ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಚುನಾವಣೆ: ಸುಪ್ರೀಂಕೋರ್ಟ್ ಮೊರೆ ಹೋಗಲು ನಿರ್ಧಾರ!

|
Google Oneindia Kannada News

ಬೆಂಗಳೂರು, ಡಿ. 04: ಬಿಬಿಎಂಪಿ ಚುನಾವಣೆ ಕುರಿತಂತೆ ಹೈಕೋರ್ಟ್‌ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಾಗಿ ಡಿಸಿಎಂ ಡಾ. ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ಕೊಟ್ಟಿರುವ ಅವರು, ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

ಬಿಬಿಎಂಪಿಗೆ ಪ್ರತ್ಯೇಕ ಕಾಯ್ದೆ ರೂಪಿಸುವುದಾಗಿ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿಯೆ ಭರವಸೆ ನೀಡಲಾಗಿತ್ತು. ಮುಂಬರುವ ಅಧಿವೇಶನದಲ್ಲೇ ವಿಧೇಯಕ ಮಂಡನೆ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಡಾ. ಅಶ್ವಥ್ ನಾರಾಯಣ್ ಹೇಳಿದ್ದಾರೆ.

198 ವಾರ್ಡ್ ಗಳಿಗೆ ಬಿಬಿಎಂಪಿ ಚುನಾವಣೆ ಆರು ವಾರದಲ್ಲಿ ಪ್ರಕಟಿಸಿ : ಹೈಕೋರ್ಟ್‌ ತೀರ್ಪು 198 ವಾರ್ಡ್ ಗಳಿಗೆ ಬಿಬಿಎಂಪಿ ಚುನಾವಣೆ ಆರು ವಾರದಲ್ಲಿ ಪ್ರಕಟಿಸಿ : ಹೈಕೋರ್ಟ್‌ ತೀರ್ಪು

ಬಿಬಿಎಂಪಿ ಚುನಾವಣೆ ಕುರಿತಂತೆ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಮಹತ್ವದ ಸೂಚನೆ ನೀಡಿದೆ. ಬಿಬಿಎಂಪಿ ವಾರ್ಡ್ ಪುನರ್ ವಿಂಗಡನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆಯನ್ನು ಮುಂದೂಡಲು ರಾಜ್ಯ ಸರ್ಕಾರ ಪ್ರಯತ್ನ ನಡೆಸಿತ್ತು. ಆದರೆ ಇದೀಗ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಬರುವ ವರ್ಷದ ಫೆಬ್ರುವರಿ ಅಥವಾ ಮಾರ್ಚ್‌ ತಿಂಗಳಿನಲ್ಲಿ ಬಿಬಿಎಂಪಿ ಚುನಾವಣೆ ನಡೆಯುವುದು ಖಚಿತವಾಗಿದೆ.

We Decided to Appeal in Supreme Court Against HC Order on BBMP Elections: DCM Ashwath Narayan

ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್‌ಗಳಿಗೆ ಒಂದು ತಿಂಗಳಿನಲ್ಲಿ ಮೀಸಲಾತಿ ಅಧಿಸೂಚನೆ ಹೊರಡಿಸಬೇಕು. ನಂತರ ಆರು ವಾರಗಳಲ್ಲಿ ಚುನಾವಣೆ ಪ್ರಕ್ರಿಯೆ ನಡೆಸಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ. ಬಿಬಿಎಂಪಿ ಚುನಾವಣೆಯನ್ನು ಶೀಘ್ರ ನಡೆಸಬೇಕು ಎಂದು ಮಾಜಿ ಕಾರ್ಪೊರೇಟರ್‌ಗಳಾಗ ಎಂ. ಶಿವರಾಜ್ ಹಾಗೂ ಅಬ್ದಲ್ ವಾಜೀದ್ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.

Recommended Video

ನಾಳೆ ಬಂದ್ ಮಾಡುವವರಿಗೆ ಕಿವಿ ಮಾತು ಹೇಳಿದ ಮುಖ್ಯಮಂತ್ರಿಗಳು | Oneindia Kannada

ಕಳೆದ ಜೂನ್ ತಿಂಗಳಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಯಂತೆ 198 ವಾರ್ಡ್‌ಗಳಿಗೆ ಚುನಾವನೆ ನಡೆಸುವಂತೆ ಕೋರ್ಟ್‌ ತೀರ್ಪಿನಲ್ಲಿ ತಿಳಿಸಲಾಗಿದೆ. ಹೀಗಾಗಿ ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಏರಿಸುವ ಸರ್ಕಾರದ ಚಿಂತನೆಗೆ ಹೈಕೋರ್ಟ್‌ ಸಧ್ಯ ತಡೆ ಹಾಕಿದಂತಾಗಿದೆ.

English summary
DCM Ashwath Narayan said that it we will appeal to the Supreme Court challenging the High Court verdict on the BBMP election. Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X