Water crisis in Bengaluru: ಕೈಗಾರಿಕೆಗಳಿಗೂ ಬಿಡದ ನೀರಿನ ಬಿಕ್ಕಟ್ಟು, ಉದ್ಯೋಗಿಗಳಿಗೆ ನೀರು ಪೂರೈಸಲು ಹೆಣಗಾಟ!
ಬೆಂಗಳೂರು, ಮಾರ್ಚ್ 06: ರಾಜ್ಯದಲ್ಲಿ ಬರದ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ಹೆಚ್ಚಾಗುತ್ತಿದೆ. ರಾಜಧಾನಿಯ ನೀರಿನ ಬಿಕ್ಕಟ್ಟು ಕೈಗಾರಿಕಾ ಉತ್ಪಾದನೆಗೆ ತೀವ್ರ ಹೊಡೆತ ನೀಡುತ್ತಿದ್ದು, ತಮ್ಮ ಉದ್ಯೋಗಿಗಳ ಮೂಲಭೂತ ಅಗತ್ಯಗಳನ್ನು ಪೂರೈಸಲು ಸಹ ನೀರಿಲ್ಲದೆ ಅವರು ಹೆಣಗಾಡುತ್ತಿದ್ದಾರೆ.
ಕೈಗಾರಿಕೋದ್ಯಮಿಗಳ ಪ್ರಕಾರ, ನೀರಿನ ಸಂಗ್ರಹಣೆಯ ವೆಚ್ಚವು ಉತ್ಪಾದನಾ ವೆಚ್ಚವನ್ನು ಹೆಚ್ಚಿಸುತ್ತಿದೆ. ಉದಾಹರಣೆಗೆ, ನೀರಿನ ಸಮಸ್ಯೆಯಿಂದಾಗಿ ಫಿನೈಲ್ ಮತ್ತು ಇತರ ಮನೆ ಶುಚಿಗೊಳಿಸುವ ಉತ್ಪನ್ನಗಳ ಉತ್ಪಾದನೆಯ ವೆಚ್ಚವು ಕನಿಷ್ಠ 10% ಹೆಚ್ಚಾಗಿದೆ. ನಮ್ಮ ಬೋರ್‌ವೆಲ್‌ಗಳು ಬತ್ತಿರುವುದರಿಂದ ದುಬಾರಿ ಬೆಲೆಯ ಟ್ಯಾಂಕರ್‌ಗಳನ್ನೇ ಅವಲಂಬಿಸಬೇಕಾಗಿದೆ. ಇದರಿಂದ ಉತ್ಪಾದನಾ ವೆಚ್ಚ ಶೇ.10ರಷ್ಟು ಏರಿಕೆಯಾಗಿದೆ ಎಂದು ಮಾಚೋಹಳ್ಳಿ (ಬೆಂಗಳೂರು ಉತ್ತರ) ಕೈಗಾರಿಕಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಆಶಾ ಕೆಮಿಕಲ್ಸ್‌ನ ಆಶಾ ಎನ್‌ಆರ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಬೆಂಗಳೂರಿನಲ್ಲಿನ ಎಲ್ಲಾ ಕೈಗಾರಿಕೆಗಳು ತೀವ್ರ ನೀರಿನ ಬಿಕ್ಕಟ್ಟಿನಿಂದ ತತ್ತರಿಸಿದ್ದರೂ, ನೀರು ಅವಲಂಬಿತ ಕೈಗಾರಿಕೆಗಳಲ್ಲಿ ಇದರ ಪರಿಣಾಮವು ವಿಶೇಷವಾಗಿ ಎದ್ದುಕಾಣುತ್ತಿದೆ. ಜವಳಿ ಸಂಸ್ಕರಣೆ ಘಟಕಗಳು, ರಾಸಾಯನಿಕ ಕೈಗಾರಿಕೆಗಳು ಮತ್ತು ಕಾಗದ ತಯಾರಕರು ಇದರಲ್ಲಿ ಪ್ರಮುಖವಾಗಿ ಬಿಕ್ಕಟ್ಟಿಗೆ ಸಿಲುಕಿದ್ದಾರೆ.
"ಈ ಕೈಗಾರಿಕೆಗಳು ನೀರಿನ ಮೇಲೆ ಹೆಚ್ಚು ಅವಲಂಬಿತವಾಗಿರುವುದರಿಂದ, ಅವುಗಳು ಹೆಚ್ಚು ಕಷ್ಟಕ್ಕೆ ಒಳಗಾಗುತ್ತವೆ. ಪರಿಸ್ಥಿತಿ ಮುಂದುವರಿದರೆ, ಹೆಚ್ಚಿನ ದರದಲ್ಲಿ ನೀರನ್ನು ಖರೀದಿಸಲು ಸಾಧ್ಯವಾಗದ ಕಾರಣ ಅವುಗಳಲ್ಲಿ ಹಲವು ತಾತ್ಕಾಲಿಕವಾಗಿ ಅಂಗಡಿಗಳನ್ನು ಮುಚ್ಚಬೇಕಾಗುತ್ತದೆ" ಎಂದು ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ಸಂಘದ ಸದಸ್ಯ ಸುರೇಶ್ ಎನ್ ಸಾಗರ್ ಹೇಳಿದ್ದಾರೆ.
ಕಾರ್ಮಿಕರ ಮೂಲಭೂತ ಅವಶ್ಯಕತೆಗಳು
ಉದ್ಯಮ ಸಂಸ್ಥೆಗಳು ತಮ್ಮ ಕಾರ್ಮಿಕರ ಮೂಲಭೂತ ಅಗತ್ಯಗಳನ್ನು ಪೂರೈಸಲು ಹೆಣಗಾಡುತ್ತಿದ್ದಾರೆ. ನೂರಾರು ಕಾರ್ಮಿಕರು ಇರುವ ಗಾರ್ಮೆಂಟ್ಸ್ ಕಾರ್ಖಾನೆಗಳು, ಕೈಗಾರಿಕೆಗಳಲ್ಲಿ ಕಾರ್ಮಿಕರ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಅವರಿಗೆ ಸಾಧ್ಯವಾಗುತ್ತಿಲ್ಲ. ಈ ವರ್ಷ ಬಹುತೇಕ ಬೋರ್‌ವೆಲ್‌ಗಳು ಬತ್ತಿ ಹೋಗಿರುವುದರಿಂದ ಪರಿಸ್ಥಿತಿ ಹದಗೆಟ್ಟಿದೆ.

ಕೈಗಾರಿಕೋದ್ಯಮಿಗಳು ಮುಂದಿನ ಮೂರು ತಿಂಗಳ ನೀರಿನ ನಿರ್ವಹಣೆಯ ಬಗ್ಗೆ ಚಿಂತಿಸುತ್ತಿದ್ದಾರೆ. ಬೇಸಿಗೆಯ ಆರಂಭದಲ್ಲಿ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ನಾವು ಬೇಸಿಗೆಯನ್ನು ಹೇಗೆ ಕಳೆಯುತ್ತೇವೆ ಎಂಬುದೇ ದೊಡ್ಡ ಆತಂಕ ಎಂದು ಹಲವು ಕೈಗಾರಿಕೋದ್ಯಮಿಗಳು ಆತಂಕ ವ್ಯಕ್ತಪಡಿಸುತ್ತಿದ್ದಾರೆ.
'ಸಂಸ್ಕರಿಸಿದ ನೀರಿನ ಬಳಕೆಗೆ ಮುಕ್ತ'
ಕೈಗಾರಿಕೋದ್ಯಮಿಗಳು ಮುಂಚೂಣಿಯಲ್ಲಿರುವ ಬಿಕ್ಕಟ್ಟುಗಳನ್ನು ಸೋಲಿಸಲು ಸಂಸ್ಕರಿಸಿದ ನೀರನ್ನು ಬಳಸಲು ಸಿದ್ಧರಾಗಿದ್ದಾರೆ. ಆದರೆ ಅದನ್ನು ಪಡೆಯುವುದು ಹೇಗೆ ಎನ್ನುವ ಬಗ್ಗೆ ಅವರಿಗೆ ಮಾಹಿತಿಯಿಲ್ಲ. "ನಾವು ಸಂಸ್ಕರಿಸಿದ ನೀರನ್ನು ಬಳಸಲು ಬಯಸುತ್ತೇವೆ. ಆದರೆ, ಅದನ್ನು ತೆಗೆದುಕೊಳ್ಳುವ ವ್ಯವಸ್ಥೆ ಮತ್ತು ವಿಧಾನಗಳ ಕೊರತೆ ಅಡ್ಡಿಯಾಗಿದೆ" ಎಂದು ಪೀಣ್ಯ ಇಂಡಸ್ಟ್ರೀಸ್ ಅಸೋಸಿಯೇಷನ್‌ನ ಶಿವಕುಮಾರ್ ತಿಳಿಸಿದ್ದಾರೆ.
ಇನ್ನು, ಸಂಸ್ಕರಿಸಿದ ನೀರನ್ನು ಕೈಗಾರಿಕೆಗಳಿಗೆ ನೀಡುವ ಮತ್ತು ಹಂಚುವ ಪ್ರಕ್ರಿಯೆ ಬಗ್ಗೆ ಅರ್ಥಮಾಡಿಕೊಳ್ಳಲು ಶೀಘ್ರದಲ್ಲೇ ಎಲ್ಲಾ ಪಾಲುದಾರರನ್ನು ಭೇಟಿಯಾಗುತ್ತೇವೆ. ಶೀಘ್ರದಲ್ಲೇ ಸಭೆ ನಡೆಸಿ ಅವರ ಅಗತ್ಯತೆಗಳನ್ನು ಅರಿತುಕೊಳ್ಳುತ್ತೇವೆ, ಚರ್ಚೆಗಳ ಆಧಾರದ ಮೇಲೆ ನಾವು ಸಂಸ್ಕರಿಸಿದ ನೀರು ಸರಬರಾಜು ಮಾಡಲು ವ್ಯವಸ್ಥೆ ಮಾಡುತ್ತೇವೆ ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ವಿ ತಿಳಿಸಿದ್ದಾರೆ. ದೀರ್ಘಾವಧಿಯ ಕ್ರಮವಾಗಿ, ಕೈಗಾರಿಕಾ ಪ್ರದೇಶಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಸಲು ಜಲ ಮಂಡಳಿ (BWSSB) ಪೈಪ್‌ಲೈನ್‌ಗಳನ್ನು ಹಾಕಲು ಯೋಜಿಸುತ್ತಿದೆ.
ಮಾಹಿತಿ: ಡೆಕ್ಕನ್ ಹೆರಾಲ್ಡ್
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Water Tank Vastu: ಮನೆಯಲ್ಲಿ ನೀರಿನ ಟ್ಯಾಂಕ್ ಇದೆಯೇ? ವಾಸ್ತು ನಿಯಮಗಳು ತಿಳಿದುಕೊಳ್ಳಿ












Click it and Unblock the Notifications