Breaking; ಬೆಂಗಳೂರಿನ ಇಕೋ ವಲ್ಡ್, ಇಕೋ ಸ್ಪೇಸ್ ಬಳಿ ಸಂಚರಿಸಬಹುದು
ಬೆಂಗಳೂರು, ಸೆಪ್ಟೆಂಬರ್ 08: ಉದ್ಯಾನ ನಗರಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಕಡಿಮೆಯಾಗಿದೆ. ಜಲಾವೃತಗೊಂಡಿದ್ದ ರಸ್ತೆಗಳಲ್ಲಿ ಸಹ ನೀರು ಇಳಿಮುಖಗೊಂಡಿದ್ದು, ವಾಹನ, ಜನರ ಸಂಚಾರಕ್ಕೆ ಮುಕ್ತವಾಗುತ್ತಿವೆ.
Recommended Video
ಗುರುವಾರ ಸಂಚಾರಿ ಪೊಲೀಸರು ಇಕೋ ವಲ್ಡ್ ಮತ್ತು ಇಕೋ ಸ್ಫೆಸ್ ಬಳಿ ನೀರು ಇಳಿದಿದೆ ಎಂದು ಮಾಹಿತಿ ನೀಡಿದ್ದಾರೆ. ವಾಹನ ಸವಾರರು ಈ ಮಾರ್ಗದಲ್ಲಿ ಸಂಚಾರ ನಡೆಸಬಹುದಾಗಿದೆ ಎಂದು ಪ್ರದೇಶದ ಪ್ರಸ್ತುತ ಪರಿಸ್ಥಿತಿ ವಿಡಿಯೋ ಪೋಸ್ಟ್ ಮಾಡಿದ್ದಾರೆ.
Good morning, water logging is reduced near eco space in ORR and all vehicles can move from both sides of the road, Thank you. pic.twitter.com/8hJtbgDYl6
— HSR LAYOUT TRAFFIC BTP (@hsrltrafficps) September 8, 2022
ಹೆಚ್‌ಎಎಲ್ ವಿಮಾನ ನಿಲ್ದಾಣ ಸಂಚಾರಿ ಠಾಣೆ ಪೊಲೀಸರು ಟ್ವೀಟ್ ಮಾಡಿದ್ದು, ಇಕೋ ವಲ್ಡ್ ಬಳಿ ರಸ್ತೆಯಲ್ಲಿ ನೀರು ಇಳಿಕೆಯಾಗಿದೆ. ವಾಹನಗಳು ಸಂಚಾರ ನಡೆಸುತ್ತಿವೆ. ಹೆಚ್‌ಎಸ್‌ಆರ್ ಮತ್ತು ಸಿಲ್ಕ್ ಬೋರ್ಡ್ ಕಡೆ ಹೋಗುವ ವಾಹನ ಸವಾರರು ಈ ಮಾರ್ಗ ಬಳಕೆ ಮಾಡಬಹುದು ಎಂದು ಹೇಳಿದ್ದಾರೆ.

ಹೆಚ್‌ಎಸ್ಆರ್ ಲೇಔಟ್ ಸಂಚಾರಿ ಠಾಣೆ ಪೊಲೀಸರು ಟ್ವೀಟ್ ಮಾಡಿದ್ದು, ಹೊರ ವರ್ತುಲ ರಸ್ತೆಯ ಇಕೋ ಸ್ಪೇಸ್ ಬಳಿ ರಸ್ತೆಯಲ್ಲಿ ನಿಂತಿದ್ದ ನೀರು ಕಡಿಮೆಯಾಗಿದೆ. ಎರಡು ಕಡೆ ವಾಹನ ಸಂಚಾರ ನಡೆಸಬಹುದು ಎಂದು ಮಾಹಿತಿ ನೀಡಿದ್ದಾರೆ.
ಮಳೆ ಅಬ್ಬರ ಕಡಿಮೆ; ಶನಿವಾರದಿಂದ ಪ್ರತಿದಿನ ಸಂಜೆ ಬೆಂಗಳೂರು ನಗರದಲ್ಲಿ ಮಳೆ ಅಬ್ಬರಿಸಿತ್ತು. ಇದರ ಪರಿಣಾಮ ಹೊರವರ್ತುಲ ರಸ್ತೆಯ ಹಲವು ಬಡಾವಣೆಗಳು ಜಲಾವೃತವಾಗಿದ್ದವು. ಸರ್ಜಾಪುರ, ಮಹದೇವಪುರ ವ್ಯಾಪ್ತಿಯಲ್ಲಿ ಹಲವು ರಸ್ತೆಗಳಲ್ಲಿ ನೀರು ತುಂಬಿ ವಾಹನ ಸಂಚಾರಕ್ಕೆ ಅಡ್ಡಿಯಾಗಿತ್ತು.
ಆದರೆ ಮಂಗಳವಾರ ಮತ್ತು ಬುಧವಾರ ಸಂಜೆ ನಗರದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ಇದರಿಂದಾಗಿ ರಸ್ತೆಗಳಲ್ಲಿ ಹರಿಯುತ್ತಿದ್ದ ನೀರು ಸಹ ಇಳಿಮುಖವಾಗಿದ್ದು, ಹಲವು ರಸ್ತೆಗಳು ವಾಹನ ಸಂಚಾರಕ್ಕೆ ಮುಕ್ತವಾಗಿವೆ.

ಸಂಚಾರಿ ಪೊಲೀಸರು ಸಹ ಯಾವ ರಸ್ತೆಗಳಲ್ಲಿನ ಪರಿಸ್ಥಿತಿ ಹೇಗಿದೆ? ಎಂದು ಕ್ಷಣ-ಕ್ಷಣದ ಅಪ್‌ಡೇಟ್ ನೀಡುತ್ತಿದ್ದಾರೆ. ವಾಹನ ಸವಾರರು ಯಾವ ರಸ್ತೆಯಲ್ಲಿ ಸಂಚಾರ ನಡೆಸಬಾರದು ಎಂದು ಮಾಹಿತಿ ನೀಡುವ ಮೂಲಕ ಜನರಿಗೆ ನೆರವಾಗುತ್ತಿದ್ದಾರೆ.
ಬೆಂಗಳೂರಿಗೆ ಮಳೆ ಮುನ್ಸೂಚನೆ; ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಇಳಿಮುಖವಾಗಿದೆ. ಆದರೆ ಮುಂದಿನ ಎರಡು ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 8-9 ಮತ್ತು 9-10ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಭಾರೀ ಮುಳೆ ಮುನ್ಸೂಚನೆ ನೀಡಲಾಗಿದೆ. ಆಗ್ನೇಯ ಬಂಗಾಳಕೊಲ್ಲಿಯಲ್ಲಿನ ಚಂಡಮಾರುತ ಪರಿಚಲನೆಯ ಕಾರಣದಿಂದಾಗಿ ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಉತ್ತರ ಕೇರಳದಲ್ಲಿ ಮಳೆಯಾಗಲಿದೆ.
ಗುರುವಾರ ಮುಂಜಾನೆಯಿಂದಲೇ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಕೆಲವು ಬಡಾವಣೆಗಳಲ್ಲಿ ಮುಂಜಾನೆ ತುಂತುರು ಮಳೆಯಾಗಿದೆ. ಕಳೆದ ವಾರದಿಂದ ಸುರಿಯುತ್ತಿರುವ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಈಗ ನೀರು ಇಳಿಮುಖವಾಗುತ್ತಿದೆ.
ಹೊರವರ್ತುಲ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಡೆಲಿವರಿಬಾಯ್‌ಗಳು, ಇ-ಕಾಮರ್ಸ್ ಕಂಪನಿಗಳು ಗ್ರಾಹಕರಿಗೆ ಉತ್ಪನ್ನ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಹಲವು ಐಟಿ ಕಂಪನಿಗಳು ಮನೆಯಿಂದಲೇ ಕೆಲಸ ಮಾಡುವ ಆಯ್ಕೆ ನೀಡಿವೆ. ಮುಂದಿನ ವಾರ ಐಟಿ ಉದ್ಯೋಗಿಗಳು ಪುನಃ ಕಚೇರಿಗೆ ಆಗಮಿಸುವ ನಿರೀಕ್ಷೆ ಇದೆ.












Click it and Unblock the Notifications