ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ ಚಲಾಯಿಸಲು ಮತದಾರರ ಗುರುತಿನ ಪತ್ರ ಇಲ್ಲದಿದ್ದರೆ ಈ ದಾಖಲೆ ತನ್ನಿ!

|
Google Oneindia Kannada News

ಬೆಂಗಳೂರು, ಅ. 15: ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(EPIC) ಹಾಜರುಪಡಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ದಾಖಲೆ ಸಲ್ಲಿಸಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.

Voters allowed to vote in MLC Election with alternative document if unable to bring epic Card

Recommended Video

Kusuma ಗೆ ದೊಡ್ಡ Shock | Oneindia Kannada

ಮತ ಚಲಾಯಿಸಲು ಪರ್ಯಾಯ ದಾಖಲಾತಿಯಾದ ಆಧಾರ್ ಕಾರ್ಡ್, ವಾಹನ ಚಾಲನಾ ಪರವಾನಗಿ, ಪ್ಯಾನ್ ಕಾರ್ಡ್, ಪಾಸ್‍ಪೋರ್ಟ್, ಕೇಂದ್ರ, ರಾಜ್ಯ, ಸರ್ಕಾರಿ ನೌಕರರಾಗಿದ್ದಲ್ಲಿ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಲ್ಲಿ ಗುರುತಿನ ಚೀಟಿ, ಸಂಸದರು, ಶಾಸಕರು ನೀಡಿದ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳು ನೀಡಿದ ಸೇವಾ ಗುರುತಿನ ಚೀಟಿ, ಪದವಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರವನ್ನು ಹಾಜರು ಪಡಿಸಿ ಮತ ಚಲಾಯಿಸಬಹುದಾಗಿದೆ ಎಂದು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Voters in Karnataka Legislative Council Election are allowed to vote with an alternative document if they are unable to submit the Electoral Identity Card (EPIC). Knnow more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X