IPL 2024: ಆರ್ಸಿಬಿ ಫ್ಯಾನ್ಸ್‌ಗೆ ಗುಡ್ನ್ಯೂಸ್, ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ನೋಡಬಹುದು ಐಪಿಎಲ್ ಪಂದ್ಯ
ಬೆಂಗಳೂರು, ಮಾರ್ಚ್ 21: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಐಪಿಎಲ್ ಪಂದ್ಯಗಳಿಗೂ ತಡೆಯಾಗಿತ್ತು. ನಗರದಲ್ಲಿ ಈಗಾಗಲೇ ನೀರಿನ ಹಾಹಾಕಾರ ಇದೆ. ಇಂತ ಸಮಯದಲ್ಲಿ ಐಪಿಎಲ್ ಪಂದ್ಯಾವಳಿ ನಡೆಯುವುದಕ್ಕೆ ಅವಕಾಶ ನೀಡಬಾರದು ಎಂದು ಒತ್ತಡ ಕೇಳಿ ಬರುತ್ತಿತ್ತು. ಇದರಿಂದ ಕ್ರಿಕೆಟ್ ಫ್ಯಾನ್ಸ್ ತುಂಬಾ ಬೇಸರಗೊಂಡಿದ್ದರು. ಆದರೆ, ಈಗ ಅವರಿಗೆ ಗುಡ್ ನ್ಯೂಸ್ ಸಿಕ್ಕಿದೆ.
ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳನ್ನು ಸ್ಥಳಾಂತರ ಮಾಡಬೇಕೆಂದು ಒತ್ತಡ ಕೇಳಿ ಬಂದ ಬೆನ್ನಲ್ಲೇ, ಸಂಸ್ಕರಿಸಿದ ನೀರನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಒದಗಿಸಲು ಕೋರಿ ಕೆಎಸ್‌ಸಿಎ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯನ್ನು ಮನವಿ ಮಾಡಿತ್ತು. ಕೆಎಸ್‌ಸಿಎ ಮನವಿಗೆ ಬಿಡಬ್ಲ್ಯುಎಸ್‌ಎಸ್‌ಬಿ ಸಕಾರಾತ್ಮಕವಾಗಿ ಸ್ಪಂದಿಸಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ ಐಪಿಎಲ್ ಪಂದ್ಯ
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್ 2024) 17ನೇ ಆವೃತ್ತಿ ಮಾರ್ಚ್ 22 ರಂದು ಅದ್ಧೂರಿಯಾಗಿ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿಯೂ ಪಂದ್ಯಗಳು ನಡೆಯಲಿವೆ. ನೀರಿನ ಸಮಸ್ಯೆಯಿಂದಾಗಿ ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಸ್ಟೇಡಿಯಂನಿಂದ ಬೇರೆಡೆಗೆ ಸ್ಥಳಾಂತರಿಸಬಹುದು ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಬಿಡಬ್ಲ್ಯುಎಸ್‌ಎಸ್‌ಬಿ ಪಂದ್ಯದ ವೇಳೆ ಕ್ರೀಡಾಂಗಣಕ್ಕೆ 75,000 ಲೀಟರ್ ಸಂಸ್ಕರಿಸಿದ ನೀರನ್ನು ಪೂರೈಸಲಿದೆ.
ಕ್ರಿಕೆಟ್ ಪಂದ್ಯದ ವೇಳೆ ಮೈದಾನ ಹದಗೊಳಿಸಲು ಸಂಸ್ಕರಿಸಿದ ನೀರನ್ನು ಪೂರೈಸಲು ಬಿಡಬ್ಲ್ಯುಎಸ್‌ಎಸ್‌ಬಿ ಮುಂದಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನ ಪಂದ್ಯಗಳಿಗೆ ಸಂಸ್ಕರಿಸಿದ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗುವುದು. ಕೆಎಸ್‌ಸಿಎ ಅಧಿಕಾರಿಗಳು ಸಂಸ್ಕರಿಸಿದ ನೀರನ್ನು ಕೇಳಿದ್ದಾರೆ. ಸಂಸ್ಕರಿಸಿದ ನೀರಿನ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಬ್ಬನ್ ಪಾರ್ಕ್‌ನಲ್ಲಿರುವ ಕೊಳಚೆ ನೀರು ಸಂಸ್ಕರಣಾ ಘಟಕದಿಂದ ಐಪಿಎಲ್ ಪಂದ್ಯಾವಳಿಗಳಿಗೆ ನೀರು ಸರಬರಾಜು ಮಾಡಲಾಗುವುದು ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.

ಸಂಸ್ಕರಿಸಿದ ನೀರು ಬಿಡುವಂತೆ ಮನವಿ ಮಾಡಿದ್ದ ಕೆಎಸ್‌ಸಿಎ
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗೆ ಅನುಕೂಲವಾಗುವಂತೆ ಸಂಸ್ಕರಿಸಿದ ನೀರನ್ನು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಒದಗಿಸಲು ಕೋರಿ ಕೆಎಸ್‌ಸಿಎ (Karnataka State Cricket Association) ಆಡಳಿತ ಮಂಡಳಿಯ ಪದಾಧಿಕಾರಿಗಳು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾದ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು.
ಪಂದ್ಯಾವಳಿಗಳ ಸಂದರ್ಭದಲ್ಲಿ ಪ್ರತಿನಿತ್ಯ ಸುಮಾರು 75,000 ಲೀಟರ್‌ಗಳಷ್ಟು ನೀರಿನ ಅವಶ್ಯಕತೆ ಇದೆ. ಇದಕ್ಕಾಗಿ ಕಬ್ಬನ್ ಪಾರ್ಕ್ ತ್ಯಾಜ್ಯ ನೀರು ಸಂಸ್ಕರಣ ಘಟಕದಿಂದ ಅಗತ್ಯ ನೀರನ್ನು ದೊರಕಿಸಿ ಕೊಡುವಂತೆ ಕೆಎಸ್‌ಸಿಎ ಪದಾಧಿಕಾರಿಗಳು ಮನವಿ ಮಾಡಿದ್ದರು. ಇದಕ್ಕೆ ಜಲಮಂಡಳಿ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದರು.
"ಸಂಸ್ಕರಿಸಿದ ನೀರನ್ನು ಬಳಸಲು ಉತ್ತೇಜನ ನೀಡುವ ದೃಷ್ಟಿಯಿಂದ ಹಾಗು ಇದರಿಂದ ಕಾವೇರಿ ಅಥವಾ ಕೊಳವೆ ಬಾವಿಯ ನೀರು ದುರ್ಬಳಕೆ ಆಗದೆ ಇರುವುದರಿಂದ ಪಂದ್ಯ ಚಟುವಟಿಕೆಯನ್ನು ಸಂಸ್ಕರಿಸಿದ ನೀರನ್ನು ಪೂರೈಸಲಾಗುವುದು" ಎಂದು ತಿಳಿಸಿದ್ದಾರೆ.
ಮಾರ್ಚ್ 22ರಿಂದ ಮಹತ್ವದ ಐಪಿಎಲ್ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೆಣೆಸಾಡಲಿವೆ. ಚೆನ್ನೈನ ಚಿದಂಬರಂ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾರ್ಚ್ 25 ರಂದು ಮೊದಲ ಐಪಿಎಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಜೊತೆಗೆ ಸೆಣೆಸಾಡಲಿದೆ. ನಂತರ ಮಾರ್ಚ್ 29 ಮತ್ತು ಏಪ್ರಿಲ್ 2 ರಂದು ಪಂದ್ಯಗಳು ನಡೆಯಲಿವೆ.












Click it and Unblock the Notifications