ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೋದಿ ಪ್ರಧಾನಿಯಾಗಲು ತೇಜಸ್ವಿ ಸೂರ್ಯರನ್ನು ಗೆಲ್ಲಿಸಿ: ಬಿಎಸ್ವೈ

|
Google Oneindia Kannada News

ಬೆಂಗಳೂರು, ಏಪ್ರಿಲ್ 01: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿದೆ. ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರ ನಡೆಸಿ ಮತಯಾಚಿಸಿದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಒಬ್ಬ ಯುವಕನಾಗಿದ್ದು, ಪ್ರಾಮಾಣಿಕ ವ್ಯಕ್ತಿಯಾಗಿದ್ದಾರೆ. ಇದೀಗ ಅವರು ದಿವಂಗತ ಅನಂತಕುಮಾರ್ ಅವರ ಸ್ಥಾನದಲ್ಲಿ ನಿಂತಿದ್ದಾರೆ.

ಬಿಜೆಪಿ ಅಭ್ಯಥಿ ತೇಜಸ್ವಿ ಸೂರ್ಯ : ವ್ಯಕ್ತಿಚಿತ್ರ | ಆಸ್ತಿ ವಿವರ

ಅವರು ಅನಂತಕುಮಾರ್ ಅವರಿಗಿಂತ ಅಧಿಕ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ. ದೇಶದ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರ ಕಮಲದ ಗುರುತಿಗೆ ಮತ ಚಲಾಯಿಸಿ ತೇಜಸ್ವಿ ಸೂರ್ಯ ಗೆಲುವಿಗೆ ಕಾರಣರಾಗಬೇಕು ಎಂದು ಮತದಾರರಲ್ಲಿ ಮನವಿ ಮಾಡಿದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಈವರೆಗಿನ ಫಲಿತಾಂಶ

ನೀವು ಮೋದಿಯವರಿಗೆ ಮತ ಹಾಕಿದರೆ ಯಡಿಯೂರಪ್ಪಗೆ ಮತ ಹಾಕಿದಂತೆ, ಯಡಿಯೂರಪ್ಪಗೆ ಮತ ಚಲಾಯಿಸಿದರೆ ತೇಜಸ್ವಿ ಸೂರ್ಯಗೆ ಮತ ಹಾಕಿದಂತೆ ಎಂದು ಹೇಳಿದ ಯಡಿಯೂರಪ್ಪ, ನಮಗೆ ಮೋದಿ ಅವರೇ ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಎಲ್ಲರೂ ಮೋದಿ ಪರವಾಗಿ ಮತ ಯಾಚನೆ ಮಾಡಬೇಕೆಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರು ಮಾತನಾಡಿ

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರು ಮಾತನಾಡಿ

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರು ಮಾತನಾಡಿ, "ನಮಗೆ ಅನಂತಕುಮಾರ್ ಅವರ ಅಗಲಿಕೆ ನೋವನ್ನು ಸಹಿಸಿಕೊಳ್ಳಲು ಈಗಲೂ ಸಾಧ್ಯವಾಗಿಲ್ಲ. ನಮ್ಮ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಬಿ.ಎಸ್.ಯಡಿಯೂರಪ್ಪ ಎಂದು ತಿಳಿದುಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸೋಣ. ಮೋದಿ ಮತ್ತು ಯಡಿಯೂರಪ್ಪ ಅವರು ನಮ್ಮ ಪಕ್ಷದ ಜೋಡೆತ್ತುಗಳಿದ್ದಂತೆ. ಕಳೆದ ಬಾರಿ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಅನಂತಕುಮಾರ್ ಅವರಿಗೆ 60 ಸಾವಿರ ಮತಗಳ ಲೀಡ್ ಕೊಟ್ಟಿದ್ದೆವು. ಈಗ ನಮ್ಮ ಪಕ್ಷದ ಅಭ್ಯರ್ಥಿಗೆ ಅದಕ್ಕಿಂತ ಹೆಚ್ಚು ಲೀಡ್ ಕೊಡುತ್ತೇವೆ'' ಎಂದು ಹೇಳಿದರು.

ಏಪ್ರಿಲ್ 02ರಂದು ಬನಶಂಕರಿಯಲ್ಲಿ ಅಮಿತ್ ಶಾ

ಏಪ್ರಿಲ್ 02ರಂದು ಬನಶಂಕರಿಯಲ್ಲಿ ಅಮಿತ್ ಶಾ

ಇಲ್ಲಿ ನರೇಂದ್ರ ಮೋದಿಯವರೇ ಅಭ್ಯರ್ಥಿ. ಮತ್ತೊಮ್ಮೆ ಜನರು ಮೋದಿಗಾಗಿ ಮತ ಹಾಕುತ್ತಿದ್ದಾರೆ. ಪಕ್ಷದ ಸೂಚನೆಯಂತೆ ನಾವು ನಮ್ಮ ಅಭ್ಯರ್ಥಿ ಗೆಲುವಿಗೆ ಹಗಲೂ ರಾತ್ರಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದ ಸತೀಶ್ ರೆಡ್ಡಿ ಅವರು, ಏಪ್ರಿಲ್ 2 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಬನಶಂಕರಿಯಲ್ಲಿ ಸಾರ್ವಜನಿಕ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಇಲ್ಲಿ ಅಭ್ಯರ್ಥಿ ನಗಣ್ಯ, ಮೋದಿಯೇ ಎಲ್ಲಾ

ಇಲ್ಲಿ ಅಭ್ಯರ್ಥಿ ನಗಣ್ಯ, ಮೋದಿಯೇ ಎಲ್ಲಾ

ಇಲ್ಲಿ ಅಭ್ಯರ್ಥಿ ನಗಣ್ಯ. ಏನೇ ಇದ್ದರೂ ಮೋದಿ ಮತ್ತು ಯಡಿಯೂರಪ್ಪ ಅವರೇ ನಮ್ಮ ಅಭ್ಯರ್ಥಿ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ದಿವಂಗತ ಅನಂತಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ರಾಷ್ಟ್ರಮಟ್ಟದಲ್ಲಿ ಒಳ್ಳೆಯ ಸ್ಥಾನ ಸಿಗಬೇಕೆಂದು ಅವರು ಪಕ್ಷದ ವರಿಷ್ಠರಿಗೆ ಮನವಿ ಮಾಡಿದರು.

ಬಿಬಿಎಂಪಿ ಸದಸ್ಯ ರಾಮ್ ಮೋಹನ್ ರಾಜ್ ಮಾತನಾಡಿ

ಬಿಬಿಎಂಪಿ ಸದಸ್ಯ ರಾಮ್ ಮೋಹನ್ ರಾಜ್ ಮಾತನಾಡಿ

ಬಿಬಿಎಂಪಿ ಸದಸ್ಯ ರಾಮ್ ಮೋಹನ್ ರಾಜ್ ಮಾತನಾಡಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಮೊದಲಿನಿಂದಲೂ ಬಹಳಷ್ಟು ಬಹುಮತವನ್ನು ನೀಡುತ್ತಾ ಬಂದಿದ್ದೇವೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲೂ ಕೂಡಾ ಕನಿಷ್ಠ 50 ಸಾವಿರಕ್ಕೂ ಹೆಚ್ಚು ಮತಗಳ ಅಂತರವನ್ನು ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ನೀಡಲಿದ್ದೇವೆ ಎಂದರು.

English summary
Vote For Modi, Tejasvi Surya and BJP says BJP president BS Yeddyurappa during the election campaign at Bommanahalli ward in Bangalore south constituency. MLA Satish Reddy, BBMP corporator Mohanraj were present during the campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X