• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Voter Data Theft: 3 ಕ್ಷೇತ್ರಗಳ ಮತದಾರರ ಪಟ್ಟಿ ಪರಿಷ್ಕರಣೆಗಾಗಿ 3 ವಿಶೇಷ ಅಧಿಕಾರಿ ನಿಯೋಜನೆ

|
Google Oneindia Kannada News

ಬೆಂಗಳೂರಿನ ನವೆಂಬರ್ 29: ಮತದಾರರ ಅಕ್ರಮ ಮಾಹಿತಿ ಸಂಗ್ರಹ ನಡೆದಿದ್ದ ಬೆಂಗಳೂರಿನ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯನ್ನು ಶೇ. 100 ರಷ್ಟು ಪರಿಶೀಲನೆ ಮಾಡಲು ವಿಶೇಷ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ಈ ವಿಶೇಷ ಐಎಎಸ್‌ ಅಧಿಕಾರಿಗಳು ಶಿವಾಜಿನಗರ, ಚಿಕ್ಕಪೇಟೆ ಮತ್ತ ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿಯನ್ನು ಶೇ. 100 ರಷ್ಟು ಪರಿಶೀಲನೆ ಮಾಡಲಿದ್ದಾರೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರ(162)ಕ್ಕೆ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ (169) ಕ್ಕೆ ಡಾ. ಆರ್. ವಿಶಾಲ್, ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರ (174) ಕ್ಕೆ ಅಜಯ್ ನಾಗಭೂಷಣ್ ಅವರನ್ನು ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನೇಮಕ ಮಾಡಲಾಗಿದೆ.

ಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಸಿಎಂಬೆಳಗಾವಿಯಲ್ಲಿ ಬೃಹತ್ ಆಟೋಮೊಬೈಲ್ ಉದ್ಯಮ ಸ್ಥಾಪನೆಗೆ ಉತ್ತೇಜನ: ಸಿಎಂ

ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಅನಧಿಕೃತವಾಗಿ ಮತದಾರರ ಮಾಹಿತಿ ಸಂಗ್ರಹಿಸಿದವರ ವಿರುದ್ಧ ದೂರು ದಾಖಲಾಗಿದೆ.

ಈ ಮೂವರು ಅಧಿಕಾರಿಗಳು ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ 1ಜನವರಿ 2022 ರಿಂದ ಮತದಾರರ ಪಟ್ಟಿಗೆ ಸೇರ್ಪಡೆ, ಎಷ್ಟು ಹೆಸರುಗಳನ್ನು ತೆಗೆದು ಹಾಕಲಾಗಿದೆ ಎಂಬೆಲ್ಲ ವಿವರಗಳನ್ನು ಶೇ. 100 ರಷ್ಟು ಪರಿಶೀಲಿಸುವುದು.

Voter Data Theft 3 Special Officer Appointment For 100% Checking In 3 Assembly Constituency

ಮೂರು ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಯ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವ ಅವಧಿಯನ್ನು ಮುಂದಿನ ಡಿಸೆಂಬರ್ 9ರಿಂದ ರಿಂದ ಡಿಸೆಂಬರ್ 24ರವರೆಗೆ ಹೆಚ್ಚುವರಿಯಾಗಿ 15 ದಿನ ಕಾಲಾವಕಾಶ ವಿಸ್ತರಿಸಲಾಗಿದೆ. ಇನ್ನೂ ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸೇರ್ಪಡೆ ಮತ್ತು ತೆಗೆದುಹಾಕಿರುವ ವಿವರಗಳನ್ನು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳಿಗೆ ಒದಗಿಸಲು ಕೇಂದ್ರ ಚುನಾವಣೆ ಆಯೋಗ ನಿರ್ದೇಶನ ನೀಡಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತಿಳಿಸಿದೆ.

English summary
Voter Data Theft Case: 3 Special officer appointment for 100% checking in 3 assembly constituency at Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X