Voter ID: ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮಾಡಲು ಹೊಸ ಕ್ರಮ ಜಿಬಿಎ

ಬೆಂಗಳೂರಿನ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಮಾಡಲು ಹೊಸ ಕ್ರಮ ಅಳವಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಅಪರ ಜಿಲ್ಲಾ ಚುನಾವಣಾಧಿಕಾರಿ (ಕೇಂದ್ರ) ಜಗದೀಶ್.ಜಿ ಅವರು ಪ್ರಮುಖ ನಿರ್ದೇಶನ ನೀಡಿದ್ದಾರೆ.

ಸೆಪ್ಟೆಂಬರ್ 29 ಮತ್ತು 30ರಂದು ನಡೆಯುವ ವಿಶೇಷ ಅಭಿಯಾನಕ್ಕೆ ಸಂಬಂಧಿಸಿದಂತೆ ಆನ್‌ಲೈನ್ ಪ್ರಕ್ರಿಯೆಯ ಪ್ರಾಯೋಗಿಕ ಪರೀಕ್ಷೆ ನಡೆಸಿ ಎಂದು ಜಗದೀಶ್.ಜಿ ಅವರು ನಿರ್ದೇಶನ ನೀಡಿದ್ದಾರೆ.

Voter ID Bengaluru Voters Special Campaign Sept 29-30 for Voter List Revision New Measures Announced

ಅಪರ ಜಿಲ್ಲಾ ಚುನಾವಣಾಧಿಕಾರಿ (ಕೇಂದ್ರ) ವ್ಯಾಪ್ತಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಗುರುವಾರ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅಪರ ಜಿಲ್ಲಾ ಚುನಾವಣಾಧಿಕಾರಿಗಳು (ಕೇಂದ್ರ) ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ ಅವರು ಈಗಾಗಲೇ ಬಿಡುಗಡೆಯಾಗಿರುವ ಕರಡು ಮತದಾರರ ಪಟ್ಟಿಯ ಕುರಿತು ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶವಿರುವುದರಿಂದ ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಿ, ಅರ್ಹ ಮತದಾರರ ಹೆಸರುಗಳು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ತಪ್ಪಿಹೋಗದಂತೆ ಕ್ರಮ ವಹಿಸಲು ಎಲ್ಲಾ ಮತದಾರರ ನೊಂದಣಾಧಿಕಾರಿಗಳು, ಎ.ಇ.ಆರ್.ಓ ಗಳು, ಬಿ.ಎಲ್.ಓ ಗಳು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಮೂನೆ-6 ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ

18 ವರ್ಷ ಮೇಲ್ಪಟ್ಟ ಹಾಗೂ ಇನ್ನೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಯಾಗದ ಅರ್ಹ ನಾಗರಿಕರು ನಮೂನೆ-6 ಮೂಲಕ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದಾಗಿದ್ದು, ನಮೂನೆ-6 ಅನ್ನು ಆನ್‌ಲೈನ್‌ ಮೂಲಕ ಸಲ್ಲಿಸುವ ಪ್ರಕ್ರಿಯೆ ಕುರಿತು ಸಾರ್ವಜನಿಕರಿಗೆ ಸುಲಭವಾಗಿ ಅರ್ಥವಾಗುವಂತೆ ಹಂತ ಹಂತದ ಪ್ರಕ್ರಿಯೆ ವಿವರಿಸುವ ಜಾಗೃತಿ ವಿಡಿಯೋ ಸಿದ್ಧಪಡಿಸಿ ವ್ಯಾಪಕವಾಗಿ ಪ್ರಸಾರ ಮಾಡುವಂತೆ ಸೂಚಿಸಿದರು.

ಆನ್‌ಲೈನ್‌ನಲ್ಲಿ ನಮೂನೆ-6 ಸಲ್ಲಿಸುವ ಸಂದರ್ಭದಲ್ಲಿ ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಬಹುದಾಗಿದ್ದು, ಆಫ್‌ಲೈನ್‌ನಲ್ಲಿಯೂ ಸಂಬಂಧಪಟ್ಟ ERO/AERO ಅಥವಾ BLO ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಸಾರ್ವಜನಿಕರಿಗೆ ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Anomalies ಕುರಿತು ನೋಟಿಸ್ ಜಾರಿ ಪ್ರಕ್ರಿಯೆ ತ್ವರಿತಗೊಳಿಸಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಮ್ಯಾಪಿಂಗ್‌ ಆಗದಿರುವುದು ಅಥವಾ ಇತರೆ ವ್ಯತ್ಯಾಸಗಳು (Anomalies) ಕಂಡುಬಂದಿರುವ ಪ್ರಕರಣಗಳಲ್ಲಿ ನೋಟಿಸ್‌ ಜಾರಿ ಮಾಡುವ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಸಂಬಂಧಪಟ್ಟ ಮತದಾರರಿಗೆ ನಿಗದಿತ ಸಮಯದಲ್ಲಿ ಮಾಹಿತಿ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು. ಮುಂದುವರಿದು ನೋಟಿಸ್‌ ಸ್ವೀಕರಿಸಿದವರು ಸೂಚಿಸಲಾದ ದಿನಾಂಕ, ಸಮಯ ಹಾಗೂ ಸ್ಥಳದಲ್ಲಿ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ತಮ್ಮ ಅರ್ಹತೆಯನ್ನು ದೃಢಪಡಿಸಿಕೊಳ್ಳುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕೆಂದು ಸೂಚಿಸಿದ್ದಾರೆ.

ಸೆಪ್ಟೆಂಬರ್ 29 ಮತ್ತು 30ರಂದು ವಿಶೇಷ ಅಭಿಯಾನ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದ ಭಾಗವಾಗಿ ನಾಗರೀಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 2026 ಸೆಪ್ಟೆಂಬರ್ 29 ಮತ್ತು 30 ರಂದು ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ಈ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಪರಿಶೀಲನೆ, ಹೊಸದಾಗಿ ಹೆಸರು ಸೇರ್ಪಡೆ, ಅಗತ್ಯ ತಿದ್ದುಪಡಿ ಹಾಗೂ ಸಂಬಂಧಿತ ಅರ್ಜಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಮತ್ತು ಸಹಾಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿಶೇಷ ಅಭಿಯಾನಕ್ಕೂ ಮುನ್ನ ಆನ್‌ಲೈನ್‌ ಪ್ರಕ್ರಿಯೆಯ ಪ್ರಾಯೋಗಿಕ ಪರೀಕ್ಷೆ

ವಿಶೇಷ ಅಭಿಯಾನದ ದಿನಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತಾಂತ್ರಿಕ ತೊಂದರೆ ಉಂಟಾಗದಂತೆ, ಆನ್ ಲೈನ್‌ ಮೂಲಕ SIR ಸಂಬಂಧಿತ ಪ್ರಕ್ರಿಯೆಗಳ ಪ್ರಾಯೋಗಿಕ ಪರೀಕ್ಷೆ ನಡೆಸಿ, ವೆಬ್‌ಸೈಟ್‌, ಅರ್ಜಿ ಸಲ್ಲಿಕೆ, ದಾಖಲೆ ಅಪ್‌ಲೋಡ್‌ ಹಾಗೂ ಇತರೆ ಡಿಜಿಟಲ್‌ ಪ್ರಕ್ರಿಯೆಗಳು ಸುಗಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

BLOಗಳ ಕಾರ್ಯನಿರ್ವಹಣೆ ಕಟ್ಟುನಿಟ್ಟಾಗಿ ಪರಿಶೀಲಿಸಿ

ಮನೆ-ಮನೆಗೆ ಭೇಟಿ ನೀಡಬೇಕಾದ BLOಗಳು ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರದಂತೆ ಹಾಗೂ ನಿಗದಿತ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. BLOಗಳು ಮನೆಗಳಿಗೆ ಭೇಟಿ ನೀಡದಿರುವುದು, ಸಾರ್ವಜನಿಕರನ್ನು ಸಂಪರ್ಕಿಸದಿರುವುದು ಅಥವಾ ಕರ್ತವ್ಯದಲ್ಲಿ ಲೋಪ ಕಂಡುಬಂದಲ್ಲಿ ಪರಿಶೀಲಿಸಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತರಾದ ಜಗದೀಶ್.ಜಿ. ಅವರು ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+