ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ:ಈ ಬಾರಿ ಬೇಸಿಗೆ ಬೆಳೆಗೆ ನೀರಿಲ್ಲ!

By ಬೆಂಗಳೂರು ಪ್ರತಿನಿಧಿ
|
Google Oneindia Kannada News

ಬೆಂಗಳೂರು, ಫೆಬ್ರವರಿ 04: ಪ್ರಸ್ತುತ ರಾಜ್ಯದ ಕೆಲವು ಜಲಾಶಯಗಳಲ್ಲಿ ಒಳಹರಿವು ಇಲ್ಲದ ಕಾರಣದಿಂದ ಈ ಬಾರಿ ಬೇಸಿಗೆ ಬೆಳೆಗೆ ರೈತರ ಜಮೀನಿಗೆ ನೀರು ಬಿಡದಂತೆ ಜಲಸಂಪನ್ಮೂಲ ಇಲಾಖೆ ಸೂಚನೆ ನೀಡಿದೆ.

ಶೀಘ್ರ ವೃಷಭಾವತಿ ತುಂಬಿ ಹರಿಯಲಿದ್ದಾಳೆ, ಯಾವ್ಯಾವ ಭಾಗಕ್ಕೆ ಅನುಕೂಲಶೀಘ್ರ ವೃಷಭಾವತಿ ತುಂಬಿ ಹರಿಯಲಿದ್ದಾಳೆ, ಯಾವ್ಯಾವ ಭಾಗಕ್ಕೆ ಅನುಕೂಲ

ಹೌದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗಲಿದ್ದು, ಜಲಾಶಯಗಳಲ್ಲಿ ಇರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಬಳಸಬೇಕು. ಯಾವುದೇ ಕಾರಣಕ್ಕೂ ಬೇಸಿಗೆ ಬೆಳೆಗೆ ನೀರು ಬಿಡುಗಡೆ ಮಾಡಬಾರದು ಎಂದು ಜಲಸಂಪನ್ಮೂಲ ಸಚಿವಾಲಯದ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಪತ್ರದ ಮೂಲಕ ವಿವಿಧ ಜಲಾಶಯಗಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 ಬೆಂಗಳೂರಲ್ಲಿ ನೀರಿನ ದರ ಏರಿಕೆ ಸಾಧ್ಯತೆ, ಎಷ್ಟು ಹೆಚ್ಚಾಗುತ್ತೆ? ಬೆಂಗಳೂರಲ್ಲಿ ನೀರಿನ ದರ ಏರಿಕೆ ಸಾಧ್ಯತೆ, ಎಷ್ಟು ಹೆಚ್ಚಾಗುತ್ತೆ?

ಬೆಳಗಾವಿ, ಕಲಬುರಗಿ, ಬೆಂಗಳೂರು, ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರಿಗೆ ಹಾಗೂ ಬೆಂಗಳೂರಿನ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಕಾವೇರಿ ನಿರಾವರಿ ನಿಗಮ ನಿಯಮಿತ, ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಿಗೆ ಬೇಸಿಗೆ ಬೆಳೆಗೆ ರೈತರಿಗೆ ನೀರು ಬಿಡದಂತೆ ಸೂಚಿಸಲಾಗಿದೆ.

Water Resources Department has instructed not to release water to the summer crops

2018ರ ಡಿಸೆಂಬರ್ 16ರಂದು ಕಂದಾಯ ಸಚಿವರ ಅಧ್ಯಕ್ಷತೆಯ ಸಚಿವ ಸಂಪುಟ ಉಪ ಸಮಿತಿಯ ಸಭೆಯಲ್ಲಿ ಮಳೆ ಕೊರತೆಯ ಹಿನ್ನೆಲೆಯಲ್ಲಿ ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಲಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಜಲಾಶಯದ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲು ನಿರ್ಣಯಿಸಲಾಗಿದೆ.

 ಬೆಂಗಳೂರಿನ ಜನರಿಗೆ ಶೀಘ್ರದಲ್ಲೇ ತಟ್ಟಲಿದೆ ನೀರಿನ ದರ ಏರಿಕೆ ಬಿಸಿ ಬೆಂಗಳೂರಿನ ಜನರಿಗೆ ಶೀಘ್ರದಲ್ಲೇ ತಟ್ಟಲಿದೆ ನೀರಿನ ದರ ಏರಿಕೆ ಬಿಸಿ

ಮುಂಬರುವ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆ ಉಂಟಾಗುವುದನ್ನು ತಪ್ಪಿಸಲು, ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ವ್ಯವಸ್ಥಿತವಾಗಿ ಆದ್ಯತೆಯ ಮೇರೆಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಬಳಸಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.

English summary
Water level in some reservoirs in the state has declined. Therefore, the Karnataka Water Resources Department has instructed not to release water to the summer crops.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X