• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಬ್ಬನ್ ಉದ್ಯಾನದಲ್ಲಿ ವಾಹನ ಸಂಚಾರ ನಿಷೇಧವಿಲ್ಲ: ನಡಿಗೆದಾರರು ಗರಂ

|

ಬೆಂಗಳೂರು, ಏಪ್ರಿಲ್ 9: ಕಬ್ಬನ್‌ ಉದ್ಯಾನದಲ್ಲಿ ಯಾವುದೇ ಕಾರಣಕ್ಕೂ ವಾಹನ ಸಂಚಾರವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ನೀಡಿರುವ ಹೇಳಿಕೆಯನ್ನು ನಡಿಗೆದಾರರು ಖಂಡಿಸಿದ್ದಾರೆ.

ಬೆಂಗಳೂರಿನಲ್ಲಿ ಶುದ್ಧಗಾಳಿ ಪಡೆಯಬಹುದಾದ ಪ್ರದೇಶ ಎಂದರೆ ಅದು ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾತ್ರ, ಹೆಚ್ಚೆಚ್ಚು ವಾಹನಗಳು ಸಂಚರಿಸಿದರೆ ವಾಯುಮಾಲಿನ್ಯ ಹೆಚ್ಚಾಗುತ್ತಿದೆ. ಉದ್ಯಾನದಲ್ಲಿ ವಾಕಿಂಗ್ ಮಾಡಿಯೂ ಯಾವುದೇ ಪ್ರಯೋಜನವಿಲ್ಲ ಎಂದು ನಡಿಗೆದಾರರು ಆರೋಪಿಸಿದ್ದಾರೆ.

ಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧವಿಲ್ಲಕಬ್ಬನ್ ಪಾರ್ಕ್‌ನಲ್ಲಿ ವಾಹನ ಸಂಚಾರ ನಿಷೇಧವಿಲ್ಲ

ನಮ್ಮ ಪೂರ್ವಜನರು ಉಳಿಸಿಕೊಂಡು ಬಂದಿರುವ ಪರಿಸರವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ವಕೀಲ ಹಾಗೂ ಕಬ್ಬನ್ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷರಾಗಿರುವ ಉಮೇಶ್ ಹೇಳಿದ್ದಾರೆ.

ಕಬ್ಬನ್ ಪಾರ್ಕ್ ಒಳಗೆ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಗುರುವಾರ ಸ್ಪಷ್ಟಪಡಿಸಿದೆ.

ಕಬ್ಬನ್‌ ಪಾರ್ಕ್ ಒಳಗೆ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸುವ ಕುರಿತು ಕಬ್ಬನ್‌ ಪಾರ್ಕ್ ನಡಿಗೆದಾರರ ಸಂಘದ ಅಧ್ಯಕ್ಷ ವಕೀಲ ಎಸ್‌.ಉಮೇಶ್‌ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ, ಗುರುವಾರ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠದ ಮುಂದೆ ಇತ್ತೀಚೆಗೆ ವಿಚಾರಣೆಗೆ ಬಂದಿತ್ತು.

ಈ ವೇಳೆ ಸರ್ಕಾರದ ಪರ ವಕೀಲರು, ಅರ್ಜಿ ಸಂಬಂಧ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಸಲ್ಲಿಸಿದ ಪ್ರಮಾಣ ಪತ್ರವನ್ನು ನ್ಯಾಯಪೀಠಕ್ಕೆ ಒದಗಿಸಿದರು.

ಅದರಂತೆ ಹೈಕೋರ್ಟ್‌ ನಿರ್ದೇಶನದಂತೆ ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧ ಮಾಡುವ ವಿಚಾರದ ಬಗ್ಗೆ 2020ರ ನ.21ರಂದು ಸಂಬಂಧಪಟ್ಟ ಎಲ್ಲಾ ಇಲಾಖೆಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು.

ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರ ನಿರ್ಬಂಧಿಸಲು ಸಾಧ್ಯವಿಲ್ಲ. ಮೊದಲಿನಂತೆಯೇ ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರ ಮುಂದುವರಿಯಬೇಕು ಎಂದು ಎಲ್ಲಾಇಲಾಖೆಗಳು ಅಭಿಪ್ರಾಯ ಸಲ್ಲಿಸಿವೆ. ಅವುಗಳನ್ನು ಪರಿಶೀಲಿಸಿದ ನಂತರ ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರ ನಿರ್ಬಂಧಿಸದೇ ಇರಲು ನಿರ್ಧರಿಸಲಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಲಾಗಿದೆ.

   ಕೋಪಗೊಂಡು ಕಾರಿನ ಗಾಜು ಪುಡಿ ಪುಡಿ ಮಾಡಿದ ದ್ರಾವಿಡ್ | Oneindia Kannada

   ಬಳಿಕ ಈ ಪ್ರಮಾಣ ಪತ್ರವನ್ನು ಪರಿಗಣಿಸಿದ ನ್ಯಾಯಪೀಠ, ನ್ಯಾಯಾಂಗ ನಿಂದನೆ ಆರೋಪವನ್ನು ಕೈಬಿಟ್ಟಿದೆ. ಕಬ್ಬನ್‌ ಪಾರ್ಕ್‌ನಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಬೇಕೆಂಬ ಅರ್ಜಿದಾರರ ಮನವಿ ಮತ್ತು ಆ ಕುರಿತು 2020ರ ಸೆ.3ರಂದು ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತರು ಮಾಡಿರುವ ಶಿಫಾರಸನ್ನು ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ 2020ರ ಅ.22ರಂದು ಸರಕಾರಕ್ಕೆ ಹೈಕೋರ್ಟ್‌ ಸೂಚಿಸಿತ್ತು.

   English summary
   Walkers in Bengaluru’s Cubbon Park were disappointed after the Karnataka government told the Karnataka High Court that it is not possible to stop vehicular movement inside the park.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X