ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Voter Data Theft: ಮೂವರು ಐಎಎಸ್‌ ಅಧಿಕಾರಿಗಳ ಅಮಾನತು

|
Google Oneindia Kannada News

ನವೆಂಬರ್ 26, ಬೆಂಗಳೂರು : ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಸಂಬಂಧ ಚಿಲುಮೆ ಸಂಸ್ಥೆ ಪ್ರತಿನಿಧಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳ ಮಟ್ಟದ ಗುರುತಿನ ಚೀಟಿ ನೀಡಿರುವುದು ತನಿಖೆಯಿಂದ ಸಾಬೀತಾಗಿದೆ. ಈ ಕಾರಣಕ್ಕೆ ಕೇಂದ್ರ ಚುನಾವಣಾ ಆಯೋಗವು ತಕ್ಷಣದಿಂದ ಜಾರಿ ಬರುವಂತೆ ಇಬ್ಬರು ಐಎಎಸ್‌ ಅಧಿಕಾರಿಗಳ ಅಮಾನತು ಮಾಡಿದೆ.

ಮತದಾರರ ಮಾಹಿತಿ ಕಳವು: ಮುಕ್ತ ತನಿಖೆಗೆ ಆದೇಶ ಎಂದ ಸಿಎಂ ಬೊಮ್ಮಾಯಿಮತದಾರರ ಮಾಹಿತಿ ಕಳವು: ಮುಕ್ತ ತನಿಖೆಗೆ ಆದೇಶ ಎಂದ ಸಿಎಂ ಬೊಮ್ಮಾಯಿ

ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆಮಾನತು ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ರಾಜ್ಯ ಚುನಾವಣಾ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ. ಜೊತೆಗೆ ಮೂರು ಚಿಲುಮೆ ಸಂಸ್ಥೆ ಮಾಹಿತಿ ಸಂಗ್ರಹಿಸಿದ್ದ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಸಮಗ್ರ ಪರಿಶೀಲನೆ ನಡೆಸುವಂತೆ ನಿರ್ದೇಶನ ನೀಡಿದೆ.

ಅಮಾನತುಗೊಂಡ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಶಿವಾಜಿನಗರ ಮತ್ತು ಚಿಕ್ಕಪೇಟೆ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಆಗಿದ್ದರು. ಇನ್ನು ಶ್ರೀನಿವಾಸ್ ಮಹದೇವಪುರ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದರು.

Voter Data Theft 3 IAS Officers Suspended By Central Election Commission

ಚಿಲುಮೆ ಸರ್ಕಾರೇತರ ಸಂಸ್ಥೆಯು ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಹೆಸರು ತೆಗೆದು ಹಾಕುತ್ತಿದ್ದರು. ಸಂಗ್ರಹಿಸಿದ ಮಾಹಿತಿ ದುರ್ಬಳಕೆ ಎಂದು ಮಾಧ್ಯಮಗಳ ವರದಿ, ರಾಜಕೀಯ ಕುಟುಂಬಗಳು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು.

ತೆರವಾದ ಸ್ಥಾನಕ್ಕೆ ಮೂವರ ನೇಮಕ

ಇದಲ್ಲದೇ ಹಲಸೂರು ಗೇಟೆ ಪೊಲೀಸ್ ಠಾಣೆ ಹಾಗೂ ಕಾಡುಗೋಡಿಯಲ್ಲಿ ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಾಗಿತ್ತು. ಈ ಎಲ್ಲ ಅಂಶಗಳ ಮೇಲಿನ ವರದಿ ಪಡೆದು, ಕೆಲವು ಸತ್ಯಗಳು ಬಹಿರಂಗಗೊಂಡ ಹಿನ್ನೆಲೆಯಲ್ಲಿ ಆಯೋಗ ಇಬ್ಬರು ಅಧಿಕಾರಿಗಳ ಅಮಾನತಿಗೆ ಆದೇಶ ಹೊರಡಿಸಿದೆ.

Voter Data Theft 3 IAS Officers Suspended By Central Election Commission

ಬಿಬಿಎಂಪಿ ವ್ಯಾಪ್ತಿಯಲ್ಲಿ ಈ ಇಬ್ಬರು ಅಧಿಕಾರಿಗಳಿಂದ ತೆರವಾದ ಜಾಗಕ್ಕೆ ಮೂವರು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚಿಕ್ಕಪೇಟೆ ಕ್ಷೇತ್ರಕ್ಕೆ ಡಾ.ಆರ್.ವಿಶಾಲ್, ಶಿವಾಜಿನಗರ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಮಹದೇವಪುರ ಕ್ಷೇತ್ರಕ್ಕೆ ಅಜಯ್ ನಾಗಭೂಷನ್ ಅವರನ್ನು ನೇಮಿಸಲಾಗಿದೆ. ಜೊತೆಗೆ ಈ ಮೂರು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸುವಂತೆ ಸೂಚಿಸಲಾಗಿದೆ.

3 ಕ್ಷೇತ್ರಗಳ ಮಾಹಿತಿ ಹಂಚಿಕೊಳ್ಳಲಾಗುವುದು

ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಅಭಿಯಾನ ಡಿಸೆಂಬರ್ 9ಕ್ಕೆ ಕೊನೆಗೊಳ್ಳಲಿದೆ. ಆದರೆ ಸದರಿ ಮೂರು ವಿಧಾನ ಕ್ಷೇತ್ರಗಳಲ್ಲಿ ಡಿಸೆಂಬರ್ 24ರವರೆಗೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ ಅಭಿಯಾನ ನಡೆಯಲಿದೆ.

ಈ ಮೂರು ಕ್ಷೇತ್ರಗಳಲ್ಲಿ ಅಭಿಯಾನದ ವೇಳೆ ಕೈ ಬಿಡಲಾದ ಹೆಸರು ಹಾಗೂ ಪಟ್ಟಿಗೆ ಸೇರ್ಪಡೆಗೊಂಡ ಹೆಸರುಗಳ ಕುರಿತ ಸಂಪೂರ್ಣ ಮಾಹಿತಿಯನ್ನು ರಾಜಕೀಯ ಪಕ್ಷಗಳ ಜೊತೆಗೆ ಹಂಚಿಕೊಳ್ಳಲಾಗುವುದು. ನಂತರ ದೂರು ಇಲ್ಲವೇ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಇರುತ್ತದೆ ಎಂದು ಚುನಾವಣೆ ಆಯೋಗ ತಿಳಿಸಿದೆ.

English summary
Voter Data Theft 3 IAS Officers Suspended By Central Election Commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X