ವಿಡಿಯೋ: ಬಸವನಗುಡಿಯ ಹಿಂದೂ ಸಮಾಜೋತ್ಸವ

ಬೆಂಗಳೂರು, ಫೆ.8: ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಿಶ್ವ ಹಿಂದೂ ಪರಿಷತ್ ಆಯೋಜನೆಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವ ವೆಬ್ ನಲ್ಲಿ ನೇರವಾಗಿ ಪ್ರಸಾರ ಮಾಡಲಾಯಿತು.

ಹಿಂದೂ ಮುಖಂಡ ಪ್ರವೀಣ್ ತೊಗಾಡಿಯಾ ಅನುಪಸ್ಥಿತಿಯ ನಡುವೆ 50ಕ್ಕೂ ಅಧಿಕ ಸ್ವಾಮೀಜಿಗಳು, ಆರೆಸ್ಸೆಸ್ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಸಮಾಜದ ಜನತೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಪೊಲೀಸ್ ಬಿಗಿ ಬಂದೋ ಬಸ್ತ್ ಸಮಾಜೋತ್ಸವಕ್ಕೆ ಒದಗಿಸಲಾಗಿದೆ.

ಗೋಪೂಜೆ, ವೇದಮಂತ್ರ ಪಠಣದೊಂದಿಗೆ ಕಾರ್ಯಕ್ರಮ ಕಳೆ ಕಟ್ಟಿದೆ. ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಸಂವಾದ.ಆರ್ಗ್ ಸಂಸ್ಥೆ ಗಳು ಲೈವ್ ಆಗಿ ಪ್ರಸಾರ ಮಾಡುತ್ತಿವೆ. ಕಾರ್ಯಕ್ರಮದ ವಿಸ್ತೃತ ವರದಿ ಮುಂದೆ ನಿರೀಕ್ಷಿಸಿ

Hindu Samajotsava, Live from Basavanagudi, Bangalore

ವಿಶ್ವ ಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಬೆಂಗಳೂರು ನಗರ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ವಿಎಚ್‌ಪಿಯು ಅವರ ವಿಡಿಯೋ ಭಾಷಣವನ್ನು ಸಮಾಜೋತ್ಸವ ಸಂದರ್ಭದಲ್ಲಿ ಬಿತ್ತರಿಸಲು ಸಿದ್ಧತೆ ನಡೆಸಿತ್ತು.ಅದರೆ, ಇದಕ್ಕೂ ನಿರ್ಬಂಧ ಹೇರಲಾಗಿದೆ.

ಪ್ರವೀಣ್ ಅವರ ಭಾಷಣದ ದೃಶ್ಯ ಅಥವಾ ಧ್ವನಿ ಮುದ್ರಿತ ನೇರ ಪ್ರಸಾರಕ್ಕೆ ಅನುಮತಿ ನೀಡಿಲ್ಲ. ಪ್ರವೀಣ್ ಅವರಿಗೆ ವಿಧಿಸಿರುವ ನಿರ್ಬಂಧದಲ್ಲಿ ಇದೂ ಸೇರಿದೆ ಎಂದು ನಗರ ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಸ್ಪಷ್ಟಪಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು. [ತೊಗಾಡಿಯಾ ವಿಡಿಯೋ ಭಾಷಣಕ್ಕೂ ನಿರ್ಬಂಧ]

ಉಪಸ್ಥಿತಿ: ಪೇಜಾವರಶ್ರೀಗಳು ಸೇರಿದಂತೆ 50ಕ್ಕೂ ಅಧಿಕ ಸ್ವಾಮೀಜಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಸೇರಿದಂತೆ ಅನೇಕ ಧರ್ಮದರ್ಶಿಗಳು, ಆರ್ ಅಶೋಕ್, ಅನಂತ್ ಕುಮಾರ್ ಸೇರಿದಂತೆ ಅನೇಕ ರಾಜಕೀಯ ಮುಖಂಡರು ಉಪಸ್ಥಿತರಿದ್ದಾರೆ.

Hindu Samajotsava

ಹಿಂದೂ ಸಮಾಜೋತ್ಸವದ ಲೈವ್ ವಿಡಿಯೋ ನೋಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+