ಕಾವೇರಿ 5ನೇ ಹಂತದ ನೀರು ಸರಬರಾಜಿನಲ್ಲಿ ತಾತ್ಕಾಲಿಕ ವ್ಯತ್ಯಯ: BWSSB
ಬೆಂಗಳೂರು, ಮೇ 28: ಅತೀ ದೊಡ್ಡ ಕುಡಿಯುವ ನೀರಿನ ಯೋಜನೆಯಾದ ಕಾವೇರಿ ಹಂತ 5ಕ್ಕೆ ಇತ್ತೀಚೆಗೆ ರಾಜ್ಯ ಸರ್ಕಾರ ಹಾಗೂ ಜಲಮಂಡಳಿ ಅಧಿಕಾರಿಗಳು ಚಾಲನೆ ನೀಡಿದ್ದರು. ಟಿಕೆ ಹಳ್ಳಿ ಬಳಿ ನಂಜಾಪುರ ಗ್ರಾಮದ ಬಳಿ ಇರುವ ಕಾವೇರಿ ಹಂತ 5ರ ಪ್ರಮುಖ ಪೈಪ್‌ಲೈನ್‌ನ ಸ್ಕೌರ್ ವಾಲ್ವ್‌ನಲ್ಲಿ ಬುಧವಾರ ಬೆಳಿಗ್ಗೆ ತಾಂತ್ರಿಕ ದೋಷ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ, ನೀರು ಸರಬರಾಜು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ದುರಸ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಮಂಡಳಿ (BWSSB) ಅಪ್ಡೇಟ್ ನೀಡಿದೆ.
ಪ್ರಮುಖವಾದ ಈ ವಾಲ್ವ್ ದೋಷದಿಂದಾಗಿ, ಹಂತ 5ರ ಮೂಲಕ ಸರಬರಾಜಾಗುವ ನೀರಿನಲ್ಲಿ ಕೆಲ ಹೊತ್ತು ವ್ಯತ್ಯಯ ಉಂಟಾಗಲಿದೆ. ಮಳೆಯ ನಡುವೆಯೂ ತಕ್ಷಣ ಕಾರ್ಯಾರಂಭ ಮಾಡಿದ ತಾಂತ್ರಿಕ ಸಿಬ್ಬಂದಿ, ಮಧ್ಯಾಹ್ನದೊಳಗೆ ಹೊಸ ವಾಲ್ವ್ ಅಳವಡಿಸುವ ಕೆಲಸವನ್ನು ಪೂರ್ಣಗೊಳಿಸುವ ಗುರಿಯೊಂದಿಗೆ ಶ್ರಮಿಸುತ್ತಿದ್ದಾರೆ.

ಜಲಮಂಡಳಿ ಈ ತಾತ್ಕಾಲಿಕ ಅಡಚಣೆಗೆ ವಿಷಾದ ವ್ಯಕ್ತಪಡಿಸಿದ್ದು, ಸಾರ್ವಜನಿಕರ ಸಹಕಾರವನ್ನು ಕೋರಿದೆ. ಸ್ಥಳದಲ್ಲೇ ತಾಂತ್ರಿಕ ತಂಡ ಕಾರ್ಯ ನಿರ್ವಹಿಸುತ್ತಿದ್ದು, ನೀರು ಸರಬರಾಜು ಶೀಘ್ರದಲ್ಲಿ ಪುನಃಸ್ಥಾಪನೆಯಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಭರವಸೆ ನೀಡಿದೆ.
120 ಕಿಲೋ ಮೀಟರ್ ದೂರದಿಂದ ನೀರು ಪೂರೈಕೆ
ಬೆಂಗಳೂರಿಗೆ ಕುಡಿಯುವ ನೀರೊದಗಿಸಬಲ್ಲ 4336 ಕೋಟಿ ರೂಪಾಯಿ ವೆಚ್ಚದ ಬೃಹತ್ ಯೋಜನೆಯಾದ ಕಾವೇರಿ ಐದನೇ ಹಂತದ ಯೋಜನೆಯು ನಿರ್ಣಾಯಕವಾಗಿದೆ. ಸುಮಾರು 120 ಕಿಲೋ ಮೀಟರ್ ದೂರದಿಂದ ಬೆಂಗಳೂರಿಗೆ ಪೈಪ್‌ಲೈನ್ ಮೂಲಕ ನೀರು ಸರಬರಾಜಿಗೆ ಸರ್ಕಾರ ಕ್ರಮ ಕೈಗೊಂಡಿತ್ತು. ಅಂದುಕೊಂಡಂತೆ ಅದ್ಧೂರಿ ಕಾರ್ಯಕ್ರಮದಲ್ಲಿ ಈ ಯೋಜನೆ ಲೋಕಾರ್ಪಣೆಗೊಂಡಿತು.
ಸುಮಾರು ಏಳು ತಿಂಗಳ ಹಿಂದೆ ಲೋಕಾರ್ಪಣೆಗೊಂಡ ಯೋಜನೆಯಲ್ಲಿ ಸಣ್ಣ ದೋಷ ಕಂಡು ಬಂದಿದೆ. ಶೀಘ್ರವೇ ಸರಿಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿದಂತೆ 110 ಹಳ್ಳಿಗಳಿಗೆ ಕುಡಿಯುವ ನೀರನ್ನು ಒದಗಿಸುವ ಉದ್ದೇಶ ಸರ್ಕಾರ ಹೊಂದಿದೆ. ಈ ಯೋಜನೆಯಿಂದ ಒಟ್ಟು ಸುಮಾರು ನಾಲ್ಕು ಲಕ್ಷ ಜನರಿಗೆ ಕುಡಿಯುವ ನೀರನ್ನು ಒದಗಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಾಲಿ 1450 ಎಂಎಲ್ ಡಿ ಕಾವೇರಿ ನೀರನ್ನು ನಿತ್ಯ ಪೂರೈಕೆ ಆಗುತ್ತಿದೆ. ಈ ಹೊಸ ಯೋಜನೆಯಿಂದ ಬೆಂಗಳೂರಿಗೆ ಹೆಚ್ಚುವರಿ ನೀರು ಸಿಗಲಿದೆ ಎಂದು ಈ ಹಿಂದೆ ಜಲಮಂಡಳಿ ತಿಳಿಸಿತ್ತು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications