Water Crisis: ನೀರಿನ ಕೊರತೆ ಹೋಟೆಲ್ ರೆಸಾರ್ಟ್‌ಗಳಿಕೆ ಬಂತು ಖಡಕ್ ಸೂಚನೆ

ಬೆಂಗಳೂರು, ಏಪ್ರಿಲ್. 11: ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ನೀರಿನ ಅಭಾವ ಉಂಟಾಗಿದೆ. ಇದರ ಜೊತೆಗೆ ಕಾಲರಾ ಮತ್ತು ವಾಂತಿ, ಬೇದಿ ಪ್ರಕರಣಗಳು ವರದಿಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಹಾಸ್ಟೆಲ್ ವಿದ್ಯಾರ್ಥಿಗಳಲ್ಲಿ ಕಾಲರಾ ಹೆಚ್ಚಾಗಿದ್ದು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಖಡಕ್ ಸೂಚನೆ ನೀಡಿದೆ.

ಎಲ್ಲಾ ರಸ್ತೆಬದಿ ವ್ಯಾಪಾರಿಗಳು, ಡಾಬಾ, ಸ್ವೀಟ್ ಸ್ಟಾಲ್, ಬೇಕರಿ, ಚಾಟ್ಸ್, ಮೆಸ್, ಕ್ಯಾಂಟೀನ್, ಕ್ಯಾಟರಿಂಗ್, ಸಮುದಾಯ ಭವನ, ಕಲ್ಯಾಣ ಮಂಟಪದವರು, ಪೇಯಿಂಗ್‍ಗೆಸ್ಟ್, ಹೋಮ್ ಸ್ಟೇ, ಹೊಟೇಲ್, ಬಾರ್ ಅಂಡ್ ರೆಸ್ಟೋರೆಂಟ್, ರೆಸಾರ್ಟ್, ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮ, ಸರ್ಕಾರಿ ಮತ್ತು ಸರ್ಕಾರೇತರ ವಸತಿನಿಲಯ ಮತ್ತು ಎಲ್ಲಾ ಆಹಾರ ತಯಾರಿಕಾದಾರರು ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಕಡ್ಡಾಯವಾಗಿ ಗ್ರಾಹಕರಿಗೆ ಕುದಿಸಿದ ಶುದ್ಧವಾದ ನೀರನ್ನು ನೀಡುವಂತೆ ಸೂಚಿಸಿದೆ.

Water Crisis New guidelines for hotels and resorts in Bengaluru

ಆಹಾರ ತಯಾರಿಕಾ ಮತ್ತು ಸಂಗ್ರಹಣಾ ಸ್ಥಳಗಳಲ್ಲಿ ನೊಣಗಳು, ಸೊಳ್ಳೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವಂತೆ, ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡುಬೇಕು. ಇದರ ಜೊತೆಗೆ ತಯಾರಿಸಿರುವ ಎಲ್ಲಾ ಆಹಾರ ಪದಾರ್ಥಗಳನ್ನು ಸೂಕ್ತ ರೀತಿಯಲ್ಲಿ ಮುಚ್ಚಿಟ್ಟು ಸ್ವಚ್ಚವಾದ ವಿಧಾನದ ಮೂಲಕ ತಯಾರಿಕೆ ಮತ್ತು ವಿತರಣೆಯನ್ನು ಮಾಡುವಂತೆ ತಿಳಿಸಿದೆ.

ಹಾಗೆಯೇ ಎಲ್ಲಾ ಆಹಾರ ಉದ್ದಿಮೆದಾರರು ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳನ್ನು ಒಳಗೊಂಡಂತೆ ಆಹಾರ ಪದಾರ್ಥ ವ್ಯಾಪಾರಸ್ಥರು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಆಹಾರ ನೋಂದಣಿ/ ಪರವಾನಗಿಯನ್ನು ಪಡೆಯದೇ ವ್ಯಾಪಾರ ವಹಿವಾಟು ನಡೆಸುವವರು ತಕ್ಷಣದಲ್ಲೇ ಇಲಾಖೆಯಿಂದ ಆಹಾರ ನೋಂದಣಿ/ ಪರವಾನಗಿಯನ್ನು ಪಡೆದುಕೊಳ್ಳಬೇಕು.

ಇಲಾಖೆಯಿಂದ ನೋಂದಣಿ ಅಥವಾ ಪರವಾನಗಿ ತೆಗೆದುಕೊಳ್ಳದೇ ಹೋದರೆ ಕಾಯ್ದೆಯಡಿ ನೋಟೀಸ್ ಮತ್ತು ದಂಡವನ್ನು ವಿಧಿಸಲಾಗುವುದು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಎಚ್ಚರಿಸಿದೆ. ಇತ್ತೀಚೆಗೆ ನೀರಿನ ಕೊರತೆಯಿಂದಾಗಿ ಹೊಟೇಲ್‌ಗಳಲ್ಲಿ ನೀರು ತಂದಿಡುವ ವ್ಯವಸ್ಥೆ ಇಲ್ಲದಂತಾಗಿದೆ.

Water Crisis New guidelines for hotels and resorts in Bengaluru

ಇದಲ್ಲದೆ ಹಲವು ಹೋಟೆಲ್‌ಗಳಲ್ಲಿ ಬಳಸಿ ಬಿಸಾಡುವ ಪ್ಲೇಟ್‌ ಮತ್ತು ಲೋಟಗಳನ್ನು ಬಳಸಲಾಗುತ್ತಿದೆ. ಮನೆಯಲ್ಲಿಯೂ ಕೂಡ ಹೆಚ್ಚು ಹೆಚ್ಚು ಬಳಸಿ ಬಿಸಾಡುವ ಪ್ಲೇಟ್ ಮತ್ತು ಬಾಳೆ ಎಲೆಗಳನ್ನು ಉಪಯೋಗಿಸುವುದು ಹೆಚ್ಚಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+