ಯಡಿಯೂರಪ್ಪರಿಗಾಗಿ ಬಿಜೆಪಿಗೆ ಬಂದಿದ್ದೇವೆ: ಎಚ್.ವಿಶ್ವನಾಥ್
ಬೆಂಗಳೂರು, ಜನವರಿ 08: ಸಚಿವ ಸ್ಥಾನ ನೀಡುವುದು ಬಿಜೆಪಿ ಹೈಕಮಾಂಡ್ ಗೆ ಬಿಟ್ಟ ವಿಚಾರ. ಕರ್ನಾಟಕದಲ್ಲಿ ಕೊಟ್ಟ ಮಾತಿನಂತೆ ನಡೆಯುವ ಏಕೈಕ ನಾಯಕ ಯಡಿಯೂರಪ್ಪ. ಅವರನ್ನು ನಂಬಿ ಪಕ್ಷಕ್ಕೆ ಬಂದಿದ್ದೇವೆ ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಹೇಳಿದರು.
ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ವಿಶ್ವನಾಥ್, ಜನವಿರೋಧಿ ಮೈತ್ರಿ ಸರ್ಕಾರದಲ್ಲಿ ಪ್ರಜಾಪ್ರಭುತ್ವ ಸಿಕ್ಕು ನಲುಗಿ ಹೋಗುತ್ತಿರುವುದನ್ನು ಬಿಡುಗಡೆಗೊಳಿಸಲು ನಾವು 17 ಜನ ಶಾಸಕರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಯಿತೇ ಹೊರತು ಯಾವುದೇ ಅಧಿಕಾರದ ಆಸೆಯಿಂದ ರಾಜೀನಾಮೆ ನೀಡಲಿಲ್ಲ ಎಂದರು.
ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ, ಅಲ್ಲಿನ ಹಲವು ಶಾಸಕರು ಬೇರೆ ಪಕ್ಷಕ್ಕೆ ಹೋಗುವುದು ಖಚಿತ ಎಂದರಲ್ಲದೇ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನ್ನು ನಂಬುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಿಜೆಪಿಯ 30 ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಹೇಳುತ್ತಿದ್ದಾರೆ ಇದು ಸತ್ಯಕ್ಕೆ ದೂರವಾದ ವಿಚಾರ. ತನ್ನ ಪಕ್ಷ ಶಾಸಕರೇ ಅವರನ್ನು ನಂಬುವುದಿಲ್ಲ ಇನ್ನು ಬೇರೆಯವರು ನಂಬುತ್ತಾರಾ ಎಂದು ಪ್ರಶ್ನಿಸಿದರು.
ಜಡೆಎಸ್ ಪಕ್ಷ ಕಟ್ಟುವಲ್ಲಿ ಕುಮಾರಸ್ವಾಮಿ ಪಾತ್ರ ಎಳ್ಳಷ್ಟು ಇಲ್ಲ, ಮಾಜಿ ಪ್ರಧಾನಿ ದೇವೇಗೌಡರೇ ಏಕಾಂಗಿಯಾಗಿ ಪಕ್ಷ ಕಟ್ಟಿದ್ದಾರೆ. ಅವರ ಹಾಕಿದ ಶ್ರಮದಿಂದಲೇ ಇಂದು ಅವರ ಮಕ್ಕಳು ಅಧಿಕಾರ ಅನುಭವಿಸುವಂತಾಗಿದೆ ಎಂದು ತಿಳಿಸಿದರು.












Click it and Unblock the Notifications