ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ 5 ಪಾಲಿಕೆ ರಚನೆ: ಚುನಾವಣಾ ದಿನಾಂಕ ಫಿಕ್ಸ್- ಮಹತ್ವದ ಮಾಹಿತಿ, ವಿವರ ತಿಳಿಯಿರಿ
ಬೆಂಗಳೂರು, ಜುಲೈ15: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಕರ್ನಾಟಕದ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಸರ್ಕಾರ ಭರ್ಜರಿ ಸಿದ್ದತೆ ನಡೆಸುತ್ತಿದೆ. ಬೆಂಗಳೂರು ಪಾಲಿಕೆಯ ಚುನಾವಣೆಯು ಕಳೆದ ಐದು ವರ್ಷಗಳಿಂದ ನಡೆದಿಲ್ಲ. ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಪಾಲಿಕೆ ರಚನೆ ಮಾಡಿ, ಶೀಘ್ರವೇ ಚುನಾವಣೆ ನಡೆಸುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಹತ್ವದ ಮಾಹಿತಿಯನ್ನ ಹಂಚಿಕೊಂಡಿದ್ದಾರೆ.
ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಜಿಬಿಎ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ. ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ. ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು. ನಮ್ಮ ಭವಿಷ್ಯ, ಬೆಂಗಳೂರು ಭವಿಷ್ಯ ನಿಮ್ಮ ಕೈಯಲ್ಲಿದೆ ಎಂದರು.
ನಮ್ಮ ಸರ್ಕಾರ ಸಮಾಜ ಹಾಗೂ ಬಡವರ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೂಪಾಯಿ ಹಣ ನೀಡಿದೆ. 50 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚವಾದರೆ, 19 ಸಾವಿರ ಕೋಟಿ ಹಣವನ್ನು ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಸುಮಾರು 11 ಸಾವಿರ ಕೋಟಿಯನ್ನು ಪಿಂಚಣಿಗಳಿಗೆ ವೆಚ್ಚ ಮಾಡಲಾಗುತ್ತಿದೆ. ರಾಜ್ಯ ಬಜೆಟ್ಟಿನ 25% ಹಣವನ್ನು ಜನರಿಗೆ ನೀಡುತ್ತಿದ್ದೇವೆ. ಈ ಉಪಕಾರ ಸ್ಮರಣೆಯನ್ನು ಜನರಿಗೆ ಮನದಟ್ಟು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದರು.
ಈ ದೇಶದ ಇತಿಹಾಸದಲ್ಲಿ ಕಾಂಗ್ರೆಸ್ ನೀಡಿರುವ ಹಲವಾರು ಕಾರ್ಯಕ್ರಮಗಳನ್ನು ಯಾರೂ ಸಹ ನಿಲ್ಲಸಲು ಸಾಧ್ಯವಿಲ್ಲ. ಉಳುವವನೆ ಭೂಮಿಯ ಒಡೆಯ, ಅಂಗನವಾಡಿ, ಆಶಾ, ನರೇಗಾ ಹೀಗೆ ನೂರಾರು ಕಾರ್ಯಕ್ರಮಗಳು ಕಾಂಗ್ರೆಸ್ ಜನರಿಗೆ ನೀಡಿರುವ ಶಕ್ತಿ. ಅರಣ್ಯ ಭೂಮಿ ಹಕ್ಕು, ಆಹಾರ ಭದ್ರತಾ ಕಾಯ್ದೆಗಳನ್ನು ಬಿಜೆಪಿಯವರು ಬದಲಾವಣೆ ಮಾಡಲು ಸಾಧ್ಯವಾಯಿತೇ? ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಿದ್ದು ಬಂಗಾರಪ್ಪ ಅವರು. ನಾವು ಯಾವುದೇ ರಾಜಕೀಯ ದೃಷ್ಟಿ ಇಟ್ಟುಕೊಂಡು ನಾವು ಕೆಲಸ ಮಾಡುತ್ತಿಲ್ಲ.
ಜನರ ಅಭಿವೃದ್ದಿಗಾಗಿ ಕೆಲಸ ಮಾಡುತ್ತಿದ್ದೇವೆ. ಬ್ಯಾಂಕ್ ಗಳ ರಾಷ್ಟ್ರೀಕರಣದಿಂದ ಬ್ಯಾಂಕ್ ಗಳೇ ಮನೆ ಬಾಗಿಲಿಗೆ ಬಂದಿವೆ. ಬಿಸಿಯೂಟ, ಅನ್ನಭಾಗ್ಯ ಇದೆಲ್ಲವೂ ಕ್ರಾಂತಿಕಾರಕ ಯೋಜನೆಗಳು. ಹಟ್ಟಿ, ತಾಂಡಾಗಳಲ್ಲಿ ವಾಸವಿರುವ ಜನರು ಯಾವುದೇ ಭೂ ದಾಖಲೆಗಳನ್ನು ಹೊಂದಿರಲಿಲ್ಲ. ಅವರಿಗೆಲ್ಲ ಉಚಿತವಾಗಿ ಭೂ ದಾಖಲೆಗಳನ್ನು ನೀಡಲಾಗುತ್ತಿದೆ. ಇತ್ತೀಚೆಗೆ 1,11,111 ದಾಖಲೆಗಳನ್ನು ನೀಡಲಾಯಿತು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ










Click it and Unblock the Notifications