ಮತದಾರರ ಐಡಿ ಕಾರ್ಡ್ ಪೊಲೀಸ್ ವಶ: ವ್ಯಕ್ತಿಗಳ ಪತ್ತೆ ಕಾರ್ಯ ಆರಂಭ
ಬೆಂಗಳೂರು, ಮೇ 10: ರಾಜರಾಜೇಶ್ವರಿನಗರ ವಿಧಾನಸಭೆ ಕ್ಷೇತ್ರದಲ್ಲಿ ಪತ್ತೆಯಾದ ಮತದಾರರ ಚೀಟಿಗಳ ವ್ಯಕ್ತಿಗಳನ್ನು ಪತ್ತೆ ಮಾಡಲು ಪೊಲೀಸರು ಮುಂದಾಗಿದ್ದು, ವಶಪಡಿಸಿಕೊಂಡ 9 ಸಾವಿರಕ್ಕೂ ಹೆಚ್ಚು ಮತದಾರರ ಐಡಿಕಾರ್ಡ್‌ಗಳ ಪೈಕಿ ಕೆಲವನ್ನು ತಮ್ಮ ಸುಪರ್ದಿಗೆ ತೆಗೆದುಕೊಂಡಿದ್ದಾರೆ.
ಕಾರ್ಡ್‌ಗಳಲ್ಲಿರುವ ವ್ಯಕ್ತಿಗಳಿಗಾಗಿ ಈಗಾಗಲೇ ತನಿಖೆ ಆರಂಭಿಸಿರುವ ಪೊಲೀಸರು, ಐಡಿ ಕಾರ್ಡ್‌ಗಳನ್ನು ಒತ್ತೆಯಾಗಿಒಟ್ಟುಕೊಂಡು ಕೆಲವನ್ನು ಗೃಹಪಯೋಗಿ ವಸ್ತುಗಳನ್ನು ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಕೊಡುಗೆಯಾಗಿ ನೀಡಿದ್ದರು ಎಂದು ಪಲೀಸ್ ಮೂಲಗಳು ತಿಳಿಸಿವೆ.
ಕಳೆದ ಎರಡು ದಿನಗಳ ಹಿಂದೆ ರಾಜರಾಜೇಶ್ವರಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಜಾಲಹಳ್ಳಿಯ ಅಪಾರ್ಟ್‌ಮೆಂಟ್ ಒಂದರ ಮೇಲೆ ದಾಳಿ ನಡೆಸಿ 9746 ಮತದಾರರ ಗುರುತಿನ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಅದರಲ್ಲಿ ಕೆಲವು ಗುರುತಿನ ಚೀಟಿಗಳನ್ನು ತನಿಖೆಗಾಗಿ ಪೊಲೀಸರು ತೆಗೆದುಕೊಂಡಿದ್ದಾರೆ. ಹಲವರು ರಾಜಕೀಯ ಪಕ್ಷಗಳಿಂದ ಹಣ ಪಡೆದು ತಮ್ಮ ಮತದಾರರ ಚೀಟಿಯನ್ನು ಮಾರಿಕೊಂಡಿರಬಹುದು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಆದರೆ ಎಷ್ಟೇ ತನಿಖೆ ನಡೆಸಿದರೂ ಈ ಅಕ್ರಮದಲ್ಲಿ ಯಾವುದೇ ರಾಜಕೀಯ ಪಕ್ಷಗಳು ಭಾಗಿಯಾಗಿರುವ ಕುರಿತು ಸುಳಿವು ದೊರೆತಿಲ್ಲ.
ಅಪಾರ್ಟ್‌ಮೆಂಟ್‌ನಲ್ಲಿ 200 ಮತದಾರರ ಚೀಟಿಗಳನ್ನೊಳಗೊಂಡಿದ್ದ ಸಾಕಷ್ಟು ಬಂಡಲ್‌ಗಳು ಪತ್ತೆಯಾಗಿದೆ. ಆ ಬಂಡಲ್‌ನ್ನು ಮತದಾರರ ಹೆಸರಿರುವ ಪಟ್ಟಿಯಿಂದ ಸುತ್ತುವರೆದಿದೆ. ಇದರಿಂದ ಒಂದೇ ಪಕ್ಷಕ್ಕೆ ಮತ ಹಾಕಲು ನಿರ್ಧರಿಸಿದ್ದ ಗುಂಪೊಂದು ಈ ರೀತಿ ಗುರುತಿನ ಚೀಟಿಯನ್ನು ಒಟ್ಟು ಮಾಡಿರಬಹುದು ಎಂದು ಸಂಶಯ ವ್ಯಕ್ತವಾಗಿದೆ. ಅಥವಾ ಆ ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರಭಾವಿ ವ್ಯಕ್ತಿ ಯಾರೋ ಈ ಕೆಲಸ ಮಾಡಿರಬಹುದು ಎಂದು ಕೂಡ ಅಂದಾಜಿಸಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications