ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈತ್ರಿ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವುದಿಲ್ಲ: ಯಡಿಯೂರಪ್ಪ

|
Google Oneindia Kannada News

ಬೆಂಗಳೂರು, ಫೆಬ್ರವರಿ 06: ಬಿಜೆಪಿಯು ಬಜೆಟ್ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸುತ್ತದೆ ಎಂದೇ ಊಹಿಸಲಾಗಿತ್ತು ಆದರೆ ಯಡಿಯೂರಪ್ಪ ಈ ಸುದ್ದಿಯನ್ನು ಅಲ್ಲಗಳೆದಿದ್ದಾರೆ.

ಅಧಿವೇಶನದ ಬಳಿಕ ಮಾತನಾಡಿದ ಅವರು, 'ನಾವು ಅವಿಶ್ವಾಸ ಗೊತ್ತುವಳಿ ಮಂಡಿಸುವುದಿಲ್ಲ, ಸರ್ಕಾರ ತಾನಾಗಿಯೇ ಬಿದ್ದು ಹೋಗುವ ಸ್ಥಿತಿಯಲ್ಲಿದೆ ಎಂದು ಹೇಳಿದ್ದಾರೆ.

ಆಪರೇಷನ್ ಕಮಲ : ಮುಂಬೈನಲ್ಲಿದ್ದಾರೆ ಅತೃಪ್ತ ಕಾಂಗ್ರೆಸ್ ಶಾಸಕರುಆಪರೇಷನ್ ಕಮಲ : ಮುಂಬೈನಲ್ಲಿದ್ದಾರೆ ಅತೃಪ್ತ ಕಾಂಗ್ರೆಸ್ ಶಾಸಕರು

ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಅಧಿಕಾರದಲ್ಲಿರಲು ನೈತಿಕ ಹಕ್ಕಿಲ್ಲ, ಅವರು ರಾಜ್ಯಪಾಲರಿಂದ ಸುಳ್ಳು ಭಾಷಣ ಮಾಡಿಸಲು ಹೊರಟಿದ್ದರು, ಹಾಗಾಗಿಯೇ ನಾವು ಅವರ ಭಾಷಣಕ್ಕೆ ಅಡ್ಡಿ ಪಡಿಸಿದೆವು ಎಂದು ಯಡಿಯೂರಪ್ಪ ಅವರು ಹೇಳಿದರು.

We did not raise no confidence motion: Yeddyurappa

ಕಾಂಗ್ರೆಸ್‌ನ ಶಾಸಕರಿಗೆ ಕುಮಾರಸ್ವಾಮಿ ಸಿಎಂ ಆಗಿರುವುದು ಇಷ್ಟವಿಲ್ಲ, ದಿನಕ್ಕೊಬ್ಬರು ನಮ್ಮ ಸಿಎಂ ಸಿದ್ದರಾಮಯ್ಯ ಎನ್ನುತ್ತಿದ್ದಾರೆ, ಕುಮಾರಸ್ವಾಮಿಗೆ ಕೆಲಸ ಮಾಡಲೂ ಬಿಡುತ್ತಿಲ್ಲ, ಇದು ಸರ್ಕಾರ ನಡೆಸುವ ವಿಧಾನವೇ ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದರು.

ಮೊದಲ ದಿನದ ಅಧಿವೇಶನದಲ್ಲಿ ಬಿಜೆಪಿಯು ಸದನದ ಬಾವಿಗಿಳಿದು ಮೈತ್ರಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿತು. ರಾಜ್ಯಪಾಲರ ಭಾಷಣಕ್ಕೂ ಅಡ್ಡಿಪಡಿಸಿತು.

ಬಜೆಟ್ ಮಂಡನೆ ದಿನವೇ ಸಿಎಲ್‌ಪಿ ಸಭೆ ಕರೆದ ಸಿದ್ದರಾಮಯ್ಯ!ಬಜೆಟ್ ಮಂಡನೆ ದಿನವೇ ಸಿಎಲ್‌ಪಿ ಸಭೆ ಕರೆದ ಸಿದ್ದರಾಮಯ್ಯ!

ಕಾಂಗ್ರೆಸ್‌ನ ಶಾಸಕರನ್ನು ಸದನಕ್ಕೆ ಗೈರಾಗಿಸಿ ಬಜೆಟ್‌ಗೆ ಅನುಮೋದನೆ ಸಿಗದಂತೆ ಮಾಡಿ, ಬಿಜೆಪಿಯು ಅವಿಶ್ವಾಸ ಗೊತ್ತುವಳಿ ಮಂಡಿಸುತ್ತದೆ ಎನ್ನಲಾಗಿತ್ತು ಆದರೆ ಯಡಿಯೂರಪ್ಪ ಅವರು ಅದನ್ನು ಅಲ್ಲಗಳೆದಿದ್ದಾರೆ. ಹಾಗಿದ್ದರೆ ಬಿಜೆಪಿಯ ಮುಂದಿನ ನಡೆ ಏನಾಗಿರಲಿದೆ ಎಂಬುದು ಕುತೂಹಲ ಕೆರಳಿಸಿದೆ.

English summary
We did not mention no confidence motion says opposition party leader Yeddyurappa. He said government will collapse by its own.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X