ಯದಲ್ಲಿ ಏರುಪೇರು
Recommended Video

ಬೆಂಗಳೂರು, ಆಗಸ್ಟ್ 31: ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಾಲ ಕಳೆಯುತ್ತಿರುವ ಶಶಿಕಲಾ ಅವರ ಆರೋಗ್ಯದಲ್ಲಿ ಏರು-ಪೇರಾಗಿದೆ.
ಇಂದು ಬೆಳಿಗ್ಗೆ ಅವರಿಗೆ ರಕ್ತದೊತ್ತಡ ಹಾಗೂ ಮಧುಮೇಹ ಹೆಚ್ಚಾಗಿ ಅವರು ಅಸ್ತವ್ಯಸ್ಥರಾಗಿದ್ದಾರೆ. ಅವರಿಗೆ ಜೈಲಿನ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗಿದೆ.
ಪ್ರಸ್ತುತ ಅವರು ಸುಧಾರಿಸಿಕೊಳ್ಳುತ್ತಿದ್ದಾರೆ. ಅವರ ಆರೋಗ್ಯ ಇನ್ನೂ ಹದಗೆಟ್ಟರೆ ಆಸ್ಪತ್ರೆಗೆ ಸ್ಥಳಾಂತರಿಸಲಾಗವುದು ಎಂದು ಜೈಲಧಿಕಾರಿಗಳು ತಿಳಿಸಿದ್ದಾರೆ. ಈ ಮುಂಚೆಯೂ ಅವರ ಆರೋಗ್ಯದಲ್ಲಿ ಆರೋಗ್ಯದಲ್ಲಿ ಏರು-ಪೇರಾಗಿತ್ತು.

ದಿವಂಗತ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅತೀವ ಆಪ್ತರಾಗಿದ್ದ ವಿಕೆ ಶಶಿಕಲಾ ಅವರು ಅಕ್ರಮ ಆಸ್ತಿ ಹೊಂದಿದ್ದ ಪ್ರಕರಣದಲ್ಲಿ ತಪ್ಪಿಸ್ಥರಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
ಶಶಿಕಲಾ ಅವರಿಗೆ ಜೈಲಿನಲ್ಲಿ ರಾಜೋಪಚಾರ ನೀಡಲಾಗುತ್ತಿದೆ ಎಂಬುದು ಸಹ ಈ ಹಿಂದೆ ಬಹಿರಂಗವಾಗಿತ್ತು. ಐಪಿಎಸ್ ಅಧಿಕಾರಿ ರೂಪಾ ಅವರು ಶಶಿಕಲಾ ಅವರಿಗೆ ರಾಜೋಪಚಾರ ನೀಡುತ್ತಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿದ್ದು ಭಾರಿ ಸುದ್ದಿಯಾಗಿತ್ತು.












Click it and Unblock the Notifications