ರಾಜ್ಯದಲ್ಲಿ ಅಂತರರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯದ ಸ್ಥಾಪನೆ: ಎಚ್‌ಡಿಕೆ

ಬೆಂಗಳೂರು, ಸೆಪ್ಟೆಂಬರ್ ೦5: ರಾಜ್ಯದಲ್ಲಿ ಅಂತರರಾಷ್ಟ್ರೀಯಮಟ್ಟದ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸುವ ಕನಸು ತಮಗಿದ್ದು ಶೀಘ್ರದಲ್ಲಿ ಈ ಕುರಿತು ಯೋಜಿಸಲಾಗುವುದು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕಲಾ ವಿಭಾಗದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಹೇಳಿದರು.

ಉತ್ತಮ ಶಿಕ್ಷಣ ನೀಡಲು ಅಗತ್ಯವಿರುವ ಅಂಶಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ರಾಜ್ಯದಲ್ಲಿ ಅಂತರರಾಷ್ಟ್ರೀಯ ಮಟ್ಟದ ವಿಶ್ವವಿದ್ಯಾನಿಲಯವೊಂದನ್ನು ಸ್ಥಾಪಿಸುವ ತಮ್ಮ ಕನಸಿಗೆ ರೂಪ ನೀಡಲು ಶೀಘ್ರದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕುಲಪತಿಗಳ ಆಯ್ಕೆಗೆ ಸಮಿತಿ

ಕುಲಪತಿಗಳ ಆಯ್ಕೆಗೆ ಸಮಿತಿ

ವಿಶ್ವವಿದ್ಯಾನಿಲಯಗಳ ಕುಲಪತಿಗಳ ಆಯ್ಕೆ ಆಯಾ ವಿಶ್ವವಿದ್ಯಾನಿಲಯಗಳ ಅಭಿವೃದ್ಧಿಯನ್ನು ಹಾಗೂ ಗುಣಮಟ್ಟವನ್ನು ನಿರ್ಧರಿಸುತ್ತದೆ. ಹಾಗಾಗಿ ವಿಶ್ವವಿದ್ಯಾನಿಲಯಗಳಿಗೆ ಕುಲಪತಿಗಳನ್ನು ಹಾಗೂ ಸಿಂಡಿಕೇಟ್ ಸದಸ್ಯರನ್ನು ಆಯ್ಕೆ ಮಾಡುವಾಗ ರಾಜಕೀಯೇತರ ಉತ್ತಮ ಜ್ಞಾನಿಗಳನ್ನು ಆಯ್ಕೆ ಮಾಡಬೇಕು ಅದಕ್ಕಾಗಿ ಶೀಘ್ರದಲ್ಲಿ ಸಮಿತಿಯೊಂದನ್ನು ರಚಿಸಿ ಅದರ ಮೂಲಕ ಆಯ್ಕೆಮಾಡಲು ನಿರ್ಧರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮೂಲಭೂತ ಸೌಕರ್ಯಕ್ಕೆ 1000 ಕೋಟಿ

ಮೂಲಭೂತ ಸೌಕರ್ಯಕ್ಕೆ 1000 ಕೋಟಿ

ರಾಜ್ಯದಲ್ಲಿ ಶಿಕ್ಷಣಕ್ಕಾಗಿ ಪ್ರಾಥಮಿಕ, ಪ್ರೌಢ ಹಾಗೂ ಪದವೀಧರ ಕಾಲೇಜುಗಳಲ್ಲಿ ಇರುವ ಅವಶ್ಯವಿರುವ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ 1000 ಕೋಟಿ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ. ಸಮಾಜದಲ್ಲಿ ಎಲ್ಲರಿಗು ಗುಣಮಟ್ಟದ ಶಿಕ್ಷಣ ದೊರಕಲು ಅಗತ್ಯವಿರುವ ಸಲಹೆಗಳನ್ನು ಸರ್ಕಾರಕ್ಕೆ ಶಿಕ್ಷಣ ಕ್ಷೇತ್ರದ ಪರಿಣಿತರು ಮುಕ್ತವಾಗಿ ನೀಡಲು ಮನವಿ ಮಾಡಿದ ಮುಖ್ಯಮಂತ್ರಿಗಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ತಮ್ಮ ಸರ್ಕಾರ ನೀಡಲಿದೆ ಎಂದು ಹೇಳಿದರು.

ವಿಭಜಿತ ಬೆಂಗಳೂರು ವಿವಿ ಅಭಿವೃದ್ಧಿಗೆ ಮನವಿ

ವಿಭಜಿತ ಬೆಂಗಳೂರು ವಿವಿ ಅಭಿವೃದ್ಧಿಗೆ ಮನವಿ

ಇದೇ ಸಮಯದಲ್ಲಿ ಶಿಕ್ಷಕರ ದಿನಾಚರಣೆಯ ಶುಭಾಶಯ ಕೋರಿದ ಅವರು ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದವರನ್ನು ಮತ್ತು ನಾಡಿಗೆ ಕೊಡುಗೆ ನೀಡಿದವರನ್ನು ಸ್ಮರಿಸಿದರು. ವಿಭಜನೆಗೊಂಡಿರುವ ಬೆಂಗಳೂರು ವಿಶ್ವವಿದ್ಯಾನಿಲಯದ ಕೇಂದ್ರ ವಿಶ್ವವಿದ್ಯಾನಿಲಯದ ಅಭಿವೃದ್ಧಿಗೆ ಕುಲಪತಿ ಪ್ರೊ. ಎಸ್. ಜಾಫೆಟ್ ಅವರು ಮುಖ್ಯಮಂತ್ರಿಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.

ಜಿ.ಟಿ.ದೇವೇಗೌಡ ಉಪಸ್ಥಿತಿ

ಜಿ.ಟಿ.ದೇವೇಗೌಡ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ, ಮಹಾಪೌರರಾದ ಸಂಪತ್‌ ಕುಮಾರ್, ಶಾಸಕ ಆರ್. ರೋಷನ್‌ ಬೇಗ್‌, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎನ್.ನಾಗಾಂಬಿಕ ದೇವಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+