Bengaluru Second Airport: ಎರಡನೇ ವಿಮಾನ ನಿಲ್ದಾಣ ನಿಮಾರ್ಣವಾಗಲು ಬರೋಬ್ಬರಿ 9 ವರ್ಷ ಬೇಕಂತೆ : ಕಾರಣವೇನು?

ಬೆಂಗಳೂರು, ಮಾರ್ಚ್‌ 22: ರಾಜ್ಯದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಭವಿಷ್ಯದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎರಡನೇ ವಿಮಾನ ನಿಲ್ದಾಣ ಯೋಜನೆಗೆ ನಿರ್ಧರಿಸಿದೆ. ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ವರ್ಷಕ್ಕೆ 10 ಕೋಟಿ ಜನರನ್ನು ನಿರ್ವಹಿಸಲಿದೆ. ಇನ್ನೂ ಏರ್‌ಪೋರ್ಟ್‌ ನಿರ್ಮಾಣಕ್ಕೆ ಸಮದಟ್ಟಾದ ಭೂಮಿಯ ಅವಶ್ಯಕತೆ ಇದೆ. ಸರ್ಕಾರದ ಭೂಮಿ ಹೆಚ್ಚಿರೋ ಕಡೆ ಏರ್‌ಪೋರ್ಟ್‌ ನಿರ್ಮಿಸಿದರೆ ನಿರ್ಮಾಣ ವೆಚ್ಚ ಕಡಿಮೆಯಾಗಲಿದೆ. ಆದರೆ, ಸರ್ಕಾರ ಎರಡನೇ ವಿಮಾಣ ನಿಲ್ದಾಣ ನಿರ್ಮಾಣದ ವೇಗ ಹೆಚ್ಚಾದರೂ, ಹೊಸ ಏರ್‌ಪೋರ್ಟ್‌ ನಿರ್ಮಾಣಕ್ಕೆ ಬರೋಬ್ಬರಿ 9 ವರ್ಷ ಕಾಯಬೇಕಾಗಿದೆ.

ಹೌದು, ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ರಾಜ್ಯ ಸರ್ಕಾರ ವೇಗ ನೀಡಿದ್ದು,ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರೋಬ್ಬರಿ 9 ವರ್ಷ ಕಾಯಬೇಕಾಗಿದೆ. ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸ್ಥಳ ಆಯ್ಕೆಯನ್ನು ಫೈನಲ್‌ ಮಾಡಿದ್ದು, ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆ ಕೂಡ ಸಲ್ಲಿಸಿದೆ. ಒಟ್ಟು ಮೂರು ಸ್ಥಳಗಳನ್ನು ಏರ್‌ಪೋರ್ಟ್‌ ನಿರ್ಮಾಣಕ್ಕೆ ಶಾರ್ಟ್‌ ಲಿಸ್ಟ್‌ ಮಾಡಿದ್ದು, ಇದನ್ನು ನೋಡಿದರೆ ತಮಿಳುನಾಡಿನ ಹೊಸೂರು ಏರ್‌ಪೋರ್ಟ್‌ಗೆ ಸೆಡ್ಡು ಹೊಡೆಯಲು ಸರ್ಕಾರ ಮುಂದಾಗಿರುವುದು ಸ್ಪಷ್ಟವಾಗಿದೆ.

We Will Have To Wait Another 9 Years To Build A Bengaluru Second Airport

ಇದಕ್ಕಾಗಿ ಕನಕಪುರ ರಸ್ತೆಯಲ್ಲಿ 2 ಸ್ಥಳ ಹಾಗೂ ನೆಲಮಂಗಲ ಹಾಸನ ಹೆದ್ದಾರಿ ಸಮೀಪ ಇನ್ನೊಂದು ಸ್ಥಳಗಳನ್ನು ಆಯ್ಕೆ ಮಾಡಿದೆ. ಈ ಮೂರು ಸ್ಥಳದಲ್ಲಿ ಯಾವುದು ಬೆಸ್ಟ್‌ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ. ಆದರೆ, ಬೆಂಗಳೂರಿನ ಎಲ್ಲ ಭಾಗಗಳಿಗೆ ವಿಶೇಷವಾಗಿ ಐಟಿ -ಬಿಟಿ ಕಂಪನಿಗಳಿಗೆ ಅನುಕೂಲವಾಗುವಂತೆ ಬೆಂಗಳೂರಿನ ದಕ್ಷಿಣ ಭಾಗದಲ್ಲಿಯೇ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಕುರಿತು ಮಾತುಗಳು ಕೇಳಿಬರುತ್ತಿವೆ. ಹೀಗಾಗಿ ರಾಜ್ಯ ಸರ್ಕಾರದ ನಡೆ ನೋಡಿದರೆ ಬೆಂಗಳೂರು ದಕ್ಷಿಣದಲ್ಲಿಯೇ ಹೊಸ ವಿಮಾನ ನಿಲ್ದಾಣ ಆಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಟ್ಟುಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಆದರೂ ಸಹ 9 ವರ್ಷ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ರಾಜ್ಯ ಸರ್ಕಾರಕ್ಕೂ ಒಪ್ಪಂದ ಇದೆ. ಆ ಒಪ್ಪಂದದ ಪ್ರಕಾರ 2033ರವರೆಗೆ ಬೇರೊಂದು ವಿಮಾನ ನಿಲ್ದಾಣ ಮಾಡುವುದಕ್ಕೆ ಅವಕಾಶ ಇಲ್ಲ. 2033ಕ್ಕೆ‌ ಆ ಒಪ್ಪಂದ ಮುಗಿಯುತ್ತೆ. ಒಪ್ಪಂದ ಮುಗಿದ ಬಳಿಕ ಎರಡನೇ ಏರ್ಪೋರ್ಟ್ ಮಾಡಬೇಕಾಗುತ್ತದೆ.

ಈ ಹಿಂದೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಿಸುವಾಗ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಸ್ಥೆಯು (ಬಿಐಎಎಲ್) ಮುಂದಿನ 25 ವರ್ಷಗಳವರೆಗೆ (2033ರವರೆಗೆ) 150 ಕಿಮೀ ವ್ಯಾಪ್ತಿಯಲ್ಲಿ ಹೊಸ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸುವುದಿಲ್ಲ ಎಂದು ಸರ್ಕಾರದೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಈ ಷರತ್ತು ಮುಗಿಯಲು ಇನ್ನೂ ಒಂಬತ್ತು ವರ್ಷ ಕಾಯಬೇಕಾಗಿದೆ. ಆದರೆ, ರಾಜ್ಯ ಸರ್ಕಾರ ಈಗಿನಿಂದಲೇ ಎರಡನೇ ವಿಮಾನನಿಲ್ದಾಣ ನಿರ್ಮಾಣಕ್ಕೆ ಪ್ಲ್ಯಾನ್‌ ಹಾಕಿಕೊಂಡಿದೆ.

ಇನ್ನೂ 2032ರ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜನಸಂದಣಿ ಹೆಚ್ಚಾಗುತ್ತದೆ. ಮತ್ತೊಂದು ಏರ್ಪೋರ್ಟ್ ನ‌ ಅವಶ್ಯಕತೆ ನಮಗೆ ಬೇಕಾಗುತ್ತದೆ ಎಂದು ಮೂಲ ಸೌಕರ್ಯ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ಅವರು ತಿಳಿಸಿದ್ದಾರೆ. ಈಗಾಗಲೇ ಯ ಮುಂಬೈ, ಗೋವಾ, ದೆಹಲಿಯಲ್ಲೂ ಹೊಸ ವಿಮಾನ ನಿಲ್ದಾಣ ಓಪನ್‌ ಆಗಿದೆ. ಮುಂದಿನ‌ ದಿನಗಳಲ್ಲಿ‌ ಬೆಂಗಳೂರಿಗೆ ಎರಡನೇ ಏರ್ಪೋರ್ಟ್ ಬೇಕಾಗುತ್ತದೆ ಎಂದು ಸಚಿವ ಎಂ ಬಿ ಪಾಟೀಲ್‌ ಅವರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+