ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರ ಪಟ್ಟಿ ಪರಿಷ್ಕರಿಸಬಹುದು- ಹೈಕೋರ್ಟ್
ಬೆಂಗಳೂರು. ಏಪ್ರಿಲ್ 8: ಕರ್ನಾಟಕ ವಿಧಾನಸಭಾ ಚುನಾವಣೆಗಳಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಮತದಾರರ ಪಟ್ಟಿಯನ್ನು ಪರಿಷ್ಕೃತ ಮಾಡುವುದಕ್ಕೆ ಅವಕಾಶವಿದೆ. ಹೀಗೆಂದು ಹೈಕೋರ್ಟ್ ಆದೇಶ ಹೊರಡಿಸಿದೆ.
ಶಿವಾಜಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದ ಚುನಾವಣಾ ಆಯೋಗದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯ ಪೀಠ ಈ ಸೂಚನೆ ನೀಡಿದೆ. ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಮತದಾರರ ಪಟ್ಟಿ ಪರಿಷ್ಕರಿಸಬಹುದು ಎಂದು ತಿಳಿಸಿದೆ.

ಅಲ್ಲದೇ ವಿಧಾನಸಭಾ ಕ್ಷೇತ್ರದ ಶಾಸಕರ ಹೆಸರನ್ನು ಆ ಕ್ಷೇತ್ರದ ಮತದಾರರ ಪಟ್ಟಿಯಿಂದ ತೆಗೆದು ಹಾಕುವಂತಹ ಕಾರ್ಯ ಆಗಬಾರದು. ಈ ರೀತಿಯ ವಿಚಾರಗಳನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಹಾಗೂ, ಶಾಸಕರ ಹೆಸರನ್ನೇ ಪಟ್ಟಿಯಿಂದ ತೆಗೆದು ಹಾಕುವ ಪ್ರಸಂಗಗಳು ಎದುರಾಗದಂತೆ ಕ್ರಮ ವಹಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಅರ್ಜಿದಾರರ ವಾದ ನಿರಾಕರಿಸಿದ ಕೋರ್ಟ್
ಮತದಾರರ ಅಂತಿಮ ಪಟ್ಟಿ ಪ್ರಕಟದ ಆದನಂತರ ಪಟ್ಟಿಯನ್ನು ಮತ್ತಷ್ಟು ಪರಿಷ್ಕರಿಸಲು ಅವಕಾಶವಿಲ್ಲ ಎಂಬುದಾಗಿ ಅರ್ಜಿದಾರರ ವಾದವನ್ನು ತಳ್ಳಿ ಹಾಕಿರುವ ನ್ಯಾಯಾಲಯ, ಪ್ರಜಾಪ್ರತಿನಿಧಿ ಕಾಯ್ದೆ 1950ರ ಸೆಕ್ಷನ್ 22ರ ಪ್ರಕಾರ ಮತದಾರರ ಪಟ್ಟಿ ನಾಮನಿರ್ದೇಶನ ಮಾಡುವುದಕ್ಕಾಗಿ ಕೊನೆಯ ದಿನಾಂಕದವರೆಗೂ ತಿದ್ದುಪಡಿ ಮಾಡುವುದಕ್ಕೆ ಅವಕಾಶವಿದೆ ಎಂದು ಕೋರ್ಟ್ ತಿಳಿಸಿದೆ.
ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ ನಂತರ ಸ್ಥಳಾಂತರಗೊಂಡವರು ಮತ್ತು ಮೃತಪಟ್ಟವರ ಹೆಸರನ್ನು ಪಟ್ಟಿಯನ್ನು ತೆಗೆದುಹಾಕುವುದಕ್ಕೆ ಚುನಾವಣಾ ಆಯೋಗಕ್ಕೆ ಅವಕಾಶವಿದೆ. ಅಲ್ಲದೇ, ಮತದಾರರ ಪಟ್ಟಿಯಿಂದ ತಮ್ಮ ಹೆಸರು ಬಿಟ್ಟು ಹೋಗಿರುವ ವ್ಯಕ್ತಿಗಳು ಯಾವ ಸಂದರ್ಭದಲ್ಲಿ ಬೇಕಾದರೂ ತನ್ನ ಹೆಸರನ್ನು ನೋಂದಣಿ ಅಧಿಕಾರಿಯ ಮುಂದೆ ಅರ್ಜಿ ಸಲ್ಲಿಸಿ ಸೇರ್ಪಡೆ ಮಾಡಿಕೊಳ್ಳಬಹುದು. ಹಾಗೂ ನಿರ್ದಿಷ್ಟ ಕ್ಷೇತ್ರದಲ್ಲಿ ನಾಮ ನಿರ್ದೇಶನ ಮಾಡುವುದು ಮತ್ತು ಅಂತಹ ಕ್ಷೇತ್ರದಿಂದ ವರ್ಗಾವಣೆ ಹಾಗೂ ಮತದಾರರ ಪಟ್ಟಿಯನ್ನು ತಿದ್ದುಪಡಿ ಮಾಡಬಹುದಾಗಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.t
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ











Click it and Unblock the Notifications