ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ; ರಾಜ್ಯ ವಕ್ಫ್‌ ಬೋರ್ಡ್‌ ಸುತ್ತೋಲೆ

|
Google Oneindia Kannada News

ಬೆಂಗಳೂರು, ಮಾರ್ಚ್ 16: ಮಸೀದಿ, ದರ್ಗಾಗಳಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಸದಂತೆ ರಾಜ್ಯ ವಕ್ಫ್‌ ಬೋರ್ಡ್ ಮಂಡಳಿ ಸುತ್ತೋಲೆ ಹೊರಡಿಸಿದೆ.

ವಕ್ಫ್‌ ಬೋರ್ಡ್ ಅಡಿಯಲ್ಲಿ ನೋಂದಣಿಯಾಗಿರುವ ಸುಮಾರು 32 ಸಾವಿರ ಮಸೀದಿಗಳು ಹಾಗೂ ದರ್ಗಾಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿ ವರ್ಧಕಗಳನ್ನು ಬಳಸದಂತೆ ಸೂಚಿಸಲಾಗಿದೆ.

ಎಲ್ಲೆಂದರಲ್ಲಿ ಧ್ವನಿವರ್ಧಕ ಬಳಕೆ: ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆಎಲ್ಲೆಂದರಲ್ಲಿ ಧ್ವನಿವರ್ಧಕ ಬಳಕೆ: ಕ್ರಮ ಕೈಗೊಳ್ಳಲು ಹೈಕೋರ್ಟ್ ಸೂಚನೆ

ಶಬ್ದ ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಂಬಂಧ ಕಳೆದ ಡಿ.19ರಂದು ರಾಜ್ಯ ವಕ್ಫ್‌ ಬೋರ್ಡ್ ಸಭೆ ನಡೆಸಿತ್ತು. ಎಲ್ಲಾ ಮಸೀದಿ ಹಾಗೂ ದರ್ಗಾಗಳ ಆಡಳಿತ ಸಮಿತಿಗಳಿಗೆ ಶಬ್ದ ಮಾಲಿನ್ಯ ನಿಯಂತ್ರಣ ಸಂಬಂಧ ಅರಿವು ಮೂಡಿಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಸುತ್ತೋಲೆ ಹೊರಡಿಸಲಾಗಿದೆ.

Waqf Board Issues Circular Over Using Loudspeakers In Mosques

Recommended Video

ಖಾಸಗೀಕರಣಕ್ಕೆ ಒಳಪಡುವ ಬ್ಯಾಂಕ್‌ಗಳ ನೌಕರರ ಹಿತಾಸಕ್ತಿಗೆ ಯಾವುದೇ ಧಕ್ಕೆಯಾಗುವುದಿಲ್ಲ | Oneindia Kannada

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೆ ಧ್ವನಿವರ್ಧಕ ಬಳಸುವಂತಿಲ್ಲ. ಉಳಿದ ಅವಧಿಯಲ್ಲಿ ಶಬ್ದಮಾಲಿನ್ಯ ನಿಯಂತ್ರಣ ಮಾರ್ಗಸೂಚಿಯನ್ನು ಗಮನದಲ್ಲಿಟ್ಟುಕೊಂಡು ಬಳಸಬೇಕು. ಇದರ ಹೊರತಾಗಿ ಮಸೀದಿಗಳಲ್ಲಿ ಅಝಾನ್ ಹೇಳಲು, ಮರಣವಾರ್ತೆ, ದಫನ್ ಕಾರ್ಯದ ಸಮಯ, ಚಂದ್ರ ದರ್ಶನದ ಮಾಹಿತಿ ಸೇರಿದಂತೆ ಇನ್ನಿತರ ಪ್ರಮುಖ ಉದ್ದೇಶಗಳಿಗೆ ಧ್ವನಿವರ್ಧಕ ಬಳಸಬಹುದು ಎಂದು ರಾಜ್ಯ ವಕ್ಫ್‌ ಬೋರ್ಡ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮದ್ ಯೂಸುಫ್ ಸುತ್ತೋಲೆಯಲ್ಲಿ ಉಲ್ಲೇಖಿಸಿದ್ದಾರೆ.

English summary
Waqf board issues circular over using loudspeakers in mosques and dargas. It said not to use loudspeakers between 10 pm to 6 am
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X