ಕುಮಾರಸ್ವಾಮಿ ಸ್ಪಷ್ಟ ಬಹುಮತ ಕಳೆದುಕೊಂಡಿದ್ದಾರೆ: ಯಡಿಯೂರಪ್ಪ
Recommended Video
ಬೆಂಗಳೂರು, ಜುಲೈ 13: ಕುಮಾರಸ್ವಾಮಿ ಬಹುಮತ ಕಳೆದುಕೊಂಡಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಅದ್ಯಾವ ಧೈರ್ಯದಲ್ಲಿ ಬಹುಮತ ಸಾಬೀತು ಪಡಿಸಲು ಹೊರಟಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.
ಒಂದೆಡೆ ರಾಜೀನಾಮೆ ಅರ್ಜಿಯನ್ನು ಪುರಸ್ಕರಿಸುವಂತೆ ಕೋರಿ ಶಾಸಕರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಪಕ್ಷೇತರ ಶಾಸಕರು ಅಧಿವೇಶದಲ್ಲಿ ವಿರೋಧ ಪಕ್ಷದವರ ಜೊತೆ ಕುಳಿತುಕೊಳ್ಳಲು ಅವಕಾಶ ಮಾಡಿಕೊಡುವಂತೆ ಸ್ಪೀಕರ್ ರಮೇಶ್ ಕುಮಾರ್‌ಗೆ ಮನವಿ ಮಾಡಿದ್ದಾರೆ. ಒಟ್ಟು 18 ಶಾಸಕರ ಬಹುಮತವನ್ನು ಕುಮಾರಸ್ವಾಮಿ ಕಳೆದುಕೊಂಡಿದ್ದಾಗಿದೆ. ಇನ್ನೂ ಯಾವ ಭರವಸೆ ಮೇಲೆ ಅವರು ನಿಂತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ಹೌದು ಬೆಳಗ್ಗೆಯಿಂದಲೂ ಎಂಟಿಬಿ ಮನೆಯಲ್ಲಿ ಸಚಿವ ಡಿಕೆ ಶಿವಕುಮಾರ್ ಮನವೊಲಿಸುವ ಪ್ರಯತ್ನದಲ್ಲಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ಎಂಟಿಬಿ ನಾಗರಾಜ್ ಹಾಗೂ ಸುಧಾಕರ್ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸಾಧ್ಯತೆಗಳಿಲ್ಲ ಎನ್ನುವ ಭರವಸೆ ನನಗಿದೆ ಎಂದರು.

ಸದನದ ಶಾಸಕರ ಬೆಂಬಲವಿಲ್ಲದೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಷ್ಟ ಪಡುವುದಿಲ್ಲ ಎಂದಿದ್ದರು.ಹಾಗಾಗಿ ಕಲಾಪ ಕೂಡ ಈಗ ನಡೆಯುವುದಿಲ್ಲ. ಸೋಮವಾರದ ವರೆಗೆ ಕಾಯುತ್ತೇವೆ, ಮಂಗಳವಾರ ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮುಂದಿನ ನಿರ್ಧಾರವನ್ನು ಘೋಷಿಸುತ್ತೇವೆ.












Click it and Unblock the Notifications