ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅನಾರೋಗ್ಯಕ್ಕೆ ಒಳಗಾದ ಶಶಿಕಲಾಗೆ ಕೋವಿಡ್ ಸೋಂಕು ಪತ್ತೆ

|
Google Oneindia Kannada News

ಬೆಂಗಳೂರು, ಜನವರಿ 21: ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಆಪ್ತೆ ಮತ್ತು ಎಐಎಡಿಎಂಕೆ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ.

ತೀವ್ರ ಅಸ್ವಸ್ಥಗೊಂಡಿದ್ದ ಶಶಿಕಲಾ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಗುರುವಾರ ರಾತ್ರಿ ಅವರ ಕೋವಿಡ್ ಪರೀಕ್ಷೆ ವರದಿ ಬಂದಿದ್ದು, ಅವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಕೋವಿಡ್ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಶಶಿಕಲಾಗೆ ಶ್ವಾಸಕೋಶ ಸೋಂಕು, ಕೊರೊನಾ ವರದಿ ನೆಗೆಟಿವ್ಶಶಿಕಲಾಗೆ ಶ್ವಾಸಕೋಶ ಸೋಂಕು, ಕೊರೊನಾ ವರದಿ ನೆಗೆಟಿವ್

ಶಶಿಕಲಾ ಅವರ ಉಸಿರಾಟದ ಮಟ್ಟದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ ಬುಧವಾರ ಅವರನ್ನು ಜೈಲಿನಿಂದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಉಸಿರಾಟದ ಸಮಸ್ಯೆ ಮತ್ತು ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಅವರು ಕೋವಿಡ್ ಸೋಂಕಿಗೆ ಒಳಗಾಗಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದರು.

 VK Sasikala Tests Covid-19 Positive Ahead Of Her Release

ಜೈಲಿನಿಂದ ಹೊರಬಂದ ಬಳಿಕ ಎಐಎಡಿಎಂಕೆಗೆ ಮರಳುತ್ತಾರಾ ಶಶಿಕಲಾ?: ಪಳನಿಸ್ವಾಮಿ ಹೇಳಿದ್ದೇನು?ಜೈಲಿನಿಂದ ಹೊರಬಂದ ಬಳಿಕ ಎಐಎಡಿಎಂಕೆಗೆ ಮರಳುತ್ತಾರಾ ಶಶಿಕಲಾ?: ಪಳನಿಸ್ವಾಮಿ ಹೇಳಿದ್ದೇನು?

Recommended Video

ಬಿಜೆಪಿಯಲ್ಲಿ ಬಿರುಕು !! | Oneindia Kannada

ಶಶಿಕಲಾ ಅವರಿಗೆ ನಡೆಸಿದ್ದ ಆಂಟಿಜೆನ್ ಪರೀಕ್ಷೆಯಲ್ಲಿ ಕೋವಿಡ್ ನೆಗೆಟಿವ್ ವರದಿ ಬಂದಿತ್ತು. ಅವರ ಶ್ವಾಸಕೋಶದಲ್ಲಿ ಸೋಂಕು ಉಂಟಾಗಿರುವುದು ದೃಢಪಟ್ಟಿತ್ತು. ಇನ್ನು ಕೆಲವೇ ದಿನಗಳಲ್ಲಿ ಅವರು ಆಸ್ಪತ್ರೆಯಿಮದ ಬಿಡುಗಡೆಯಾಗಬೇಕಿದೆ. ಜನವರಿ 27ರಂದು ಅವರ ಸೆರೆವಾಸ ಅಂತ್ಯಗೊಳ್ಳಲಿದ್ದು, ಅದಕ್ಕೂ ಮೊದಲೇ ಅಸ್ವಸ್ಥಗೊಂಡಿದ್ದಾರೆ.

English summary
Sasikala Natarajan has tested positive for Coronavirus after she was admitted to hospital on Wednesday due to respiratory issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X